ರಾಹುಲ್‌ ಬಗ್ಗೆ ಅಮಿತ್ ಶಾ ಸುಳ್ಳು ಆರೋಪ: ಕಾಂಗ್ರೆಸ್ ಸಹಾಯ ಸ್ಮರಿಸಿದ ರೈತ ಮಹಿಳೆ ಕಲಾವತಿ

Date:

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಯಾವುದೇ ಸಹಾಯ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ “ಸಂಪೂರ್ಣ ಸುಳ್ಳು” ಎಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಬಡ ರೈತ ಮಹಿಳೆ ಕಲಾವತಿ ಬಂಡೂರ್ಕರ್ ಅವರು ಕಾಂಗ್ರೆಸ್ ಸಹಾಯ ಸ್ಮರಿಸಿದ್ದಾರೆ.

- Advertisement -

ಸುದ್ದಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, 2014ರ ನಂತರ ನನಗೆ ಯಾವುದೇ ಸಹಾಯ ದೊರಕಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ದ್ವೇಷವಿಲ್ಲ. ನನ್ನ ಜೀವನ ರಾಹುಲ್‌ ಗಾಂಧಿಯವರಿಂದ ಬದಲಾದದ್ದು ನಿಜ ಎಂದು ರೈತ ಮಹಿಳೆ ಕಲಾವತಿ ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನನ್ನ ಪತಿ 2005ರಲ್ಲಿ ಕೃಷಿ ಸಾಲದ ಬಿಕ್ಕಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. 2008ರವರೆಗೆ, ರಾಹುಲ್ ನಮ್ಮನ್ನು ಭೇಟಿ ಮಾಡುವವರೆಗೂ ಜೀವನ ನಿರ್ವಹಿಸುವುದು ಕಷ್ಟಕರವಾಗಿತ್ತು. ಅವರು ಭೇಟಿ ನೀಡಿದ ನಂತರ ನಮಗೆ ಎಲ್ಲ ರೀತಿಯ ಸಹಾಯ ದೊರಕಿತು” ಎಂದು ಕಲಾವತಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಕೋಟಾದಲ್ಲಿ 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ; ವಾರದಲ್ಲಿ 3ನೇ ಪ್ರಕರಣ

“ಮೊದಲು ನಾನು 3 ಲಕ್ಷ ರೂ. ಪಡೆದುಕೊಂಡೆ, ಅದರೊಂದಿಗೆ ನಾನು ನನ್ನ ಮನೆಯನ್ನು ದುರಸ್ತಿ ಮಾಡಿಸಿದೆ. ಹಾಗೆಯೇ ನಮ್ಮ ಜೀವನ ಸುಧಾರಿಸಿತು. ಇದರ ನಂತರ ಸ್ವಯಂಸೇವಾ ಸಂಘ ಸುಲಭ್ ಇಂಟರ್‌ನ್ಯಾಶನಲ್‌ ನೀಡಿದ 30 ಲಕ್ಷ. ರೂ. ಹಣವನ್ನು ಸ್ಥಿರ ಠೇವಣಿಯಾಗಿ ಬ್ಯಾಂಕಿನಲ್ಲಿ ಇರಿಸಿದ್ದೇನೆ. ಇದರಿಂದ ನನಗೆ ಸುಮಾರು ರೂ 16,000 ಬಡ್ಡಿ ಸಿಗುತ್ತಿದೆ” ಎಂದು ಕಲಾವತಿ ಹೇಳಿದ್ದಾರೆ.

2008ರಲ್ಲಿ ಸಂಸತ್ತಿನಲ್ಲಿ ನಡೆದ ಪರಮಾಣು ಒಪ್ಪಂದದ ಬಗ್ಗೆ ನಡೆದ ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಾತನಾಡಿದ್ದ ರಾಹುಲ್‌ ಗಾಂಧಿ ಕಲಾವತಿ ವಿಷಯವನ್ನು ಪ್ರಸ್ತಾಪಿಸಿದ್ದರು.

ಕಳೆದ ವರ್ಷ ಭಾರತ್ ಜೋಡೋ ಯಾತ್ರೆಯ ವೇಳೆ ಕಲಾವತಿ ಅವರು ರಾಹುಲ್ ಅವರನ್ನು ಸಮೀಪದ ವಾಸೀಮ್‌ನಲ್ಲಿ ಭೇಟಿಯಾಗಿದ್ದರು.

ಸುಳ್ಳು ಹೇಳಿದ ಅಮಿತ್‌ ಶಾ; ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷವಾದ ಕಾಂಗ್ರೆಸ್ ಗುರುವಾರ ಹಕ್ಕುಚ್ಯುತಿ ನೋಟಿಸ್ ನೀಡಿದೆ.

ಈ ನೋಟಿಸ್ ಅನ್ನು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ಕಾಂಗ್ರೆಸ್ ಸಚೇತಕ ಮಣಿಕಂ ಟ್ಯಾಗೋರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಸಲ್ಲಿಸಿದ್ದಾರೆ.

“ನಿನ್ನೆ (ಆಗಸ್ಟ್ 9) ಕಲಾವತಿ ಕತೆಯನ್ನು ತಪ್ಪಾಗಿ ಹೇಳಿ, ಲೋಕಸಭೆಯ ದಾರಿ ತಪ್ಪಿಸಿರುವುದಕ್ಕೆ ನಾನು ಅಮಿತ್ ಶಾ ವಿರುದ್ಧ ಗೌರವಾನ್ವಿತ ಲೋಕಸಭಾಧ್ಯಕ್ಷರಿಗೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದೇನೆ” ಎಂದು ಟ್ಯಾಗೋರ್ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಅವರು ನೋಟಿಸ್ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಆ ರೈತ ಮಹಿಳೆಗೆ ಮನೆ ದೊರೆಯುವಂತೆ ಹಾಗೂ ಹಲವಾರು ಸರ್ಕಾರಿ ಯೋಜನೆಗಳು ದೊರೆಯುವಂತೆ ಖಾತ್ರಿಗೊಳಿಸಿದ್ದು ಮೋದಿ ಸರ್ಕಾರ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಆದರೆ, ಮೋದಿ ಸರ್ಕಾರ ಕಲಾವತಿ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಆ ರೈತ ಮಹಿಳೆಯ ಹೇಳಿಕೆಯ ಸತ್ಯಾಂಶದ ವಿಡಿಯೋವನ್ನು ಟ್ವಿಟರ್‌ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಟ್ಯಾಗೋರ್ ಅವರು ತಮ್ಮ ನೋಟಿಸ್‌ನಲ್ಲಿ, ಅಮಿತ್ ಶಾ ಸದನವನ್ನು ಉದ್ದೇಶಿಸಿ ಮಾತನಾಡುವಾಗ ಕರಾರುವಾಕ್ ಹಾಗೂ ಸತ್ಯಾಂಶವುಳ್ಳ ಮಾಹಿತಿಯನ್ನು ಎತ್ತಿ ಹಿಡಿಯದೆ ಸಂಸದೀಯ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...