ಕಚ್ಚತೀವು ವಿವಾದ | ಮೋದಿ ಆರೋಪಕ್ಕೆ ಶ್ರೀಲಂಕಾ ಮತ್ತು ಕಾಂಗ್ರೆಸ್‌ ಹೇಳಿದ್ದಿಷ್ಟು!

Date:

ಲೋಕಸಭಾ ಚುನಾವಣೆಯ ಸಮಯದಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ, ಶ್ರೀಲಂಕಾದ ಭಾಗವಾಗಿರುವ ಕಚ್ಚತೀವು ದ್ವೀಪದ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್‌ಅನ್ನು ವಿರುದ್ಧ ವಾಗ್ದಾಳಿ ನಡೆಸುತ್ತಿದೆ. 1974ರಲ್ಲಿ ಶ್ರೀಲಂಕಾಗೆ ಸಣ್ಣ ದ್ವೀಪವಾದ ‘ಕಚ್ಚತೀವು’ಅನ್ನು ಬಿಟ್ಟುಕೊಟ್ಟಿದೆ ಎಂದು ಕಾಂಗ್ರೆಸ್‌ಅನ್ನು ಬಿಜೆಪಿ ದೂಷಿಸಿದೆ. ಈ ಬಗ್ಗೆ ಶ್ರೀಲಂಕಾ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿದ್ದು, ಕಚ್ಚತೀವು ಬಗ್ಗೆ ಭಾರತ ಯಾವತ್ತಿಗೂ ಪ್ರಸ್ತಾಪಿಸಿಲ್ಲ ಎಂದು ಶ್ರೀಲಂಕಾ ಸರ್ಕಾರದ ವಕ್ತಾರರು ಮಂಗಳವರ ಹೇಳಿದ್ದಾರೆ.

ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಕಾಂಗ್ರೆಸ್ ಬಿಟ್ಟುಕೊಟ್ಟಿರುವುದಾಗಿ ಹೊಸ ಸಂಗತಿಗಳು ಬಹಿರಂಗಪಡಿಸುತ್ತವೆ ಎಂದು ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ, ಕಚ್ಚತೀವು ದ್ವೀಪದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್‌ನಿಂದ ಪ್ರಧಾನಿಯಾಗಿದ್ದವರು ಕಚ್ಚತೀವು ದ್ವೀಪದ ಬಗ್ಗೆ ಅಸಡ್ಡೆ ಪ್ರದರ್ಶಿಸಿದರು. ಕಾನೂನು ದೃಷ್ಟಿಕೋನಗಳ ಹೊರತಾಗಿಯೂ ಭಾರತೀಯ ಮೀನುಗಾರರ ಹಕ್ಕುಗಳ ಬಗ್ಗೆ ಅವರು ಕಾಳಜಿ ವಹಿಸಲಿಲ್ಲ” ಎಂದು ಜೈಶಂಕರ್ ಸೋಮವಾರ ಆರೋಪಿಸಿದ್ದಾರೆ.

ಮೊದಲು 1974ರಲ್ಲಿ ಮತ್ತು ನಂತರ 1976ರಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಒಪ್ಪಂದಗಳ ವಿವರಗಳನ್ನು ಉಲ್ಲೇಖಿಸಿರುವ ಜೈಶಂಕರ್, “ಭಾರತದ ಭೂಪ್ರದೇಶದ ಬಗ್ಗೆ ಕೇಂದ್ರ ಸರ್ಕಾರ ಮತ್ತು ಅಂದಿನ ಪ್ರಧಾನ ಮಂತ್ರಿಗಳು ಅಸಡ್ಡೆ ತೋರಿಸಿದ್ದು, ಪುನರಾವರ್ತಿತ ವಿಷಯವಾಗಿದೆ” ಎಂದಿದ್ದಾರೆ.

