ರಾಜ್ಯ ಬಜೆಟ್‌ ಗಾತ್ರ 3.27 ಲಕ್ಷ ಕೋಟಿ ರೂ. | 5 ಗ್ಯಾರಂಟಿ ಯೋಜನೆಗಳಿಗೆ ಬೇಕು ರೂ. 52,000 ಕೋಟಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2023ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ.ಇದೆ.

3.27 ಲಕ್ಷ ಕೋಟಿ ರೂ. ರಾಜ್ಯ ಬಜೆಟ್ ಸಾಲ ಮರುಪಾವತಿಗೆ 22,441 ಕೋಟಿ ರೂ ವ್ಯಯವಾಗಲಿದೆ. ಇನ್ನು ಬಂಡವಾಳ ಹೂಡಿಕೆಗಳಿಗೆ 54,374 ಕೋಟಿ ರೂ ವೆಚ್ಚ ಮಾಡಲಾಗುತ್ತದೆ. ಇನ್ನು ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ. ವ್ಯಯವಾಗಲಿದೆ.

ಅನ್ನಭಾಗ್ಯ:

Advertisements
  • ಎಲ್ಲ ಅರ್ಹ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಆಹಾರಧಾನ್ಯ ವಿತರಣೆ.
  • ಆಹಾರ ಧಾನ್ಯ ಲಭ್ಯವಾಗುವವರೆಗೂ ಪ್ರತಿ ಫಲಾನುಭವಿಗೆ 170 ರೂ. ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆ.
  • ಅಂದಾಜು 4.42 ಕೋಟಿ ಫಲಾನುಭವಿಗಳಿಗೆ ಅನುಕೂಲ
  • ಈ ಯೋಜನೆಗೆ 10,275 ಕೋಟಿ ರೂ. ಅನುದಾನ

ಗೃಹ ಜ್ಯೋತಿ:

  • ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಅವರ ಸರಾಸರಿ ಬಳಕೆಯ ಜೊತೆಗೆ ಶೇ.10 ರಷ್ಟು ಹೆಚ್ಚುವರಿ ಯೂನಿಟ್
  • 200 ಯೂನಿಟ್‌ ವರೆಗೆ ವಿದ್ಯುತ್ ಉಚಿತ
  • ವಾರ್ಷಿಕ ಅಂದಾಜು 13,910 ಕೋಟಿ ರೂ. ವೆಚ್ಚದಲ್ಲಿ ಜಾರಿ
  • 2 ಕೋಟಿಗಿಂತ ಅಧಿಕ ಗೃಹ ಬಳಕೆದಾರರಿಗೆ ಈ ಯೋಜನೆಯಿಂದ ಅನುಕೂಲ
  • ಪ್ರತಿ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಗೆ ಇಂಧನ ಖಾತರಿ ನೀಡುವ ಯೋಜನೆ

ಈ ಸುದ್ದಿ ಓದಿದ್ದೀರಾ? ರಾಜ್ಯಕ್ಕೆ ವಿಶೇಷ ಅನುದಾನ ನೀಡದಂತೆ ತಡೆ ನೀಡಿದ್ದೇ ನಿರ್ಮಲಾ ಸೀತಾರಾಮನ್ : ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ

  • ಸರ್ಕಾರಿ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ
  • ವಾರ್ಷಿಕ ಅಂದಾಜು 4,000 ಕೋಟಿ ರೂ. ವೆಚ್ಚದ ನಿರೀಕ್ಷೆ
  • ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚಟುವಟಿಕೆ ಕೈಗೊಳ್ಳಲು ಅವಕಾಶ. ಪ್ರಯಾಣದ ವೆಚ್ಚ ಉಳಿತಾಯ, ಸುರಕ್ಷಿತ ಪ್ರಯಾಣದ ವಾತಾವರಣ
  • ನಿತ್ಯ ಸುಮಾರು 50-60 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ

ಗೃಹಲಕ್ಷ್ಮಿ ಯೋಜನೆ

  • ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2000 ರೂಪಾಯಿ ನೆರವು ನೇರ ವರ್ಗಾವಣೆ
  • ಈ ಯೋಜನಗೆ ವಾರ್ಷಿಕ ಅಂದಾಜು 30 ಸಾವಿರ ಕೋಟಿ ರೂ ವೆಚ್ಚವಾಗುವ ನಿರೀಕ್ಷೆಯಿದ್ದು, ಇದು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದೆ.
  • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಲಿದ್ದು, ಬೆಲೆ ಏರಿಕೆಯಿಂದ ತತ್ತರಿಸಿರುವ ಕುಟುಂಬಗಳಿಗೆ ನೆಮ್ಮದಿ
  • ಈ ಯೋಜನೆಯಿಂದ 1.30 ಕೋಟಿ ಮಹಿಳೆಯರಿಗೆ ಲಾಭ

ಯುವನಿಧಿ

  • 2023ರಲ್ಲಿ ಪದವಿ ಪಡೆದು 6 ತಿಂಗಳವರೆಗೂ ಉದ್ಯೋಗ ಲಭಿಸದ ಯುವಜನರಿಗೆ 2 ವರ್ಷದವರೆಗೂ ಅಥವಾ ಉದ್ಯೋಗ ಸಿಗುವವರೆಗೂ ನಿರುದ್ಯೋಗ ಭತ್ಯೆ
  • ಪದವೀಧರರಿಗೆ ಪ್ರತಿ ತಿಂಗಳು 3000 ಸಾವಿರ ರೂ., ಡಿಪ್ಲೋಮೋ ಹೊಂದಿರುವವರಿಗೆ ತಿಂಗಳಿಗೆ 1,500 ರೂ. ನೀಡಿಕೆ
  • ಯುವನಿಧಿ ಯೋಜನೆಯಿಂದ ಸುಮಾರು 3.7 ಲಕ್ಷ ಯುವಜನರಿಗೆ ಈ ಯೋಜನೆಯಿಂದ ಲಾಭ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X