ಬಜೆಟ್ | ₹350 ಕೋಟಿ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

Date:

ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ₹15,145 ಕೋಟಿಯಷ್ಟು ಅನುದಾನವನ್ನು ಮೀಸಲಿಡಲಾಗಿದೆ.

- Advertisement -

ಈ ಪೈಕಿ ಗ್ರಾಮೀಣ ಪ್ರದೇಶದ ಜನರಿಗೆ 24×7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ ಎರಡು ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜೊತೆಗೆ, ಪ್ರಸಕ್ತ ಸಾಲಿನಲ್ಲಿ 15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಉಳಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಘೋಷಿಸಲಾದ ಯೋಜನೆ ಹೀಗಿದೆ:

  • ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳ ಸ್ಥಾಪನೆ. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ.
  • ತಾಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 280 ಕೋಟಿ ರೂ. ಗಳ ವೆಚ್ಚದಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ನಿರ್ಮಾಣ
  • ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನ
  • ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪನೆ
  • ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 130 ಕೋಟಿ ರೂ. ಗಳ ಅನುದಾನ
  • ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲೂಕು ಆಸ್ಪತ್ರೆಗಳಿಗೆ ಒದಗಿಸುವ ಭರವಸೆ
  • ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರದ ಸ್ಥಾಪನೆ
  • ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ
  • ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ Hub and Spoke ಮಾದರಿಯಲ್ಲಿ ವಿಸ್ತರಿಸುವ ಮೂಲಕ STEMI (ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸುವುದು. ಇದಲ್ಲದೇ STEMI and Stroke ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂ.
  • ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸುವಿಕೆ
  • 2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 True-Nat Machines ಗಳನ್ನು ಖರೀದಿಸಲು 6 ಕೋಟಿ ರೂ. ಗಳ ಅನುದಾನ
  • ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ
    7 ಕೋಟಿ ರೂ.
  • ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು 50 ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪನೆ
  • ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆ.
  • ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು.
  • ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು Hub and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನ
  • ಮಧುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಆಯುಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕವನ್ನು ಸ್ಥಾಪನೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...