ಸಿದ್ದರಾಮಯ್ಯರಿಂದ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ: ಬಿ ಎಸ್ ಯಡಿಯೂರಪ್ಪ

Date:

“ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ” ಎಂದು ಬಿಜೆಪಿ ವರಿಷ್ಠ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆರೋಪಿಸಿದ್ದಾರೆ.

- Advertisement -

ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್‌ನವರ ಚೊಂಬು ಜಾಹೀರಾತಿನ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಜನ ಅವರು ಹೋದ ಕಡೆ ಸೇರುತ್ತಿಲ್ಲ. ಅದಕ್ಕೆ ಜಾಹೀರಾತು ನೀಡುತ್ತಿದ್ದಾರೆ. ಪೊಳ್ಳು ಭರವಸೆ ನೀಡುವ ಜಾಹೀರಾತುಗಳನ್ನು ಯಾರೂ ನಂಬುವುದಿಲ್ಲ. ಚುನಾವಣೆ ಬಳಿಕ ಎಲ್ಲವೂ ಸ್ಪಷ್ಟವಾಗಿ ತಿಳಿಯುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಿದ್ದರಾಮಯ್ಯನವರಿಂದ ಕನ್ನಡಿಗರು ಬದುಕಿನ ಗ್ಯಾರಂಟಿಯನ್ನೇ ಕಳೆದುಕೊಂಡಿದ್ದಾರೆ. ಅವರ ಪೊಳ್ಳು ಜಾಹೀರಾತಿನ ಬಗ್ಗೆ ಜನ ನಂಬಲ್ಲ. ಜನರಿಗೆ ನೀರು, ವಿದ್ಯುತ್ ಗ್ಯಾರಂಟಿ ಇಲ್ಲ. ತೆರಿಗೆ ಹೆಚ್ಚಳವಾಗಿದೆ. ಕಾಂಗ್ರೆಸ್‌ ಈ ಬಾರಿ 50 ಸೀಟಿಗಿಂತ ಹೆಚ್ಚಿಗೆ ಬರುವುದಿಲ್ಲ. ರಾಜ್ಯದಲ್ಲಿ ಒಂದು ಕ್ಷೇತ್ರವನ್ನೂ ಗೆಲ್ಲಲಾಗುವುದಿಲ್ಲ. ನಿಮಗೆ ಆತ್ಮವಿಶ್ವಾಸ ಇದ್ದರೆ, ನೀವು ಗೆಲ್ಲುವ 5 ಲೋಕಸಭಾ ಕ್ಷೇತ್ರಗಳ ಹೆಸರನ್ನು ಹೇಳಿ” ಎಂದು ಸವಾಲು ಹಾಕಿದ್ದಾರೆ.

“ಇಡೀ ದೇಶದಲ್ಲಿ ಮೋದಿ ವಾತಾವರಣ ಇದೆ. ಇಂದಿನಿಂದ ಪುನಃ ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನಿರೀಕ್ಷೆಗೂ ಮೀರಿ‌ ಜನ ಸೇರುತ್ತಿದ್ದಾರೆ. ನಮ್ಮ ಪರವಾಗಿ ಜನರು ಬರುತ್ತಿದ್ದಾರೆ” ಎಂದು ಬಿ.ಎಸ್.‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಹಾಗೂ ಮಾಜಿ ಸಿಎಂ ಡಿ ವಿ ಸದಾನಂದ ಗೌಡ, ಛಲವಾದಿ ನಾರಾಯಣಸ್ವಾಮಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...