ದೆಹಲಿ ಅಬಕಾರಿ ಪ್ರಕರಣ| ಏ. 23ರವರೆಗೆ ನ್ಯಾಯಾಂಗ ಬಂಧನ, ‘ಸಿಬಿಐ ಅಲ್ಲ ಬಿಜೆಪಿ ಕಸ್ಟಡಿ’ ಎಂದ ಕವಿತಾ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಸೋಮವಾರ ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶುಕ್ರವಾರ ಅವರನ್ನು ಏಪ್ರಿಲ್ 15 ರವರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕಸ್ಟಡಿಗೆ ಕಳುಹಿಸಲಾಗಿದೆ.

- Advertisement -

ಕವಿತಾ ಅವರು ನಮಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ ಕವಿತಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ಯಾವುದೇ ಆಧಾರವಿಲ್ಲ ಎಂದು ಕವಿತಾ ಪರ ವಕೀಲ ನಿತೇಶ್ ರಾಣಾ ಅವರು ಹೇಳಿದ್ದಾರೆ. ಏಪ್ರಿಲ್ 11 ರಂದು ಕವಿತಾ ಅವರನ್ನು ಸಿಬಿಐ ಬಂಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯದಿಂದ ಹೊರ ಬರುತ್ತಿದ್ದಂತೆ ಬಿಆರ್‌ಎಸ್ ನಾಯಕಿ, “ಇದು ಸಿಬಿಐ ಕಸ್ಟಡಿಯಲ್ಲ, ಆದರೆ ಬಿಜೆಪಿ ಕಸ್ಟಡಿ” ಎಂದು ಹೇಳಿದರು.

ಇದನ್ನು ಓದಿದ್ದೀರಾ?   ಅಬಕಾರಿ ನೀತಿ ಹಗರಣ| ಕವಿತಾ ಬಂಧನ ಎಪ್ರಿಲ್ 23ರವರೆಗೆ ವಿಸ್ತರಣೆ

ಈ ಹಿಂದೆಯೇ ದೆಹಲಿ ನ್ಯಾಯಾಲಯ ಕವಿತಾ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ ಶುಕ್ರವಾರ, ಐದು ದಿನಗಳ ಕಾಲ ತನ್ನ ಕಸ್ಟಡಿಗೆ ಸಿಬಿಐ ಮನವಿ ಮಾಡಿದೆ. ಕವಿತಾ ತೆಲಂಗಾಣದಲ್ಲಿ ಕೃಷಿ ಭೂಮಿಗೆ 14 ಕೋಟಿ ರೂಪಾಯಿ ನೀಡುವಂತೆ ಅನುಮೋದಕ ಶರತ್ ಚಂದ್ರ ರೆಡ್ಡಿ ಅವರಿಗೆ ಒತ್ತಾಯ ಮಾಡಿದ್ದಾರೆ ಮತ್ತು ದೆಹಲಿಯಲ್ಲಿ ಐದು ಮದ್ಯದ ರಿಟೇಲ್‌ಗಳಿಗೆ 25 ಕೋಟಿ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಆರೋಪಿಸಿತ್ತು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯದ ಪರವಾನಗಿಗೆ ಪ್ರತಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಿಗೆ 100 ಕೋಟಿ ರೂಪಾಯಿ ಪಾವತಿಸಿದ ಆರೋಪ ಹೊತ್ತಿರುವ ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಅದಾದ ನಂತರ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

ಇದನ್ನು ಓದಿದ್ದೀರಾ?  ಜೈಲಿನಿಂದಲೇ ಬಿಆರ್‌ಎಸ್ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನಿ ಲಾಂಡರಿಂಗ್ ಆರೋಪಗಳನ್ನು ಇಡಿ ತನಿಖೆ ನಡೆಸುತ್ತಿದೆ. ನ್ಯಾಯಾಂಗ ಬಂಧನದಲ್ಲಿದ್ದ ಕವಿತಾ ಅವರನ್ನು ಸಿಬಿಐ ಕೂಡ ವಿಚಾರಣೆಗೆ ಒಳಪಡಿಸಿತ್ತು. ಇನ್ನು ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೂಡಾ ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...