ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ NWKRTC ಅಧ್ಯಕ್ಷ ಸ್ಥಾನದಿಂದ ವಜಾ

Date:

Advertisements

ಸಹಕಾರ ಸಚಿವರಾಗಿದ್ದ ಕೆ ಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕನಿಗೆ ಹೈಕಮಂಡ್‌ ಶಾಕ್‌ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆ ನೀಡಿದ್ದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿತ್ತು.

ಈ ಪಟ್ಟಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅರುಣ್‌ ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ. ಇದರಿಂದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ಏಕಾಏಕಿ ವಜಾಗೊಳಿಸಲಾಗಿದೆ.

ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಎರಡು ದಿನದಲ್ಲಿ ನಾನು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ. ಶಾಸಕ ಬಿ‌ ಆರ್ ಪಾಟೀಲ್​ ಹೇಳಿರುವುದು ಸುಳ್ಳಲ್ಲ” ಎಂದು ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ಕಳೆದ ಜೂನ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಆಳಂದ ಶಾಸಕ ಬಿ ಆರ್ ಪಾಟೀಲ್ ಎರಡು ತಿಂಗಳ ಹಿಂದೆ ವಸತಿ ಇಲಾಖೆಯ ಭ್ರಷ್ಟಾಚಾರ ಬಗ್ಗೆ ಧ್ವನಿ ಎತ್ತಿದ್ದರು. ಅದಾದ ನಂತರ, ಬಿ.ಆರ್ ಪಾಟೀಲರಂತೆಯೇ ನನ್ನ ಸ್ಥಿತಿಯೂ ಇದೆ ಎಂದು ರಾಜು ಕಾಗೆ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X