ಜಯಪ್ರಕಾಶ್‌ ಹೆಗ್ಡೆ ವರದಿ | ಜಾತಿ ಜಾತಿಗಳ ನಡುವೆ ಛೂ ಬಿಡುವುದು ಬೇಡ; ವೈಜ್ಞಾನಿಕ ವರದಿ ಬೇಕು: ಶಾಮನೂರು

Date:

ಸಿಎಂ ಸಿದ್ದರಾಮಯ್ಯ ಅವರು ಎಲ್ಲಿ ನಮ್ಮ ಮಾತು ಕೇಳುತ್ತಾರೆ? ಜಾತಿ ಗಣತಿಯನ್ನು ಸರ್ಕಾರ ಸ್ವೀಕರಿಸಿದ್ದು ತಪ್ಪು ಅಲ್ಲ. ಆದರೆ ಅದು ವೈಜ್ಞಾನಿಕವಾಗಿರಬೇಕು. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಉಪಪಂಗಡಗಳು ಇವೆ. ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ತೋರಿಸಿರುವ ಮಾಹಿತಿ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಸರ್ಕಾರ ಸ್ವೀಕರಿಸಿರುವ ಜಾತಿ ಗಣತಿ ವರದಿ ವೈಜ್ಞಾನಿಕವಾಗಿ ಇಲ್ಲ. ಹೇಗೆ ಅವೈಜ್ಞಾನಿಕವಾಗಿದೆ ಎಂಬುದನ್ನು ಸಾಬೀತುಪಡಿಸಿ ತೋರಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಆಯೋಗದ ಅಧ್ಯಕ್ಷರು ನಮ್ಮ ವರದಿ ವೈಜ್ಞಾನಿಕವಾಗಿ ಇದೆ ಎನ್ನುತ್ತಾರೆ. ಆದರೆ, ಅದು ಹೇಗೆ ಅವೈಜ್ಞಾನಿಕವಾಗಿದೆ ಎಂಬುದನ್ನು ಸಾಬೀತು ಮಾಡುತ್ತೇವೆ. 9 ವರ್ಷದ ಹಿಂದಿನ ಸರ್ವೆಯನ್ನು ಈಗ ವರದಿ ಸಲ್ಲಿಸಲಾಗಿದೆ” ಎಂದರು.

“ಮನೆಯಲ್ಲೇ ಕುಳಿತು ಜಾತಿಗಣತಿ ವರದಿ ತಯಾರಿಸಿದ ಮಾಹಿತಿ ಇದೆ. ಸರ್ಕಾರ ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಬೇಕು. ಈಗ ಸ್ವೀಕರಿಸಿರುವ ಜಾತಿ ಗಣತಿ ವರದಿಯನ್ನು ಸರ್ಕಾರ ಏನು ಮಾಡುತ್ತದೆ ಎಂದು ನೋಡುತ್ತೇವೆ. ನಾವು ಸುಮ್ಮನೆ ಕೂರುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾಂತರಾಜ ವರದಿ ಬಹಿರಂಗಗೊಳಿಸದಂತೆ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ: ನಾಳೆ ವಿಚಾರಣೆ

“9 ವರ್ಷದ ಹಳೆಯದು ಬೇಡ. ವೈಜ್ಞಾನಿಕವಾಗಿ ಇನ್ನೊಮ್ಮೆ ಜಾತಿ ಗಣತಿ ಮಾಡಬೇಕು. ಕಾಂತರಾಜು ವರದಿಯನ್ನು ಈಗ ಅವರು ತಂದುಕೊಟ್ಟಿದ್ದಾರೆ. ನಮ್ಮ ಜನಸಂಖ್ಯೆ ಎರಡು ಕೋಟಿಗೂ ಹೆಚ್ಚಿದೆ. ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾರೆ. ಈ ವರದಿಯನ್ನು ಮೂಲೆಗೆ ಹಾಕುವುದೇ ಒಳ್ಳೆಯದು” ಎಂದು ತಿಳಿಸಿದರು.

“ಜಾತಿ ಗಣತಿ ವರದಿ ಸ್ವೀಕಾರದಿಂದ ಕಾಂಗ್ರೆಸ್​​ಗೆ ಸಮಸ್ಯೆ ಆಗಲಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾನು ಈಗ ಏನನ್ನೂ ಕೂಲಂಕಷವಾಗಿ ಹೇಳಲು ಹೋಗುವುದಿಲ್ಲ. ಸಿಎಂ ಸಿದ್ದರಾಮಯ್ಯ ನಮ್ಮ ಅಭಿಪ್ರಾಯಗಳಿಗೆ ಎಲ್ಲಿ ಮನ್ನಣೆ ಕೊಡುತ್ತಾರೆ. ಈ ವರದಿಯಿಂದ ಜಾತಿ ಜಾತಿಗಳ ನಡುವೆ ಸಂಘರ್ಷ ಆಗುತ್ತದೆ. ಜಾತಿ ಜಾತಿಗಳ ನಡುವೆ ಅವರು ಛೂ ಬಿಡ್ತಿದ್ದಾರೆ. ನಾವು ಎಸ್​​ಸಿ ಎಸ್​ಟಿ ವಿರುದ್ಧವಿಲ್ಲ. ಆದರೆ ನಮ್ಮ ಸಂಖ್ಯೆ ಡಬಲ್ ಇದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...