ರಾಜ್ಯ ಬಜೆಟ್ | ನಬಾರ್ಡ್‌ ಅಡಿ ರೈತರಿಗೆ 28,000 ಕೋಟಿ ರೂ. ಸಾಲ ನೀಡುವ ಗುರಿ

Date:

Advertisements

ಕೃಷಿ ಕ್ಷೇತ್ರದಲ್ಲಿ ತೊಡಗಿರುವ ರೈತರಿಗೆ ಸಾಲ ಸೌಲಭ್ಯ ಒದಗಿಸಲು ಸಹಕಾರ ಇಲಾಖೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ನಬಾರ್ಡ್‌ ಯೋಜನೆಯಡಿ ರಿಯಾಯತಿ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡಲಾಗುತ್ತದೆ. ನಬಾರ್ಡ್‌ನ ಅನುದಾನದಲ್ಲಿ 58% ಕಡಿತವಾಗಿದ್ದರೂ ಸಹ, ರಾಜ್ಯ ಸರ್ಕಾರದ ನಿಗದಿತ ಗುರಿಯಂತೆ ರಾಜ್ಯದ ರೈತರಿಗೆ 28,000 ಕೋಟಿ ರೂ. ಸಾಲ ವಿತರಿಸಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಹಕಾರ ಇಲಾಖೆ ಅಡಿ ನಾನಾ ಯೋಜನೆಗಳಿಗೆ ಬಜೆಟ್‌ ಹಂಚಿಕೆಯ ಪ್ರಮುಖ ಅಂಶಗಳು;

  1. 2024-25ನೇ ಸಾಲಿನಲ್ಲಿ ನಬಾರ್ಡ್‌ ಅಡಿಯಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದೆ.
  2. ಈ ವರ್ಷ ನಬಾರ್ಡ್‌ಗೆ ಅನುದಾನವನ್ನು ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಿಸುವ ಗುರಿ.
  3. 2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿ ಮನ್ನಾ ಮಾಡಲಾಗಿದೆ.
  4. ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್‌ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿವೆ. ಈ ಆಸ್ಪತ್ರೆಗಳಲ್ಲಿ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿದ್ದಾರೆ.
  5. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆ ಹಣದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, 3,000 ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಕ್ರಮ.
  6. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 450 ರೂ. ಪ್ರೋತ್ಸಾಹಧನ. ಎಂಎಸ್‌ಪಿ ಅಡಿಯಲ್ಲಿ ಖರೀದಿ ಮತ್ತು ಪ್ರೋತ್ಸಾಹಧನಕ್ಕೆ ಒಟ್ಟು 138 ಕೋಟಿ ರೂ. ಬಜೆಟ್‌ ಹಂಚಿಕೆ.
  7. ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು – i) ರಾಜ್ಯದ ಎಲ್ಲ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್‌ಲೈನ್‌ನಲ್ಲಿ ಅಳವಡಿಕೆ. ii) ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಅವ್ಯವಹಾರವನ್ನು ತಡೆಯಲು ಸಹಾಯವಾಣಿಯನ್ನು ಪ್ರಾರಂಭ. iii) ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿಗಳನ್ನು ಡಿಜಿಟಲೀಕರಣ.
  8. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನ.
  9. ರಾಜ್ಯದ ಎಲ್ಲ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ನೀಡಲಾಗುವ ವಿಮಾ ಮೊತ್ತವನ್ನು 1 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹೆಚ್ಚಳ.
  10. ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಸ್ಥಾಪನೆ
  11. ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪನೆ.
  12. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂ. ಅನುದಾನ.
  13. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು KKRDB ವತಿಯಿಂದ 50 ಕೋಟಿ ರೂ. ಅನುದಾನ.
  14. KKRDB ವತಿಯಿಂದ ಕಲಬುರಗಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ ನಿರ್ಮಾಣ.
  15. KKRDB ಸಹಯೋಗದಿಂದ 60 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಉಗ್ರಾಣಗಳ ನಿರ್ಮಾಣ.
  16. ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆ ಪ್ರಾರಂಭ.
  17. ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್‌ ಹೂವಿನ ಮಾರುಕಟ್ಟೆ ಹಾಗೂ ಕೆ.ಜಿ.ಎಫ್‌ ನಲ್ಲಿ ರೈತರ ಆಧುನಿಕ ಮಾರುಕಟ್ಟೆಗಳ ನಿರ್ಮಾಣ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X