ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು

Date:

ಕನ್ನಡದಲ್ಲಿ ನಾಮಫಲಕ ಅಳವಡಿಸುವ ವಿಚಾರವಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದ ಪ್ರತಿಭಟನೆಯ ವೇಳೆ ದಾಂಧಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ನ್ಯಾಯಾಲಯವು ಇಂದು(ಜ.6) ಜಾಮೀನು ಮಂಜೂರು ಮಾಡಿದೆ.

- Advertisement -

ಜಾಮೀನು ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ದೇವನಹಳ್ಳಿಯ 5ನೇ ಹೆಚ್ಚುವರಿ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಅವರು ಜಾಮೀನು ಮಂಜೂರು ಮಾಡಿ, ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಎಲ್ಲ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ವೇದಿಕೆ ಬೃಹತ್ ರ್‍ಯಾಲಿ ನಡೆಸಿದ್ದ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಬೋರ್ಡ್​ಗಳನ್ನು ಧ್ವಂಸ ಮಾಡಲಾದ ಘಟನೆಗೆ ಸಂಬಂಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡರನ್ನು ಡಿ.28ರಂದು ಬಂಧಿಸಲಾಗಿತ್ತು.

ನಾರಾಯಣಗೌಡ ಸೇರಿದಂತೆ ಕರವೇಯ ಒಟ್ಟು 29 ಜನ ಕಾರ್ಯಕರ್ತರನ್ನು ಬಂಧಿಸಿದ್ದ ಚಿಕ್ಕಜಾಲ ಪೊಲೀಸರು, ದೇವನಹಳ್ಳಿಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಜನವರಿ 10ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ಆದೇಶಿಸಿದ್ದರು. ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಈ ನಡುವೆ ಜ.2ರಂದು ನಾರಾಯಣಗೌಡರವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅಂದು ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಜಾಮೀನು ನೀಡಲು ನಿರಾಕರಿಸಿ, ವಿಚಾರಣೆಯನ್ನು ಜ.6ಕ್ಕೆ ಮುಂದೂಡಿದ್ದರು. ಬಂಧಿತರಾದ 11 ದಿನ ನಂತರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರಿಗೆ ಜಾಮೀನು ಮಂಜೂರು ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ: ಚುನಾವಣಾ ಆಯೋಗದ ಸಮರ್ಥನೆಗಿಳಿದ ಬಿಜೆಪಿ!

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮತದಾರರ ಪಟ್ಟಿಯಿಂದ...

ಮತ ಕಳವು ದೇಶದ್ರೋಹದ ಕೃತ್ಯ: ಎಕ್ಸ್‌ಪ್ರೆಸ್ ವರದಿ ಬೆನ್ನಲ್ಲೇ ಇಸಿ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಚುನಾವಣಾ ಆಯೋಗದ (ಇಸಿಐ) ಆಂತರಿಕ ನಿರ್ಧಾರಗಳ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’...

ಸಿಇಸಿ ಗ್ಯಾನೇಶ್ ಕುಮಾರ್ ‘ಏಕವ್ಯಕ್ತಿ ಸರ್ವಾಧಿಕಾರಿ’: ಮುಖ್ಯ ಚುನಾವಣೆ ಆಯುಕ್ತರ ವಜಾಕ್ಕೆ ವಿಪಕ್ಷಗಳ ಆಗ್ರಹ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ...