ಅಮುಲ್‌ ಮಾರಾಟಕ್ಕೆ ಮುಂದಾದರೆ ಕನ್ನಡಿಗರು ದಂಗೆ ಏಳುತ್ತಾರೆ: ನಾರಾಯಣಗೌಡ ಎಚ್ಚರಿಕೆ

Date:

  • ನಂದಿನಿ ವಿರುದ್ಧದ ಪಿತೂರಿಗೆ ತಕ್ಕ ಪಾಠ ಕಲಿಸುದಾಗಿ ಕರವೇ ಹೇಳಿಕೆ
  • ‘ಕರ್ನಾಟಕದ ಬ್ಯಾಂಕುಗಳ ವಿಲೀನದ ಪಿತೂರಿಯಂತೆಯೇ ಇದು ಸಹ’

ಇ-ಕಾಮರ್ಸ್ ಅಡಿಯಲ್ಲಿ ಅಮುಲ್ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಧ್ಯಕ್ಷ ಟಿ ಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಸಂಸ್ಥೆಗಳು ಅಮುಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ ಎಂದು ನಾರಾಯಣಗೌಡ ಹೇಳಿದ್ದಾರೆ.

“ಕರ್ನಾಟಕ ರಕ್ಷಣಾ ವೇದಿಕೆ ಅಮುಲ್ ವಿರುದ್ಧ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ” ಎಂದಿದ್ದಾರೆ.

“ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮುಲ್‌ ಹಾಲು – ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು: ಎಚ್‌ ಡಿ ಕುಮಾರಸ್ವಾಮಿ

“ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಮುಲ್‌ – ನಂದಿನಿ ವಿಲೀನದ ಕುರಿತು ಮಾತನಾಡಿದ ಬೆನ್ನಲ್ಲೇ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿ ರೂಪಿಸಿದೆ ಎಂಬುದು ಸ್ಪಷ್ಟವಾಗುತ್ತದೆ. ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಕಾಲ ಇದಾಗಿದೆ” ಎಂದು ಹೇಳಿದ್ದಾರೆ.

“ಅಮುಲ್‌ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

“ಲಾಭದಲ್ಲಿದ್ದ ಕರ್ನಾಟಕದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಯಿತು. ಅದೇ ರೀತಿ ಅಮುಲ್‌ ಜೊತೆಗೆ ನಂದಿನಿಯನ್ನು ವಿಲೀನಗೊಳಿಸುವ ಹುನ್ನಾರ ನಡೆದಿದೆ” ಎಂದಿದ್ದಾರೆ.

“ಕರ್ನಾಟಕದ ರೈತರ ಬದುಕಿಗೆ ಕೊಳ್ಳಿ ಇಡಲು ಬಂದರೆ ಕನ್ನಡಿಗರು ದಂಗೆ ಏಳುತ್ತಾರೆ ಎಂಬುದನ್ನು ಮರೆಯಬೇಡಿ” ಎಂದು ನಾರಾಯಣ ಗೌಡ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...