ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

Date:

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಸುಪ್ರಿಯಾ ಶ್ರೀನಾಟೆಗೆ ಈ ಬಾರಿಯ ಲೋಕಸಭಾ ಚುನಾವಣೆ ಕಣದಿಂದ ಕಾಂಗ್ರೆಸ್ ಗೇಟ್​ ಪಾಸ್​ ಕೊಟ್ಟಿದೆ.

- Advertisement -

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಕ್ಷೇತ್ರದಲ್ಲಿ ಸುಪ್ರಿಯಾ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಆದರೆ, ಅವರು ನೀಡಿದ್ದ ಅಪಮಾನಕರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಅವರಿಗೆ ನೀಡಿದ್ದ ಟಿಕೆಟ್‌ಅನ್ನು ಕಾಂಗ್ರೆಸ್ ಹಿಂಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2019ರಲ್ಲಿ ಸುಪ್ರಿಯಾ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಆದರೂ ಕೂಡ ಕಾಂಗ್ರೆಸ್‌ ಈ ಬಾರಿಯೂ ಟಿಕೆಟ್‌ ನೀಡಿತ್ತು. ಆದರೆ, ಕಂಗನಾ ರಣಾವತ್ ವಿರುದ್ಧದ ಟೀಕೆಯಿಂದ ಅವರು ಟಿಕೆಟ್ ಕಳೆದುಕೊಂಡಿದ್ದಾರೆ. ಅವರ ಬದಲಿಗೆ, ವೀರೇಂದ್ರ ಚೌಧರಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

“ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗಿ ತನ್ನ ಕೆಲಸದ ಮೇಲೆ ಗಮನ ಹರಿಸಲು ಬಯಸುತ್ತೇನೆ. ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿದ್ದು, ಆ ಸ್ಥಾನಕ್ಕೆ ಅಭ್ಯರ್ಥಿಯನ್ನೂ ಸೂಚಿಸಿದ್ದೇನೆ” ಎಂದು ಸುಪ್ರಿಯಾ ಶ್ರಿನಾಟೆ ಮಾಧ್ಯಮವೊಂದಕ್ಕೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...