ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಕೆಇಎ ಅನುಮತಿ, ಹಿಂದೂ ಸಂಘಟನೆಗಳಿಂದ ವಿರೋಧ

Date:

Advertisements
  • ಅ.28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ 
  • ಸಮಸ್ಯೆ ಸೃಷ್ಟಿಸುವವರಿಗೆ ಉತ್ತರ ಕೊಡಲು ಸಾಧ್ಯವಿಲ್ಲ: ಎಂ ಸಿ ಸುಧಾಕರ್

ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅನುಮತಿ ನೀಡಿದೆ.

ಹಿಜಾಬ್‌ಗೆ ಅನುಮತಿ ನೀಡಿರುವ ಕೆಎಇ ನಿರ್ಧಾರಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಣ್ಣಗಾಗಿದ್ದ ಹಿಜಾಬ್ ವಿಚಾರ ಈಗ ಮತ್ತೆ ಮುನ್ನೆಲೆಗೆ ತರಲು ಪ್ರಯತ್ನಿಸುತ್ತಿವೆ.

ಹಿಜಾಬ್‌ ವಿಚಾರವಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲೂ ಗಲಾಟೆಯಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್‌ ಧರಿಸಿದರೆ ನಾವು ಕೇಸರಿ ಶಾಲುಗಳನ್ನು ಹಾಕಿಕೊಳ್ಳುತ್ತೇವೆ ಎಂದು ಕೆಲ ಹಿಂದೂ ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಅಲ್ಲದೆ, ಕೇಸರಿ ಶಾಲುಗಳನ್ನು ಒಳಗೊಂಡ ಪ್ರತಿಭಟನೆಗಳು ಮತ್ತು ಪ್ರತಿ ಪ್ರದರ್ಶನಗಳು ಇಡೀ ಕರ್ನಾಟಕ ಮಾತ್ರವಲ್ಲ, ಬಳಿಕ ಇತರ ರಾಜ್ಯಗಳಿಗೂ ಹರಡಿದವು. ರಾಜ್ಯಾದ್ಯಂತ ನಡೆದ ಕೋಮುಗಲಭೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವುಂಟಾಗಿತ್ತು.

Advertisements

ಈಗ ಹಿಜಾಬ್ ಅನುಮತಿ ಕೊಟ್ಟಿರುವುದು ಸರಿಯಲ್ಲ, ಸರ್ಕಾರ ಇದನ್ನ ಕೂಡಲೇ ಹಿಂಪಡೆಯುವಂತೆ ಹಿಂದೂ ಜನಜಾಗೃತಿ ಸಂಘಟನೆ ಆಗ್ರಹಿಸಿದೆ. ಇಲ್ಲವಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ತಣ್ಣಗಾಗಿದ್ದ ಹಿಜಾಬ್ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಸಮಸ್ಯೆ ಸೃಷ್ಟಿ ಮಾಡಲು ಕೆಲವರು ಇರುತ್ತಾರೆ: ಸುಧಾಕರ್

ಹಿಜಾಬ್‌ ಗೊಂದಲದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್‌ ಅವರು ಮಾತನಾಡಿ, “ಹಿಜಾಬ್ ಧರಿಸಿ ಪರೀಕ್ಷೆ ಬರೆಯುವ ವಿಷಯದಲ್ಲಿ ಸಮಸ್ಯೆ ಸೃಷ್ಟಿ ಮಾಡಲೇಬೇಕು ಎಂಬವರಿಗೆ ನಾವು ಉತ್ತರ ಕೊಡಲು ಸಾಧ್ಯವಿಲ್ಲ. ಪ್ರತಿಯೊಬ್ಬರ ಸ್ವಾತಂತ್ರ್ಯ ದೃಷ್ಟಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಸಮಸ್ಯೆ ಸೃಷ್ಟಿ ಮಾಡಲು ಕೆಲವರು ಇರುತ್ತಾರೆ. ಅವರನ್ನು ಕೇಳಿ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ” ಎಂದರು.

“ಹಿಜಾಬ್‌ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಆದೇಶ ಇರುವುದು ಕಾಲೇಜುಗಳಿಗೆ. ಈಗ ನಡೆಯುತ್ತಿರುವುದು ಬೋರ್ಡ್‌ ಪರೀಕ್ಷೆ. ನೀಟ್‌ ಪರೀಕ್ಷೆಯನ್ನು ಹಿಜಾಬ್‌ ಧರಿಸಿ ಬರೆಯಲು ಅವಕಾಶವಿದೆ. ನಮ್ಮ ಕೆಇಎ ನಡೆಸುತ್ತಿರುವ ಪರೀಕ್ಷೆಯಲ್ಲಿ ಒಂದು ಗಂಟೆ ಮುಂಚೆ ಬಂದು ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದೇವೆ. ಇದರಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲ. ಕೆಲವರು ಬೇರೆ ಕಾರಣಗಳನ್ನು ಮುಂದಿಟ್ಟು ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರಬಹುದು. ಎಲ್ಲರಿಗೂ ಅವರ ಇಚ್ಛೆಯಂತೆ ಬಟ್ಟೆ ಧರಿಸುವ ಅವಕಾಶವಿದೆ” ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X