ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆ.ಪಿ ನಡ್ಡಾ

Date:

Advertisements

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಜತೆಗೆ 30 ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ಇದೇ ತಿಂಗಳು ಮುಕ್ತಾಯಗೊಳ್ಳಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದು, ಮುಂದೆ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.

Advertisements

ಜಗತ್ ಪ್ರಕಾಶ್ ನಡ್ಡಾ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುಜರಾತ್ ಸಂಸದ ಸಿ.ಆರ್.ಪಾಟೀಲ್ ಕೂಡ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕರಿಸಲಿರುವ ನಾಯಕರ ತಾತ್ಕಾಲಿಕ ಪಟ್ಟಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಹೆಸರು ಕೇಳಿಬರುತ್ತಿದೆ.

ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ತೆಲಂಗಾಣ ನಾಯಕರಾದ ಬಂಡಿ ಸಂಜಯ್ ಕುಮಾರ್ ಮತ್ತು ಕಿಶನ್ ಕುಮಾರ್ ರೆಡ್ಡಿ, ಪಂಜಾಬ್‌ನ ಬಿಜೆಪಿ ನಾಯಕ ರವನೀತ್ ಬಿಟ್ಟು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ರಾಜಸ್ಥಾನದಿಂದ ಗಜೇಂದ್ರ ಸಿಂಗ್ ಶೇಖಾವತ್, ಜೆಡಿಯು ನಾಯಕರಾದ ಲಾಲನ್ ಸಿಂಗ್ ಮತ್ತು ರಾಮನಾಥ್ ಠಾಕೂರ್, ಮತ್ತು ಗಿರಿರಾಜ್ ಸಿಂಗ್ ಮತ್ತು ನಿತ್ಯಾನಂದ ರೈ ಕೂಡ ಇಂದು ಸಚಿವರಾಗಲಿದ್ದಾರೆ.

ಎಚ್‌ಎಎಂ ಮುಖ್ಯಸ್ಥ ಜಿತನ್ ರಾಮ್ ಮಾಂಝಿ, ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಜಿತಿನ್ ಪ್ರಸಾದ ಮತ್ತು ಲಕ್ಷ್ಮೀಕಾಂತ್ ಬಾಜ್‌ಪೈ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಿರಣ್ ರಿಜಿಜು ಕೂಡ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.

ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ದಕ್ಷಿಣದ ರಾಜ್ಯಗಳಲ್ಲಿ, ಅದರಲ್ಲೂ ನಿರ್ದಿಷ್ಟವಾಗಿ ಕರ್ನಾಟಕದಲ್ಲಿ ವಿಶೇಷವಾಗಿ ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಜೆಡಿಎಸ್ ಗಮನಾರ್ಹ ಬೆಂಬಲವನ್ನು ಹೊಂದಿದೆ. ಇದು ಬಿಜೆಪಿ ತನ್ನ ನೆಲೆಯನ್ನು ಬಲಪಡಿಸುವ ಕಾರ್ಯತಂತ್ರದ ಕ್ರಮವೆಂದು ಪರಿಗಣಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೋದಿಯ ಸಚಿವ ಸಂಪುಟ ಸೇರಲಿದ್ದಾರಾ ಮಹಾರಾಷ್ಟ್ರದ ಸಂಸದೆ ರಕ್ಷಾ ಖಡ್ಸೆ?

ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್ ಮತ್ತು ಸರ್ಬಾನಂದ ಸೋನೋವಾಲ್ ಕೂಡ ಸಂಪುಟಕ್ಕೆ ಸೇರ್ಪಡೆಗೊಳ್ಳಬಹುದು.

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷ 240 ಸ್ಥಾನಗಳನ್ನು ಗೆದ್ದಿದೆ. ಒಟ್ಟು 28 ಸ್ಥಾನಗಳನ್ನು ಹೊಂದಿರುವ ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ನರೇಂದ್ರ ಮೋದಿಗೆ ಬೆಂಬಲ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X