ಕಲ್ಯಾಣ ಕರ್ನಾಟಕ | ಖರ್ಗೆ ತವರಲ್ಲಿ ಕಾಂಗ್ರೆಸ್ ಜಯಭೇರಿ

Date:

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನ ಗೆದ್ದಿದ್ದು, ಕಾಂಗ್ರೆಸ್‌ 9 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕಾಂಗ್ರೆಸ್‌ ಗೆದ್ದ 9 ಸ್ಥಾನಗಳಲ್ಲಿ ಖರ್ಗೆ ಅವರು ತವರು ಪ್ರದೇಶ ಕಲ್ಯಾಣ ಕರ್ನಾಟಕದ ಐದು ಸ್ಥಾನಗಳು ಒಳಗೊಂಡಿವೆ. ಕಳೆದ ಬಾರಿ ಬಿಜೆಪಿ ತೆಕ್ಕೆಗೆ ಸೇರಿದ್ದ ಐದೂ ಕ್ಷೇತ್ರಗಳು ಈಗ ಮರಳಿ ಕಾಂಗ್ರೆಸ್‌ ವಶವಾಗಿವೆ.

- Advertisement -

2019ರಲ್ಲಿ 1 ಸ್ಥಾನದಲ್ಲಿ ಗೆಲುವು ಕಂಡಿದ್ದ ಕಾಂಗ್ರೆಸ್, ಈ ಬಾರಿ 9 ಸ್ಥಾನಗಳನ್ನು ಗೆದ್ದು ತನ್ನ ಸಂಖ್ಯೆಯನ್ನು ಹಿಗ್ಗಿಸಿಕೊಂಡಿದೆ. ಕಲ್ಯಾಣ ಕರ್ನಾಟಕದ ಒಟ್ಟೂ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಗೆಲುವು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆಯನ್ನು ಹೆಚ್ಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಬೀದರ್, ಬಳ್ಳಾರಿ, ಕೊಪ್ಪಳ, ಕಲಬುರಗಿ, ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಿಜೆಪಿಯ ಘಟಾನುಘಟಿ ನಾಯಕರೇ ಕಲ್ಯಾಣ ಕರ್ನಾಟಕದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಅನುಭವಿಸಿದ್ದಾರೆ.

ಕಳೆದ ಎರಡು ಚುನಾವಣೆಗಳಿಂದ ಬಿಜೆಪಿ ವಶದಲ್ಲಿರುವ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸದಲ್ಲಿದ್ದರು. ಆದರೆ, ಸಚಿವ ಈಶ್ವರ್ ಖಂಡ್ರೆ ಅವರ ಮಗ 26 ವರ್ಷದ ಸಾಗರ್ ಖಂಡ್ರೆ ಗೆಲುವಿನ ನಗೆ ಬೀರಿದ್ದಾರೆ.

18 ಅಭ್ಯರ್ಥಿಗಳು ಬೀದರ್ ಲೋಕಸಭೆ ಕ್ಷೇತ್ರದ ಅಖಾಡದಲ್ಲಿದ್ದರು. ಇದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇತ್ತು. ಆದರೆ, ಸಾಗರ್ ಖಂಡ್ರೆ ಅವರು 1,28,875 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ. ನಾಗೇಂದ್ರ ಎದುರು ಸೋಲು ಕಂಡಿದ್ದ ಬಿಜೆಪಿಯ ಶ್ರೀರಾಮುಲು, ಈಗ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿಯೂ ಸೋಲು ಅನುಭವಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಇ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಅವರು 7,30,845 ಮತಗಳನ್ನು ಪಡೆದು, ಬಿಜೆಪಿಯ ಬಿ ಶ್ರೀರಾಮುಲು ಅವರ ಎದುರು 98,992 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಶ್ರೀರಾಮುಲು ಅವರು 6,31,853 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.

ಕೊಪ್ಪಳ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಈ ಕಾರಣಕ್ಕೆ ಕಾಂಗ್ರೆಸ್ ಸೇರಿದ ಸಂಗಣ್ಣ ಕರಡಿ, ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರವಾಗಿ ಪ್ರಚಾರ ಕಣದಲ್ಲಿ ಅಬ್ಬರಿಸಿದರು. ಹೀಗಾಗಿ, ಬಿಜೆಪಿಯ ಭದ್ರ ಕೋಟೆಯಾಗಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರ, ಇದೀಗ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಸೋಲು ಕಂಡಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರ ತೀವ್ರ ಪೈಪೋಟಿಗೆ ಸಾಕ್ಷಿಯಾಗಿತ್ತು. ಈ ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ ಸ್ಪರ್ಧಿಸಿದ್ದರು. ಕಾಂಗ್ರೆಸ್​ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಶ್ವಾಸಾರ್ಹತೆಯನ್ನು ಕಳೆದುಕೊಂಡ ಮೋದಿ ರಾಜೀನಾಮೆ ನೀಡಬೇಕು: ಮಮತಾ ಬ್ಯಾನರ್ಜಿ

ರಾಯಚೂರು ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಬಿಜೆಪಿ ಅಭ್ಯರ್ಥಿ ರಾಜ ಅಮರೇಶ್ವರ ನಾಯ್ಕ ಸೋಲು ಕಂಡಿದ್ದಾರೆ. ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಜಿ ಕುಮಾರ ನಾಯ್ಕ ಗೆಲುವು ಸಾಧಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಗೆಲುವು ಒಂದು ರೀತಿಯಲ್ಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಆರ್ಭಟಕ್ಕೆ, ಹಾರಾಟಕ್ಕೆ ಖರ್ಗೆಯವರು ಮೌನವಾಗಿ ನೀಡಿದ ಉತ್ತರದಂತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...