ಏತನ್ಮಧ್ಯೆ, “ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಮತ್ತು ಲಕ್ಷಾಂತರ ತಮಿಳರ ಜೀವ ಉಳಿಸಲು ಕಚ್ಚತೀವು ಶ್ರೀಲಂಕಾಕ್ಕೆ ಬಿಟ್ಟುಕೊಡಲಾಗಿದೆ. 1974ರಲ್ಲಿ ಇತ್ಯರ್ಥವಾದ ಸಮಸ್ಯೆಯನ್ನು ಪ್ರಧಾನಿ ಏಕೆ ಈಗ ಕೆದಕುತ್ತಿದ್ದಾರೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“1974ರಲ್ಲಿ, ಇಂದಿರಾ ಗಾಂಧಿ ಸರ್ಕಾರ, ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಮತ್ತು ಅಲ್ಲಿ ಲಕ್ಷಾಂತರ ತಮಿಳರಿಗೆ ಸಹಾಯ ಮಾಡಲು, ದ್ವೀಪ ರಾಷ್ಟ್ರದ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಮಾತುಕತೆಗಳ ನಂತರ, ಸುಮಾರು 1.9 ಚದರ ಕಿ.ಮೀ ವಿಸ್ತೀರ್ಣದ ಅತ್ಯಂತ ಚಿಕ್ಕ ದ್ವೀಪವಾದ ಕಚ್ಚತೀವುಅನ್ನು ಶ್ರೀಲಂಕಾಗೆ ಸೇರಿದ್ದು ಎಂದು ಭಾರತ ಒಪ್ಪಿಕೊಂಡಿತು. ಇದಕ್ಕೆ ಪ್ರತಿಯಾಗಿ ಆರು ಲಕ್ಷ ತಮಿಳರು ಭಾರತಕ್ಕೆ ಬರಲು ಶ್ರೀಲಂಕಾ ಅನುವು ಮಾಡಿಕೊಟ್ಟಿತು” ಎಂದು ಚಿದಂಬರಂ ಹೇಳಿದ್ದಾರೆ.

“ತಮಿಳರು ಭಾರತಕ್ಕೆ ಬಂದಿದ್ದಾರೆ. ಅವರ ಕುಟುಂಬಗಳು ಇಲ್ಲವೆ. ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿದೆ. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಇಲ್ಲಿದ್ದಾರೆ. ಈ ಸಮಸ್ಯೆಯನ್ನು 50 ವರ್ಷಗಳ ಹಿಂದೆ ಪರಿಹರಿಸಲಾಗಿದೆ” ಎಂದು ಚಿದಂಬರಂ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುಮತಿ ನೀಡದ ಕೇಂದ್ರ ಗೃಹ ಇಲಾಖೆ: ಭಾರತ ತೊರೆದ ಫ್ರೆಂಚ್ ಪತ್ರಕರ್ತ

ಫ್ರೆಂಚ್‌ ರೇಡಿಯೋ ಪತ್ರಕರ್ತ ಸೆಬಾಸ್ಟಿಯನ್‌ ಫಾರ್‌ಸಿಸ್ ಎಂಬುವರು ಕೇಂದ್ರ ಗೃಹ ಇಲಾಖೆ...

ದೇವನೂರು ಬಿಟ್ಟರೆ ಕಾಂಗ್ರೆಸ್ ಸರ್ಕಾರ ಟೀಕಿಸುವ ನೈತಿಕತೆ ಉಳಿದ ಸಾಹಿತಿಗಳಿಗಿಲ್ಲ: ರಮೇಶ್‌ ಬಾಬು

ದೇವನೂರು ಮಹದೇವರಂತಹ ಅಪರೂಪದ ವ್ಯಕ್ತಿಗಳು ಸರ್ಕಾರಗಳನ್ನು, ರಾಜಕಾರಣಿಗಳನ್ನು ಟೀಕಿಸುವ ನೈತಿಕತೆಯನ್ನು ಇಂದಿಗೂ...

ಬಾಂಬೆ ಐಐಟಿ: ರಾಮನ ಬಗ್ಗೆ ನಾಟಕದಲ್ಲಿ ಕೆಟ್ಟದಾಗಿ ಬಿಂಬಿಸಿದ 8 ವಿದ್ಯಾರ್ಥಿಗಳಿಗೆ ದಂಡ

ನಾಟಕದಲ್ಲಿ ರಾಮ ಹಾಗೂ ರಾಮಾಯಣದ ಬಗ್ಗೆ ಕೆಟ್ಟದಾಗಿ ಬಿಂಬಿಸಿದ 8 ವಿದ್ಯಾರ್ಥಿಗಳಿಗೆ...