ಕನ್ನಡ ಬಳಕೆ | ಮಾ.12ಕ್ಕೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಸಚಿವ ತಂಗಡಗಿ

Date:

“ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ, ವಿಧಾನಸಭಾ ಕ್ಷೇತ್ರವಾರು ಖುದ್ದು ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನಾಮಫಲಕ ಅಳವಡಿಕೆ ಪ್ರಗತಿ ಬಗ್ಗೆ ಮಾರ್ಚ್ 12ರಂದು ವರದಿ ನೀಡಬೇಕು” ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024ಕ್ಕೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ಸಚಿವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧೇಯಕದಲ್ಲಿನ ಅಂಶಗಳ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ ಹಲವು ನಿರ್ದೇಶನಗಳನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024ದ ಅನ್ವಯ ವಾಣಿಜ್ಯ ಉದ್ದಿಮೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಇರಲೇಬೇಕು. ಅದಕ್ಕೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿ ಕುರಿತಂತೆ ಖುದ್ದು ಜಿಲ್ಲಾಧಿಕಾರಿಗಳೇ ಪರಿಶೀಲನೆ ನಡೆಸಬೇಕು. ನಿಮ್ಮ ಜಿಲ್ಲೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಪ್ರಗತಿಯನ್ನು ಅವಲೋಕಿಸಬೇಕು. ಮಾರ್ಚ್ 12ರೊಳಗೆ ಪರಿಶೀಲನೆ ನಡೆಸಿ, ವಿಧೇಯಕ ಅನುಷ್ಠಾನದ ಕುರಿತು ವರದಿ ನೀಡಬೇಕು” ಎಂದು‌ ಹೇಳಿದರು.‌

“ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಯ ಗಡುವು ಮಾರ್ಚ್‌ 15ರವರೆಗೆ ಮುಂದೂಡಲಾಗಿದ್ದರೂ, ಈವರೆಗಿನ ಪ್ರಗತಿಯ ವರದಿ ನೀಡಬೇಕು. ಜಿಲ್ಲಾಧಿಕಾರಿ‌ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ‌ ಉಪ ವಿಭಾಗಾಧಿಕಾರಿ ಅಧ್ಯಯತೆಯಲ್ಲಿ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು. ಯಾವುದೇ ಕೆಲಸ ಇದ್ದರೂ ಕಾರಣಗಳನ್ನು ‌ಕೇಳುವುದಿಲ್ಲ. ಖುದ್ದು ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯ ಸಭೆ ನಡೆಸಬೇಕು” ಎಂದು ಸೂಚನೆ‌ ನೀಡಿದರು.

“ಗಡಿ ಜಿಲ್ಲೆಗಳಾದ ಬೆಳಗಾವಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ದಕ್ಷಿಣ ಕನ್ನಡಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಆ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳು ಹೆಚ್ಚಾಗಿ ಪ್ರತಿಭಟನೆ ನಡೆಸುತ್ತಿದ್ದು, ಅದನ್ನು ನಿಯಂತ್ರಿಸಲು ಕನ್ನಡ ನಾಮಫಲಕ ಅಳವಡಿಕೆ ಶೇ. 100ರಷ್ಟು ಆಗಬೇಕು” ಎಂದರು.

“ಖಾನಾಪುರ, ನಿಪ್ಪಾಣಿ, ಚಿಕ್ಕೋಡಿಯಂತಹ ತಾಲೂಕುಗಳಲ್ಲಿ ಮರಾಠಿ ನಾಮಫಲಕ ಅಳವಡಿಕೆಯ ದೂರುಗಳಿದ್ದು, ಅವುಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ತಾಕೀತು ಮಾಡಿದರು.

“ಕನ್ನಡ ನಾಮಫಲಕ ಅಳವಡಿಕೆ ಕುರಿತಂತೆ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನಾಮಫಲಕ ಅಳವಡಿಸದವರಿಗೆ ನೋಟಿಸ್‌ ನೀಡಬೇಕು. ಕನ್ನಡ ನಾಮಫಲಕ ಅಳವಡಿಸದಿದ್ದರೆ ಉದ್ದಿಮೆ ಪರವಾನಗಿ ರದ್ದು ಸೇರಿದಂತೆ ದುಬಾರಿ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ಉದ್ದಿಮೆದಾರರಿಗೆ ನೀಡಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ : 19 ವರ್ಷದ ಯುವಕ ಸೇರಿ ಇಬ್ಬರ ಬಂಧನ

“ಯಾವುದೇ ಕೆಲಸ ಇದ್ದರೂ ಸರ್ಕಾರ ತಂದಿರುವ ಈ ಕಾನೂನನ್ನು ಜಾರಿಗೆ ತರಬೇಕು. ಕೆಲ ಜಿಲ್ಲೆಗಳಿಗೆ ನಾನೇ ಖುದ್ದು ಭೇಟಿ ನೀಡಿ ಪರಿಶೀಲನೆ‌ ನಡೆಸುತ್ತೇನೆ. ಅನುಷ್ಠಾನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ” ಎಂದು ತಿಳಿಸಿದರು‌.

ಈ ಸಂದರ್ಭದಲ್ಲಿ ‌ಇಲಾಖೆ‌ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...