ಕಮಲ್ ಹಾಸನ್ ನೀಡಿದ ಕನ್ನಡ ಭಾಷೆ ಹೇಳಿಕೆ ಸಂಪೂರ್ಣ ಸುಳ್ಳು: ಕರವೇ ನಾರಾಯಣಗೌಡ

Date:

Advertisements

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ಕ”ಮಲ್ ಹಾಸನ್ ಅವರ ಹೇಳಿಕೆ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿವೆ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕನ್ನಡ ಭಾಷೆಗೆ ಸುಮಾರು 4600–5000 ವರ್ಷಗಳ ಇತಿಹಾಸವಿದೆ. ಭಾಷಾಶಾಸ್ತ್ರೀಯ ಅಧ್ಯಯನಗಳ ಪ್ರಕಾರ, ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ (ಪ್ರೊಟೊ-ದ್ರಾವಿಡಿಯನ್) ಸುಮಾರು 2500–3000 ಕ್ರಿ.ಪೂ. ಆಸುಪಾಸಿನಲ್ಲಿ ಕವಲೊಡೆದಿವೆ. ಅಶೋಕನ ಕಾಲದ ಪ್ರಾಕೃತ ಶಾಸನಗಳಲ್ಲಿ (ಕ್ರಿ.ಪೂ. 3ನೇ ಶತಮಾನ) ಕರ್ನಾಟಕದಲ್ಲಿ ಕಂಡುಬಂದ ಕೆಲವು ಶಾಸನಗಳು ಕನ್ನಡದ ಆದಿಪದಗಳ ಬಳಕೆಯನ್ನು ಸೂಚಿಸುತ್ತವೆ. ಕನ್ನಡದ ಲಿಖಿತ ರೂಪಕ್ಕೆ 2000 ವರ್ಷಗಳ ಇತಿಹಾಸವಿದ್ದು, ಇದಕ್ಕೂ ಮುಂಚಿನ 2000 ವರ್ಷಗಳ ಭಾಷಿಕ ಇತಿಹಾಸವನ್ನು ಒಳಗೊಂಡಂತೆ, ಕನ್ನಡ ನುಡಿಯ ಒಟ್ಟಾರೆ ಇತಿಹಾಸ 4600 ವರ್ಷಗಳಿಗೂ ಹೆಚ್ಚಿನದಾಗಿದೆ” ಎಂದಿದ್ದಾರೆ.

Advertisements

“ತಮಿಳು ಸಾಹಿತ್ಯಕ್ಕೆ ಪ್ರಾಚೀನತೆಯಿದ್ದರೂ, ತಮಿಳು ಭಾಷೆಯು ಕನ್ನಡಕ್ಕಿಂತ ಹಳೆಯದು ಎನ್ನಲು ಯಾವುದೇ ಐತಿಹಾಸಿಕ ಅಥವಾ ಭಾಷಾಶಾಸ್ತ್ರೀಯ ಆಧಾರಗಳಿಲ್ಲ. ಇತ್ತೀಚಿನ ಭಾಷಾಶಾಸ್ತ್ರೀಯ ಸಂಶೋಧನೆಗಳು ತಮಿಳು, ಕನ್ನಡ, ತುಳು, ತೆಲುಗು ಮೊದಲಾದ ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ ಏಕಕಾಲಕ್ಕೆ ವಿಕಾಸಗೊಂಡಿವೆ ಎಂದು ಸ್ಪಷ್ಟಪಡಿಸಿವೆ. ಹಲ್ಮಿಡಿ ಶಾಸನ (ಕ್ರಿ.ಶ. 450) ಕನ್ನಡದ ಅತ್ಯಂತ ಪ್ರಾಚೀನ ಲಿಖಿತ ದಾಖಲೆಯಾಗಿದ್ದು, ಕನ್ನಡದ ಸ್ವತಂತ್ರ ಅಸ್ತಿತ್ವವನ್ನು ದೃಢಪಡಿಸುತ್ತದೆ. ಇದಕ್ಕಿಂತಲೂ ಹಳೆಯ ಬ್ರಾಹ್ಮೀ ಲಿಪಿಯ ಶಾಸನಗಳು ಕರ್ನಾಟಕದ ಬನವಾಸಿ, ಚಂದ್ರವಳ್ಳಿಯಂತಹ ಕಡೆಗಳಲ್ಲಿ ಕಂಡುಬಂದಿವೆ, ಇದು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಗಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?

