“ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ” ಎಂದು ಬಿಜೆಪಿ ವರಿಷ್ಠ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್‌ನವರ ಚೊಂಬು ಜಾಹೀರಾತಿನ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಜನ ಅವರು ಹೋದ ಕಡೆ ಸೇರುತ್ತಿಲ್ಲ. ಅದಕ್ಕೆ ಜಾಹೀರಾತು ನೀಡುತ್ತಿದ್ದಾರೆ. ಪೊಳ್ಳು ಭರವಸೆ ನೀಡುವ ಜಾಹೀರಾತುಗಳನ್ನು ಯಾರೂ ನಂಬುವುದಿಲ್ಲ. ಚುನಾವಣೆ ಬಳಿಕ ಎಲ್ಲವೂ ಸ್ಪಷ್ಟವಾಗಿ ತಿಳಿಯುತ್ತದೆ” ಎಂದು ಹೇಳಿದರು.
ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ.
– ಶ್ರೀ @BSYBJP, ಮಾಜಿ ಮುಖ್ಯಮಂತ್ರಿಗಳು#CongressFailsKarnataka pic.twitter.com/8cdtIiCjuO
— BJP Karnataka (@BJP4Karnataka) April 21, 2024
“ಸಿದ್ದರಾಮಯ್ಯನವರಿಂದ ಕನ್ನಡಿಗರು ಬದುಕಿನ ಗ್ಯಾರಂಟಿಯನ್ನೇ ಕಳೆದುಕೊಂಡಿದ್ದಾರೆ. ಅವರ ಪೊಳ್ಳು ಜಾಹೀರಾತಿನ ಬಗ್ಗೆ ಜನ ನಂಬಲ್ಲ. ಜನರಿಗೆ ನೀರು, ವಿದ್ಯುತ್ ಗ್ಯಾರಂಟಿ ಇಲ್ಲ. ತೆರಿಗೆ ಹೆಚ್ಚಳವಾಗಿದೆ. ಕಾಂಗ್ರೆಸ್ ಈ ಬಾರಿ 50 ಸೀಟಿಗಿಂತ ಹೆಚ್ಚಿಗೆ ಬರುವುದಿಲ್ಲ. ರಾಜ್ಯದಲ್ಲಿ ಒಂದು ಕ್ಷೇತ್ರವನ್ನೂ ಗೆಲ್ಲಲಾಗುವುದಿಲ್ಲ. ನಿಮಗೆ ಆತ್ಮವಿಶ್ವಾಸ ಇದ್ದರೆ, ನೀವು ಗೆಲ್ಲುವ 5 ಲೋಕಸಭಾ ಕ್ಷೇತ್ರಗಳ ಹೆಸರನ್ನು ಹೇಳಿ” ಎಂದು ಸವಾಲು ಹಾಕಿದ್ದಾರೆ.
“ಇಡೀ ದೇಶದಲ್ಲಿ ಮೋದಿ ವಾತಾವರಣ ಇದೆ. ಇಂದಿನಿಂದ ಪುನಃ ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನಿರೀಕ್ಷೆಗೂ ಮೀರಿ ಜನ ಸೇರುತ್ತಿದ್ದಾರೆ. ನಮ್ಮ ಪರವಾಗಿ ಜನರು ಬರುತ್ತಿದ್ದಾರೆ” ಎಂದು ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಹಾಗೂ ಮಾಜಿ ಸಿಎಂ ಡಿ ವಿ ಸದಾನಂದ ಗೌಡ, ಛಲವಾದಿ ನಾರಾಯಣಸ್ವಾಮಿ ಇದ್ದರು.
