ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಸೋಮವಾರ ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶುಕ್ರವಾರ ಅವರನ್ನು ಏಪ್ರಿಲ್ 15 ರವರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕಸ್ಟಡಿಗೆ ಕಳುಹಿಸಲಾಗಿದೆ.
ಕವಿತಾ ಅವರು ನಮಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ ಕವಿತಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ಯಾವುದೇ ಆಧಾರವಿಲ್ಲ ಎಂದು ಕವಿತಾ ಪರ ವಕೀಲ ನಿತೇಶ್ ರಾಣಾ ಅವರು ಹೇಳಿದ್ದಾರೆ. ಏಪ್ರಿಲ್ 11 ರಂದು ಕವಿತಾ ಅವರನ್ನು ಸಿಬಿಐ ಬಂಧಿಸಿತ್ತು.
Excise case: BRS leader K Kavitha says “It is not CBI custody, it is a BJP custody. Whatever BJP is speaking outside, CBI is asking the same inside, asking again and again for 2 years, nothing new…” pic.twitter.com/qfBmgYbWRJ
— ANI (@ANI) April 15, 2024
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯದಿಂದ ಹೊರ ಬರುತ್ತಿದ್ದಂತೆ ಬಿಆರ್‌ಎಸ್ ನಾಯಕಿ, “ಇದು ಸಿಬಿಐ ಕಸ್ಟಡಿಯಲ್ಲ, ಆದರೆ ಬಿಜೆಪಿ ಕಸ್ಟಡಿ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ| ಕವಿತಾ ಬಂಧನ ಎಪ್ರಿಲ್ 23ರವರೆಗೆ ವಿಸ್ತರಣೆ
ಈ ಹಿಂದೆಯೇ ದೆಹಲಿ ನ್ಯಾಯಾಲಯ ಕವಿತಾ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ ಶುಕ್ರವಾರ, ಐದು ದಿನಗಳ ಕಾಲ ತನ್ನ ಕಸ್ಟಡಿಗೆ ಸಿಬಿಐ ಮನವಿ ಮಾಡಿದೆ. ಕವಿತಾ ತೆಲಂಗಾಣದಲ್ಲಿ ಕೃಷಿ ಭೂಮಿಗೆ 14 ಕೋಟಿ ರೂಪಾಯಿ ನೀಡುವಂತೆ ಅನುಮೋದಕ ಶರತ್ ಚಂದ್ರ ರೆಡ್ಡಿ ಅವರಿಗೆ ಒತ್ತಾಯ ಮಾಡಿದ್ದಾರೆ ಮತ್ತು ದೆಹಲಿಯಲ್ಲಿ ಐದು ಮದ್ಯದ ರಿಟೇಲ್‌ಗಳಿಗೆ 25 ಕೋಟಿ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಆರೋಪಿಸಿತ್ತು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯದ ಪರವಾನಗಿಗೆ ಪ್ರತಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಿಗೆ 100 ಕೋಟಿ ರೂಪಾಯಿ ಪಾವತಿಸಿದ ಆರೋಪ ಹೊತ್ತಿರುವ ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಅದಾದ ನಂತರ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.
ಇದನ್ನು ಓದಿದ್ದೀರಾ? ಜೈಲಿನಿಂದಲೇ ಬಿಆರ್‌ಎಸ್ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನಿ ಲಾಂಡರಿಂಗ್ ಆರೋಪಗಳನ್ನು ಇಡಿ ತನಿಖೆ ನಡೆಸುತ್ತಿದೆ. ನ್ಯಾಯಾಂಗ ಬಂಧನದಲ್ಲಿದ್ದ ಕವಿತಾ ಅವರನ್ನು ಸಿಬಿಐ ಕೂಡ ವಿಚಾರಣೆಗೆ ಒಳಪಡಿಸಿತ್ತು. ಇನ್ನು ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೂಡಾ ಬಂಧಿಸಲಾಗಿದೆ.