“ಕನ್ನಡ ಸಾಹಿತ್ಯವು ತನ್ನದೇ ಆದ ವಿಶಿಷ್ಟ ವ್ಯಾಕರಣ, ಶಬ್ದಕೋಶ ಮತ್ತು ಶೈಲಿಯನ್ನು ಹೊಂದಿದ್ದು, ತಮಿಳಿನಿಂದ ಸಂಪೂರ್ಣ ಭಿನ್ನವಾಗಿದೆ. ಪಂಪ, ರನ್ನ, ಬಸವಣ್ಣ, ಕುವೆಂಪು ಮುಂತಾದ ಕವಿಗಳಿಂದ ಮತ್ತು ಎಂಟು ಜ್ಞಾನಪೀಠ ಪ್ರಶಸ್ತಿಗಳಿಂದ ಸಮೃದ್ಧವಾದ ಕನ್ನಡ ಸಾಹಿತ್ಯವು ತನ್ನ ಸ್ವತಂತ್ರ ಗುರುತನ್ನು ಶತಮಾನಗಳಿಂದ ಉಳಿಸಿಕೊಂಡಿದೆ. ಕಮಲ್ ಹಾಸನ್ ಅವರ ಈ ಹೇಳಿಕೆಯು ದಕ್ಷಿಣ ಭಾರತದ ಜನತೆಯು ಹಿಂದಿ ಹೇರಿಕೆ ಮತ್ತು ಸಾಮ್ರಾಜ್ಯಶಾಹಿಯ ವಿರುದ್ಧ ನಡೆಸುತ್ತಿರುವ ಒಗ್ಗಟ್ಟಿನ ಹೋರಾಟಕ್ಕೆ ಗಂಭೀರ ಹಾನಿಯುಂಟುಮಾಡುತ್ತದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮೊದಲಾದ ದ್ರಾವಿಡ ಭಾಷೆಗಳು ಒಂದಾಗಿ ನಿಲ್ಲಬೇಕಾದ ಈ ಸಂದರ್ಭದಲ್ಲಿ, ಈ ಜವಾಬ್ದಾರಿಯಿಲ್ಲದ ಹೇಳಿಕೆಯು ಭಾಷಿಕ ಸಮುದಾಯಗಳ ನಡುವೆ ಒಡಕು ಮತ್ತು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಕೀಳುಮಟ್ಟದ ರಾಜಕೀಯ ತಂತ್ರವಾಗಿದೆ. ಇದು ಕೇವಲ ಕನ್ನಡಿಗರಿಗೆ ಅವಮಾನವಲ್ಲ, ದಕ್ಷಿಣ ಭಾರತದ ಎಲ್ಲ ಭಾಷೆಗಳ ಗೌರವಕ್ಕೆ ಧಕ್ಕೆ ತರುವ ಕೃತ್ಯವಾಗಿದೆ” ಎಂದು ದೂರಿದ್ದಾರೆ.

“ಕಮಲ್ ಹಾಸನ್ ಅವರು ಒಬ್ಬ ಅತ್ಯುತ್ತಮ ಕಲಾವಿದರಾಗಿದ್ದು, ಕನ್ನಡ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಇಂತಹ ಹೇಳಿಕೆಗಳಿಂದ ಕನ್ನಡಿಗರು ಮತ್ತು ತಮಿಳರ ನಡುವೆ ದ್ವೇಷವನ್ನು ಹುಟ್ಟುಹಾಕುವುದು ಸರಿಯಲ್ಲ. ಅವರು ತಕ್ಷಣವೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡು, ಕನ್ನಡಿಗರ ಭಾವನೆಗಳಿಗೆ ಗೌರವ ತೋರಬೇಕೆಂದು ಒತ್ತಾಯಿಸುತ್ತೇವೆ. ಕನ್ನಡಿಗರೆಲ್ಲರೂ ಈ ರೀತಿಯ ದುರುದ್ದೇಶಪೂರಿತ ಹೇಳಿಕೆಗಳ ವಿರುದ್ಧ ಒಗ್ಗಟ್ಟಾಗಿ ಧ್ವನಿಯೆತ್ತಬೇಕು” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X