ಕೋವಿಡ್ ಹಗರಣ | ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ : ಬಿಜೆಪಿಗರಲ್ಲಿ ಢವಢವ!

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ವರದಿಯು ಸದ್ಯ ಸರ್ಕಾರದ ಕೈ ಸೇರಿದ್ದು, ಬಿಜೆಪಿಗರಲ್ಲಿ ಢವಢವ ಶುರುವಾಗಿದೆ.

ವಾಲ್ಮೀಕಿ ಹಗರಣ, ಮುಡಾ ಹಗರಣದ ಬಗ್ಗೆ ದೊಡ್ಡಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಇದು ಆಘಾತ ನೀಡುವ ಸಾಧ್ಯತೆ ಇದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ.

ಕಳೆದ ವಿಧಾನಸಭಾ ಚುನಾವಣೆಗೂ ಮೊದಲು 40 ಪರ್ಸೆಂಟ್ ಕಮಿಷನ್ ಆರೋಪ ಹಾಗೂ ಕೋವಿಡ್‌ ಸಂದರ್ಭದಲ್ಲಿ ನಡೆದ ಹಗರಣವು ಭಾರೀ ಚಚೆಗೆ ಕಾರಣವಾಗಿತ್ತು. ಕೊರೋನಾ ಸಂದರ್ಭದಲ್ಲಿ ಎರಡು ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್‌ ನಾಯಕರಿಗೆ ತನಿಖಾ ವರದಿಯು ಈಗ ವಿಪಕ್ಷಗಳ ವಿರುದ್ಧ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೋವಿಡ್ ಹಗರಣದ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ಹಾ ನೇತೃತ್ವದ ಆಯೋಗವನ್ನು 2023 ಆಗಸ್ಟ್‌ನಲ್ಲಿ ರಚಿಸಿತ್ತು. ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು 2024ರ ಮೇ 25ಕ್ಕೆ ಮೊದಲು ತಿಳಿಸಿತ್ತು. ಆ ಬಳಿಕ ತನಿಖೆಯ ಅವಧಿಯನ್ನು ಆಯೋಗವು ವಿಸ್ತರಣೆ ಕೋರಿದ್ದರಿಂದ ಆಗಸ್ಟ್ 31ಕ್ಕೆ ಸರ್ಕಾರವು ವಿಸ್ತರಿಸಿತ್ತು.

ಸದ್ಯ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ಹಗರಣವನ್ನು ಇಟ್ಟುಕೊಂಡು ರಾಜಕೀಯ ನಡೆಸುತ್ತಿರುವುದರ ನಡುವೆಯೇ ಇಂದು(ಆಗಸ್ಟ್‌ 31) ಕೋವಿಡ್ ಹಗರಣದ ತನಿಖಾ ವರದಿ ಸಲ್ಲಿಕೆಯಾಗಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ತನಿಖಾ ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಬಿಜೆಪಿಗರಲ್ಲಿ ಢವಢವ!

ವರದಿ ಕೈಸೇರಿದ ಬೆನ್ನಲ್ಲೇ ಬಿಜೆಪಿಗರಲ್ಲಿ ಢವಢವ ಶುರುವಾಗಿದೆ. ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್‌, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಸಮಾಲೋಚನೆ ನಡೆಸಿದ್ದಾರೆ. ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚಿಸಿ ವರದಿ ಬಹಿರಂಗಗೊಳಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಏನಿದು ಕೋವಿಡ್ ಹಗರಣ?

ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ, ಅಕ್ರಮಗಳ ಆರೋಪ ಕೇಳಿ ಬಂದಿತ್ತು. ಆಗ ಸಿಎಂ ಆಗಿ ಯಡಿಯೂರಪ್ಪ ರಾಜ್ಯದಲ್ಲಿ ಅಧಿಕಾರದಲ್ಲಿದ್ದರು. ಈ ವೇಳೆ ಈಗಿನ ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅಂದಿನ ಆರೋಗ್ಯ ಸಚಿವರಾಗಿದ್ದರು.

ಕೋವಿಡ್ ಹಗರಣಗಳ ಬಗ್ಗೆ ತನಿಖೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಹಣಕಾಸು ವಿಭಾಗವು ರಾಜ್ಯ ಸರ್ಕಾರಕ್ಕೆ 2023ರ ಜುಲೈ 5ರಂದೇ ವರದಿ ಸಲ್ಲಿಸಿತ್ತು.

ಬಿಜೆಪಿ ಅವಧಿಯಲ್ಲಿ ಕೋವಿಡ್ ವೇಳೆ ಎಷ್ಟು ವೈದ್ಯಕೀಯ ಸಲಕರಣೆ ಖರೀದಿ ಆಗಿತ್ತು, ಯಾವೆಲ್ಲ ಔಷಧಿ ಖರೀದಿ ಮಾಡಿದ್ರು? ವಿಭಾಗವಾರು ಯಾವುದಕ್ಕೆ ಎಲ್ಲಾ ಹಣ ಖರ್ಚಾಗಿದೆ? ಏನೆಲ್ಲಾ ಖರೀದಿ ಆಗಿದೆ? ಎನ್.ಹೆಚ್.ಎಂ, ಅಡ್ಮಿನ್ ವಿಭಾಗ, ಇಂಜಿನಿಯರಿಂಗ್ ವಿಭಾಗ, ಐಸಿಯು, ವೆಂಟಿಲೇಟರ್ ಖರೀದಿ ಸೇರಿದಂತೆ ವಿಭಾಗವಾರು ಪ್ರತ್ಯೇಕ ಪ್ರತ್ಯೇಕ ಬಿಲ್‌ಗಳನ್ನ ಒಳಗೊಂಡ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು.

ಇದನ್ನು ಓದಿದ್ದೀರಾ? ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 2ಕ್ಕೆ ಮುಂದೂಡಿಕೆ

ಇದೀಗ ಕೋವಿಡ್ ಹಗರಣ ಆಯೋಗದ ತನಿಖಾ ವರದಿ ಸರ್ಕಾರದ ಕೈ ಸೇರಿದ್ದು, ಮುಂದಿನ ಕ್ರಮ ಏನು ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಥಮ ಬಾರಿ ಬೆಂಬಲ ಬೆಲೆಯಲ್ಲಿ ನಾಲ್ಕು ಬೆಳೆ ಖರೀದಿ: ಸಚಿವ ಶಿವಾನಂದ ಪಾಟೀಲ

ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ...

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣ: ಸಚಿವ ಜಮೀರ್ ಅಹಮದ್ ಖಾನ್

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ...

ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ, ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ: ವಿಜಯೇಂದ್ರ

ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ. ಸಿಎಂ ಆಕಾಂಕ್ಷಿಗಳ...

ಸಿಎಂ ಸಿದ್ದರಾಮಯ್ಯರನ್ನು ‘ಸಿದ್ದ’ ಎಂದು ಉಲ್ಲೇಖಿಸಿದ ಎನ್‌ಡಿಟಿವಿ; ಭವ್ಯಾ ನರಸಿಂಹಮೂರ್ತಿ ತರಾಟೆ

ಮುಡಾ ಅಕ್ರಮ ಪ್ರಕರಣದ ಕುರಿತು ಎನ್‌ಡಿಟಿವಿ ನಡೆಸಿದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...