ಕರವೇ ನಾರಾಯಣಗೌಡ ಬಿಡುಗಡೆಗೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹ

Date:

Advertisements

ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದನ್ನು ಕನ್ನಡ ಸಾಹಿತ್ಯ ಪರಿಷತ್‌ ಖಂಡಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, “ವಿನಾಕರಣ ಬಂಧನಕ್ಕೆ ಒಳಪಡಿಸಿರುವುದನ್ನು ಖಂಡಿಸುತ್ತೇನೆ. ಈ ಪ್ರತಿಭಟನೆಯು ವಾಣಿಜ್ಯೋದ್ಯಮ/ಬ್ಯಾಂಕ್/ಅಂಗಡಿಗಳು/ಮಾಲ್ ಗಳು /ಹೋಟೆಲ್ ಮೊದಲಾದ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯೇ ಇರಬೇಕು ಎನ್ನುವ ರಾಜ್ಯ ಸರ್ಕಾರದ ನಿಯಮದ ಜಾರಿಗಾಗಿ ಅವರು ಒತ್ತಾಯಿಸಿದ್ದು ಕಾನೂನು ಸಮ್ಮತವೇ ಆಗಿದೆ” ಎಂದಿದ್ದಾರೆ.

“ಈ ಪ್ರತಿಭಟನೆಯ ಕುರಿತು ಟಿ ಎ ನಾರಾಯಣಗೌಡ ಸಾಕಷ್ಟು ಮುಂಚೆಯೇ ಸಾಮಾಜಿಕ ಜಾಲತಾಣ ಕರಪತ್ರ, ಜಾಹೀರಾತುಗಳ ಮೂಲಕ ಪ್ರಕಟಣೆ ನೀಡಿದ್ದರು. ಹೀಗಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸದೆ ಪ್ರತಿಭಟನೆಯ ಅನಿವಾರ್ಯತೆಗೆ ಸಿಲುಕಿಸಿ ಈಗ ಬಂಧನಕ್ಕೆ ಕಾರಣವಾಗಿರುವುದು ಕನ್ನಡ ನಾಮಫಲಕಗಳನ್ನು ಹಾಕದೆ ಇದ್ದರೂ ನಡೆಯುತ್ತದೆ ಎನ್ನುವ ಪರಭಾಷಿಕರ ಉಡಾಫೆ ಧೋರಣೆಯನ್ನು ಬೆಂಬಲಿಸಿದಂತಾಗಿದೆ” ಎಂದಿದ್ದಾರೆ.

Advertisements

“ರಾಜ್ಯ ಸರ್ಕಾರವು ಮತ್ತು ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನಕಾರರ ವಿಷಯದಲ್ಲಿ ಸಂವೇದನಾಶೀಲವಾಗಿ ವರ್ತಿಸಬಹುದಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಇಲ್ಲವೆ ಕರ್ನಾಟಕ ರಾಜ್ಯ ವಾಣಿಜ್ಯ ಮಹಾಮಂಡಳಿಯ ನೇತೃತ್ವದಲ್ಲಿ ದುಂಡು ಮೇಜಿನ ಸಭೆಯನ್ನು ಮೊದಲೇ ನಡೆಸಿದ್ದರೆ ಕ.ರ.ವೇ ಪ್ರತಿಭಟನೆಯು ನಡೆಯುತ್ತಲೇ ಇರಲಿಲ್ಲ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

“ಕನ್ನಡಿಗರ ಆಕ್ರೋಶವು ಕಟ್ಟೆಯೊಡೆಯುವ ಮುನ್ನ ಸರ್ಕಾರವು ಟಿ.ಎ.ನಾರಾಯಣಗೌಡ ಮತ್ತು ಬಂಧಿತ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಕನ್ನಡ ಸಾಹಿತ್ಯ ಪರಿಷತ್ತು ಸಹ ವಾಣಿಜ್ಯೋದ್ಯಮ ನಾಮಫಲಕಗಳಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ಸಿಗಬೇಕು ಎನ್ನುವ ಅಭಿಯಾನವನ್ನು ಬೆಂಬಲಿಸುವದರ ಜೊತೆಗೆ ಮುಂದಿನ ದಿನಗಳಲ್ಲಿ ಕನ್ನಡ ಬರಹಗಾರರು, ಎಲ್ಲಾ ಕನ್ನಡ ಸಂಘ ಸಂಸ್ಥೆಗಳು, ಹೋರಾಟಗಾರರು, ಚಲನಚಿತ್ರ ಕಲಾವಿದರು ಸಂಘಟನೆಗಳು ಹಾಗೂ ಎಲ್ಲಾ ಕನ್ನಡಿಗರನ್ನೂ ಸೇರಿಸಿಕೊಂಡು ಪ್ರತಿಭಟನೆಯ ನೇತೃತ್ವ ವಹಿಸಲಿದೆ” ಎಂದು ಮಹೇಶ ಜೋಶಿ ಎಚ್ಚರಿಸಿದ್ದಾರೆ.

ರಾಜ್ಯಪಾಲರಿಗೆ ಪತ್ರ

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಕೂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, “ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಬೃಹತ್ ಹೋರಾಟದ ಪರಿಣಾಮವಾಗಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರನ್ನು ಬಂದಿಸಿದ್ದು, ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಸರ್ಕಾರದ ಈ ನಡೆಯನ್ನು ಖಂಡಿಸುತ್ತದೆ. ಇಂತಹ ಕನ್ನಡ ಕಟ್ಟಾಳು ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕು ಮತ್ತು ಕನ್ನಡ ಪರ ಹೋರಾಟಗಾರರ ಮೇಲಿರುವ ಕೇಸುಗಳನ್ನು ವಜಾಗೊಳಿಸಬೇಕು” ಎಂದು ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X