ಇಂಡಿಯಾ ಒಕ್ಕೂಟಕ್ಕೆ ಕಮಲ್ ಹಾಸನ್ ಪಕ್ಷ?; ಹಿರಿಯ ನಟ ಹೇಳಿದ್ದೇನು?

Date:

ತಮಿಳುನಾಡಿನಲ್ಲಿ ‘ಇಂಡಿಯಾ’ ಮೈತ್ರಿಕೂಟದೊಂದಿಗೆ ಮಾತುಕತೆ ನಡೆಯುತ್ತಿದೆ. ಆದರೆ, ಮೈತ್ರಿಕೂಟಕ್ಕೆ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ.

ಎಂಎನ್‌ಎಂನ ಏಳನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. “ನಿಸ್ವಾರ್ಥ ಕೆಲಸ ಮಾಡುವ ಯಾರೊಂದಿಗಾದರೂ ಕೈಜೋಡಿಸಲು ಪಕ್ಷವು ಸಿದ್ಧವಿದೆ. ಆದರೆ, ನಾವು ಸ್ಥಳೀಯ ಊಳಿಗಮಾನ್ಯ ರಾಜಕೀಯದಲ್ಲಿ ಪಾಲ್ಗೊಳ್ಳುವ ಯಾರನ್ನೂ ಬೆಂಬಲಿಸುವುದಿಲ್ಲ” ಎಂದು ಹೇಳಿದರು.

ಇಲ್ಲಿಯವರೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ದೂರ ಉಳಿದಿರುವ ನಟ, ಇದೀಗ, ‘ಇಂಡಿಯಾ’ ಒಕ್ಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆ ಸ್ನೇಹ ಸಂಬಂಧ ಬೆಳೆಸಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023ರ ಈರೋಡ್ ಉಪಚುನಾವಣೆಯಲ್ಲಿ, ಕಮಲ್ ಹಾಸನ್ ಅವರು ಡಿಎಂಕೆ-ಕಾಂಗ್ರೆಸ್ ಸಮ್ಮಿಶ್ರ ಅಭ್ಯರ್ಥಿ, ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮಾಜಿ ಅಧ್ಯಕ್ಷ ಇವಿಕೆಎಸ್ ಇಳಂಗೋವನ್ ಪರವಾಗಿ ಪ್ರಚಾರ ಮಾಡಿದ್ದರು.

ಹಾಸನ್ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಸ್ನೇಹಿತರೂ ಆಗಿದ್ದಾರೆ. ಅವರು ಕಳೆದ ವರ್ಷ ಚೆನ್ನೈನಲ್ಲಿ ಸ್ಟಾಲಿನ್ ಅವರ ಹುಟ್ಟುಹಬ್ಬದ ಅಂಗವಾಗಿ ನಡೆದ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿದ್ದರು.

2021ರಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಹಾಸನ್ ಬಿಜೆಪಿಯ ವನತಿ ಶ್ರೀನಿವಾಸನ್ ವಿರುದ್ಧ 1,540 ಮತಗಳ ಕಡಿಮೆ ಅಂತದಿಂದ ಸೋತಿದ್ದರು. ತಮ್ಮ ಸೋಲಿನ ಬಗ್ಗೆ ಮಾತನಾಡಿರುವ ಕಮಲ್ ಹಾಸನ್, “ನಾನು ಕೊಯಮತ್ತೂರು ಕ್ಷೇತ್ರದಲ್ಲಿ ಗೆಲ್ಲುವಲ್ಲಿ ವಿಫಲನಾಗಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಆದರೆ, ಆ ದಿನ 90,000 ಜನರು ಮತದಾನ ಮಾಡಲು ಬರಲಿಲ್ಲ. ನಿಜವಾದ ವಿಚಾರವೆಂದರೆ ಅದು. ಅವರು ಏಕೆ ಮತ ಹಾಕಲಿಲ್ಲ ಎಂದು ನಾವು ಅವರನ್ನು ಕೇಳಬೇಕು,” ಎಂದು ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ,...

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು...

ಆರು ಜನರ ಹತ್ಯೆಯಾದ ಎರಡು ವರ್ಷಗಳ ನಂತರ 2 ಎಫ್‌ಐಆರ್‌ ದಾಖಲಿಸಿದ ಸಿಬಿಐ!

ಅಸ್ಸಾಂ ಪೊಲೀಸರು ಮತ್ತು ಜನಸಮೂಹದ ನಡುವಿನ ಘರ್ಷಣೆಯಲ್ಲಿ ಅಸ್ಸಾಂ ಫಾರೆಸ್ಟ್ ಗಾರ್ಡ್...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು...