‘ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಸಿನಿಮಾ ಬ್ಯಾನ್’

Date:

‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ’ ಎಂದು ಹೇಳಿಕೆ ನೀಡಿದ್ದ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಮಲ್ ವಿರುದ್ಧ ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕಮಲ್ ಅವರಿಗೆ ಹಲವರು ಭಾಷಾ ಇತಿಹಾಸದ ಪಾಠ ಹೇಳುತ್ತಿದ್ದಾರೆ. ಇದೀಗ, ಕಮಲ್ ಹಾಸನ್ ಕನ್ನಡಿಗರಲ್ಲಿ ಕ್ಷಮೆ ಕೇಳದಿದ್ದರೆ, ಅವರ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್‌ ಮಾಡುವುದಾಗಿ ಕರ್ನಾಟಕ ಸರ್ಕಾರ ಎಚ್ಚರಿಕೆ ನೀಡಿದೆ.

- Advertisement -

ಕಮಲ್ ಹಾಸನ್ ಹೇಳಿಕೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. “ಕನ್ನಡ ಭಾಷೆಯ ಕುರಿತು ಹಗುರವಾಗಿ ಮಾತನಾಡಿರುವ ಬಹುಭಾಷ ನಟ ಕಮಲ್ ಹಾಸನ್ ಕೂಡಲೇ ರಾಜ್ಯದ ಜನರ ಎದುರು ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ, ಅವರ ಸಿನಿಮಾಗಳಿಗೆ ರಾಜ್ಯದಲ್ಲಿ ನಿರ್ಬಂಧ ಹೇರುವಂತೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾರೇ ಹಗುರವಾಗಿ ಮಾತನಾಡಿದರೂ ಸಹಿಸುವುದಿಲ್ಲ. ಅವರು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಕನ್ನಡ ವಿರೋಧಿ ಹೇಳಿಕೆಗಳನ್ನು ಸಹಿಸುವ ಮಾತೇ ಇಲ್ಲ. ಕಮಲ್ ಕ್ಷಮೆಯಾಚಿಸಬೇಕು” ಎಂದು ಸಚಿವರು ಆಗ್ರಹಿಸಿದ್ದಾರೆ.

“ಕಮಲ್ ಹಾಸನ್ ಅವರು ಕನ್ನಡದಲ್ಲಿಯೂ ಹಲವು ಚಿತ್ರಗಳನ್ನು ಮಾಡಿದ್ದಾರೆ. ಅವರಿಗೆ ನಟನೆ ಮತ್ತು ಹಣ ಸಂಪಾದನೆಗೆ ನಮ್ಮ ಭಾಷೆ ಬೇಕು. ಆದರೆ, ಹಿರಿಯ ನಟನಾಗಿ ಪುಗಸಟ್ಟೆ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ಅವರು ನೀಡಬಾರದು. ಅವರು ಕ್ಷಮೆ ಕೇಳದಿದ್ದರೆ, ಅವರ ಚಿತ್ರಗಳನ್ನು ಬ್ಯಾನ್‌ ಮಾಡಲಾಗುವುದು” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಕಮಲ್‌ ಹಾಸನ್‌ ಎಂಬ ಅಜ್ಞಾನಿಯಿಂದ ಕನ್ನಡಕ್ಕೆ ಅವಮಾನ: ಇಂಥವರಿಗೆ ನಿರ್ಲಕ್ಷ್ಯವೇ ಮದ್ದು

ಕಮಲ್ ಅವರು ತಮ್ಮ ಸಿನಿಮಾ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ರಮದಲ್ಲಿ ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಅದೇ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟ ಶಿವರಾಜ್‌ಕುಮಾರ್ ಕೂಡ ಭಾಗಿಯಾಗಿದ್ದರು. ಕಮಲ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್‌ಕುಮಾರ್, ‘ಕಮಲ್ ಅವರಿಗೆ ಕನ್ನಡ ಭಾಷೆಯ ಬಗ್ಗೆ ಪ್ರೀತಿ ಇದೆ’ ಎಂದು ಹೇಳಿದ್ದಾರೆ. ಕಮಲ್ ವಿರುದ್ಧ ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...