ಹೈಕೋರ್ಟ್ನ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿರುವ ನ್ಯಾ.ಅಭಿಜಿತ್ ಗಂಗೋಪಾಧ್ಯಾಯ ಅವರು, ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಸೇರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಅವರು ತಮ್ಮ ಸಾಲ್ಟ್ ಲೇಕ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ನರೇಂದ್ರ ಮೋದಿಯವರು ಒಳ್ಳೆಯ ಗುಣವಿರುವ ವ್ಯಕ್ತಿ. ದೇಶಕ್ಕಾಗಿ ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವರು ನನ್ನನ್ನು ಸಂಪರ್ಕಿಸಿದ್ದಾರೆ. ಹಾಗಾಗಿ, ಗುರುವಾರ ಬಿಜೆಪಿ ಸೇರುತ್ತೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ತೃಣಮೂಲ ಕಾಂಗ್ರೆಸ್‍ನ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿಯಾಗಿದೆ” ಎಂದು ಅವರು ಹೇಳಿಕೊಂಡಿದ್ದಾರೆ.
#WATCH | Kolkata, West Bengal | Former Calcutta High Court judge Justice Abhijit Gangopadhyay says, “Maybe on 7th (March) in the afternoon. There is a tentative program, when I will join BJP.” pic.twitter.com/IoMosl7PVJ
— ANI (@ANI) March 5, 2024
ಕೊಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ವೇಳೆ ಅಭಿಜಿತ್ ಗಂಗೋಪಾಧ್ಯಾಯ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೀಡಿದ್ದ ತೀರ್ಪುಗಳು ಬಹಳಷ್ಟು ರಾಜಕೀಯ ಚರ್ಚೆಗೂ ಗ್ರಾಸವಾಗಿದ್ದವು.
Former Calcutta High Court judge Abhijit Gangopadhyay on Tuesday (March 5) announced his decision to join the Bharatiya Janata Party (BJP). This development comes after he tendered his resignation in the morning today.
Read more: https://t.co/YEbfYnmFWA#AbhijitGangopadhyay pic.twitter.com/Qm9vvRFGCE— Live Law (@LiveLawIndia) March 5, 2024
“ಪಶ್ಚಿಮ ಬಂಗಾಳದಲ್ಲಿ ಆಡಳಿತದಲ್ಲಿರುವ ಟಿಎಂಸಿ ಪಕ್ಷದ ಲೇವಡಿಯಿಂದ ನಾನು ಈ ನಿರ್ಧಾರ ತೆಗೆದುಕೊಳ್ಳಬೇಕಾಯಿಯು. ನನ್ನ ತೀರ್ಪಿನ ಬಳಿಕ ಅವರ ಅಪಹಾಸ್ಯ ಮತ್ತು ಹೇಳಿಕೆಗಳು ನನ್ನನ್ನು ಈ ಹೆಜ್ಜೆ ಇಡಲು ಪ್ರೇರೇಪಿಸಿತು. ಆಡಳಿತ ಪಕ್ಷ ನನ್ನನ್ನು ಹಲವು ಬಾರಿ ಅವಮಾನಿಸಿದೆ. ಅವರ ವಕ್ತಾರರು ನನ್ನ ಮೇಲೆ ಅಸಂಸದೀಯ ಪದಗಳಿಂದ ದಾಳಿ ನಡೆಸಿದ್ದಾರೆ. ಅವರಿಗೆ ಶಿಕ್ಷಣದ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ” ಎಂದು ಇದೇ ವೇಳೆ ಅಭಿಜಿತ್ ಗಂಗೋಪಾಧ್ಯಾಯ ತಿಳಿಸಿದ್ದಾರೆ.
