ನಮಗೆ ಪ್ರಜಾಪ್ರಭುತ್ವ ಬೇಕು: ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ಹೆಚ್ಚಿದ ಪ್ರತಿಭಟನೆ

Date:

ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕಾವು ಮತ್ತಷ್ಟು ಹೆಚ್ಚಾಗಿದೆ. ಈಗಾಗಲೇ ಕಾರ್ಗಿಲ್‌ನಲ್ಲಿ ಪ್ರತಿಭಟನೆ ನಡೆದಿದೆ. ಇನ್ನು ಮಾರ್ಚ್ 24ರಂದು ಸಾಮಾಜಿಕ ಕಾರ್ಯಕರ್ತ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಹಲವರು ಭಾಗಿಯಾಗಲಿದ್ದಾರೆ. ಈಗಾಗಲೇ ಹಲವಾರು ದಿನಗಳಿಂದ ಸೋನಮ್ ವಾಂಗ್ಚುಕ್ ಕೊರೆಯುವ ಚಳಿಯಲ್ಲಿಯೂ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ, ಮಾರ್ಚ್ 4ರಂದು ಕೇಂದ್ರ ಗೃಹ ಸಚಿವಾಲಯ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರ ಸಭೆ ನಡೆದಿದೆ. ಆದರೆ, ಮಾತುಕತೆ ವಿಫಲಗಿದ್ದರಿಂದ ಬುಧವಾರ ಲಡಾಖ್‌ನ ಕಾರ್ಗಿಲ್ ಜಿಲ್ಲೆಯಲ್ಲಿ ಮುಷ್ಕರಗಳು ನಡೆಯುತ್ತಿವೆ. ಪ್ರತಿಭಟನೆಗಳ ಸ್ವರೂಪ ತೀವ್ರತೆ ಪಡೆದುಕೊಳ್ಳುತ್ತಿದ್ದು, ಕಾರ್ಗಿಲ್ ಪ್ರಜಾಪ್ರಭುತ್ವ ಒಕ್ಕೂಟದ (ಕೆಡಿಎ) ಮುಖಂಡರು ಮತ್ತು ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

ಇದನ್ನು ಓದಿದ್ದೀರಾ?  ರಾಜ್ಯ ಸ್ಥಾನಮಾನ ಬೇಡಿಕೆಗೆ ಆಗ್ರಹಿಸಿ ಲಡಾಖ್‌ನಲ್ಲಿ ಸಾವಿರಾರು ಜನರಿಂದ ಪ್ರತಿಭಟನೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಡಾಖ್‌ಗೆ ರಾಜ್ಯತ್ವ ನೀಡಲು, ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಲು ಆಗ್ರಹಿಸಿ ಬುಧವಾರ ಸಾವಿರಾರು ಜನರು ರ್‍ಯಾಲಿ ನಡೆಸಿದ್ದಾರೆ. ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ‘ನಮಗೆ ಪ್ರಜಾಪ್ರಭುತ್ವ ಬೇಕು’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ. ಹಾಗೆಯೇ ಕೇಂದ್ರದೊಂದಿಗಿನ ಹಲವಾರು ಸುತ್ತಿನ ಮಾತುಕತೆ ವಿಫಲವಾಗಿದ್ದು, ದಿನ ಕಳೆದಂತೆ ಪ್ರತಿಭಟನೆಯ ಕಾವು ಅಧಿಕವಾಗುತ್ತಿದೆ.

2019ರ ಲೋಕಸಭೆ ಚುನಾವಣೆ ಮತ್ತು 2020 ರ ಸ್ಥಳೀಯ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ, ಕೇಂದ್ರಾಡಳಿತ ಪ್ರದೇಶಕ್ಕೆ 6ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆಯ ಬಗ್ಗೆ ಬಿಜೆಪಿ ಭರವಸೆ ನೀಡಿತು. 2019ರಲ್ಲಿ ಲಡಾಖ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತು. ಆದರೆ ಈವರೆಗೂ ಭರವಸೆಯನ್ನು ಈಡೇರಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...

ಷೇರು ಮಾರುಕಟ್ಟೆಯ ಅಕ್ರಮದ ತನಿಖೆಗಾಗಿ ಟಿಎಂಸಿ ನಿಯೋಗದಿಂದ ಸೆಬಿ ಅಧಿಕಾರಿಗಳ ಭೇಟಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರ ನಿಯೋಗ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ)...