ಪತ್ರಕರ್ತ ನಿಖಿಲ್ ವಾಘ್ಲೆ ಮೇಲೆ ಬಿಜೆಪಿ ದೂರು: ಪುಣೆಯಲ್ಲಿ ಎಫ್‌ಐಆರ್ ದಾಖಲು

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಇತ್ತೀಚೆಗೆ ಭಾರತರತ್ನ ಪ್ರಶಸ್ತಿ ಪಡೆದ ಬಿಜೆಪಿ ಮುಖಂಡ ಎಲ್‌ಕೆ ಅಡ್ವಾಣಿ ಕುರಿತು ಅವಹೇಳನಕಾರಿ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಆರೋಪದಲ್ಲಿ ಹಿರಿಯ ಪತ್ರಕರ್ತ ನಿಖಿಲ್ ವಾಘ್ಲೆ ಮೇಲೆ ಪುಣೆಯ ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

- Advertisement -

ಬಿಜೆಪಿ ಸಲ್ಲಿಸಿದ ದೂರಿನಲ್ಲಿ, ಎರಡು ಸಮುದಾಯಗಳ ನಡುವೆ ಶತ್ರುತ್ವ ಉತ್ತೇಜಿಸುವುದು ಮತ್ತು ನಾಯಕರ ಅವಹೇಳನ ಮಾಡಿರುವುದು ಮೊದಲಾದ ಆರೋಪಗಳನ್ನು ನಿಖಿಲ್ ಮೇಲೆ ಹೊರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶುಕ್ರವಾರ ಪುಣೆಯಲ್ಲಿ ನಿಖಿಲ್ ಭಾಗವಹಿಸಲಿದ್ದ ಕಾರ್ಯಕ್ರಮಕ್ಕೆ ಅಡಚಣೆ ಮಾಡುವುದಾಗಿ ಬಿಜೆಪಿ ಬೆದರಿಕೆಯನ್ನೂ ಹಾಕಿದೆ.

ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಿಖಿಲ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಬರೆದಿದ್ದರು. ಈ ಅಭಿಪ್ರಾಯವನ್ನು ವಿರೋಧಿಸಿ ಹಿರಿಯ ಬಿಜೆಪಿ ನಾಯಕ ಸುನೀಲ್ ಡಿಯೋಡಾರ್ ಅವರು ಶುಕ್ರವಾರ ವಿಶ್ರಾಮ್‌ಬಾಗ್ ಪೊಲೀಸ್ ಠಾಣೆಯಲ್ಲಿ ನಿಖಿಲ್ ವಿರುದ್ಧ ದೂರು ದಾಖಲಿಸಿದ್ದಾರೆ.

ವಾಘ್ಲೆ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153 ಎ (ವಿಭಿನ್ನ ಗುಂಪುಗಳ ನಡುವೆ ಶತ್ರುತ್ವ ಪ್ರಚೋದನೆ), ಸೆಕ್ಷನ್ 500 (ಅವಹೇಳನ ಮಾಡಿರುವುದು) ಹಾಗೂ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ದೂರು ದಾಖಲಾಗಿದೆ.

‘ನಿರ್ಭಯ್ ಬನೋ’ ಎನ್ನುವ ಕಾರ್ಯಕ್ರಮದಲ್ಲಿ ನಿಖಿಲ್ ಭಾಗವಹಿಸುವ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಬೇಕು ಎಂದು ಬಿಜೆಪಿ ಪುಣೆ ಪೊಲೀಸರಿಗೆ ಮನವಿ ಮಾಡಿದೆ. ಆದರೆ ನಿಖಿಲ್ ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. 

ನಿಖಿಲ್ ವಾಘ್ಲೆ ತಮ್ಮ ಬರಹವನ್ನು ಸಾಮಾಜಿಕ ಜಾಲತಾಣದಿಂದ ಅಳಿಸಲು ನಿರಾಕರಿಸಿದ್ದಾರೆ. “ಇದು ಘೋಷಿಸದ ತುರ್ತುಪರಿಸ್ಥಿತಿ” ಎಂದು ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...