“ಆಡಳಿತ ಪಕ್ಷದ ನಾಯಕರು ರಾಜಕೀಯ ಅಖಾಡಕ್ಕೆ ಬಂದು ಹೋರಾಡುವಂತೆ ನನಗೆ ಹಲವಾರು ಬಾರಿ ಸವಾಲು ಹಾಕಿದ್ದರು. ಹಾಗಾಗಿ, ಅವರ ಆಸೆಗಳನ್ನು ಪೂರೈಸಲು ನಾನು ಈ ರೀತಿ ಯೋಚಿಸಿದ್ದೇನೆ” ಎಂದು ಅವರು ಹೇಳಿಕೊಂಡಿದ್ದಾರೆ.
ಅಭಿಜಿತ್ ಗಂಗೋಪಾಧ್ಯಾಯ ಕಳೆದ ಭಾನುವಾರ ಜಡ್ಜ್ ಹುದ್ದೆಗೆ ತೊರೆಯುತ್ತಿರುವುದಾಗಿ ಹೇಳಿದ್ದರು. ಆ ಬಳಿಕ ಇಂದು(ಮಂಗಳವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ ಗಂಟೆಗಳ ನಂತರ, ಅದರ ಪ್ರತಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದದ್ರು. ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ತಕ್ಷಣವೇ ರಾಜೀನಾಮೆ ಸ್ವೀಕಕೃತವಾಗಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.
‘Narendra Modi Good Man, BJP Also Approached Me’ : Justice Abhijit Gangopadhyay Announces Plan To Join BJP After Resigning As HC Judge. |@awstika #BJP #CalcuttaHighCourt https://t.co/CqLDA2BNxp
— Live Law (@LiveLawIndia) March 5, 2024
2024ರ ಆಗಸ್ಟ್‌ನಲ್ಲಿ ನಿವೃತ್ತರಾಗಬೇಕಿದ್ದ ನ್ಯಾಯಾಧೀಶರು ಆಡಳಿತಾರೂಢ ಟಿಎಂಸಿ ಮತ್ತು ಅದರ ನಾಯಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪದೇ ಪದೇ ಕಟು ಪದಗಳನ್ನು ಬಳಸಿ ಟೀಕಿಸುತ್ತಿದ್ದರು. ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು. ಅಲ್ಲದೇ ಸರ್ಕಾರದ ವಿರುದ್ಧವೇ ಹರಿಹಾಯುತ್ತಿದ್ದರು. ಇದರಿಂದಾಗಿ ಆಕ್ರೋಶಗೊಂಡಿದ್ದ ಟಿಎಂಸಿ ನಾಯಕರು, ನೀವು ಜಡ್ಜ್ ಹುದ್ದೆಯಲ್ಲಿದ್ದು ರಾಜಕಾರಣ ಮಾಡುವುದಕ್ಕಿಂತ ರಾಜೀನಾಮೆ ನೀಡಿ ಸಕ್ರಿಯ ರಾಜಕೀಯಕ್ಕೆ ಇಳಿಯುವಂತೆ ಅವರಿಗೆ ಸವಾಲು ಹಾಕಿದ್ದರು.
ಇದನ್ನು ಓದಿದ್ದೀರಾ? ರಾಮೇಶ್ವರಂ ಕೆಫೆ ರೀತಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ: ಸಿಎಂ, ಡಿಸಿಎಂಗೆ ಇ-ಮೇಲ್ ಮೂಲಕ ಬೆದರಿಕೆ
ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಮೇ 2018ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ಕೋಲ್ಕತ್ತಾ ಹೈಕೋರ್ಟ್‍ನಲ್ಲಿ ವಕೀಲರಾಗಿದ್ದರು. 2020ರಲ್ಲಿ ಅವರು ಕೋಲ್ಕತ್ತಾ ಹೈಕೋರ್ಟ್‍ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದಿದ್ದರು. 2024ರ ಆಗಸ್ಟ್‌ನಲ್ಲಿ ನಿವೃತ್ತರಾಗಬೇಕಿತ್ತು. ಅದಕ್ಕೂ ಮೊದಲೇ ಹುದ್ದೆ ತೊರೆದು, ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.