ರಾಜ್ಯ ಬಜೆಟ್ | ಮೀನುಗಾರರ ಆರ್ಥಿಕ ಅಭಿವೃದ್ಧಿಗಾಗಿ ಮೀನುಗಾರಿಕಾ ನೀತಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ರಾಜ್ಯ ಬಜೆಟ್‌ಅನ್ನು ಶುಕ್ರವಾರ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಮೀನುಗಾರಿಕೆಗೆ ಒತ್ತು ನೀಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ರಾಜ್ಯದಲ್ಲಿರುವ ಮೀನುಗಾರರು ಮತ್ತು ಮೀನುಗಾರಿಕೆಯಲ್ಲಿನ ಆರ್ಥಿಕ ಅಭಿವೃದ್ದಿಗಾಗಿ ಮೀನುಗಾರಿಕಾ ನೀತಿಯನ್ನು ರೂಪಿಸುವುದಾಗಿ ತಿಳಿಸಿದ್ದಾರೆ.

- Advertisement -

ಮೀನುಗಾರಿಕೆ ವಲಯಕ್ಕೆ ನೀಡಲಾಗಿರುವ ಬಜೆಟ್‌ನ ಮುಖ್ಯಾಂಶಗಳು;

  1. ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಮೀನುಗಾರಿಕಾ ನೀತಿ ರಚನೆ.
  2. ಮಂಗಳೂರಿನ ಮೀನುಗಾರಿಕೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾಗಿ ದ್ವಿಗುಣಗೊಳಿಸಲು ಕ್ರಮ
  3. ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್‌ ಸಹಯೋಗದಲ್ಲಿ ಅಭಿವೃದ್ಧಿ – 30 ಕೋಟಿ ರೂ.ಅನುದಾನ
  4. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.
  5. ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು (ಒಂದು ಲಕ್ಷ ರೂ. ಮಿತಿ) ಸಹಾಯಧನ.
  6. ಮೈಸೂರಿನಲ್ಲಿ ಹೈ-ಟೆಕ್‌ ಮತ್ಸ್ಯದರ್ಶಿನಿ ಹೋಟೆಲ್ ಆರಂಭ.
  7. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು ‘ಮಲ್ಟಿ-ಲೆವೆಲ್‌ ಪಾರ್ಕಿಂಗ್‌’ ವ್ಯವಸ್ಥೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ.
  8. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...