ಸುವರ್ಣಸೌಧದ ಅಂಗಳದಲ್ಲಿ ಡಿ.12ರಂದು ‘ಕರ್ನಾಟಕ ಸಂಭ್ರಮ’ ವಿಶೇಷ ಕಾರ್ಯಕ್ರಮ

Date:

ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ಕ್ಕೆ 50 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ವಿವಿಧ ಕಾರ್ಯಕ್ರಮಗಳು ನಡೆಯುತಿದ್ದು, ಅದರಂತೆ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಹ ಡಿ.12ರಂದು ಸಂಜೆ 6 ಗಂಟೆಗೆ ಕರ್ನಾಟಕ ಸಂಭ್ರಮ-50ರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಹೇಳಿದರು.

- Advertisement -

ಸುವರ್ಣಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾರ್ಯಕ್ರಮದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳಿಗೆ ತಿಳಿಸಿದ್ದು, ಕಾರ್ಯಕ್ರಮದ ಸಿದ್ಧತೆಯು ಭರ್ಜರಿಯಾಗಿ ನಡೆದಿದೆ. ಅಂದು 1 ಗಂಟೆ ವೇದಿಕೆ ಕಾರ್ಯಕ್ರಮ ಮತ್ತು 2 ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿದಂತೆ ಸಚಿವ ಸಂಪುಟದ ಎಲ್ಲ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಎಲ್ಲ ಗಣ್ಯರು ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ ವಿಧಾನ ಮಂಡಲದ ಹಿಂದಿನ ಎಲ್ಲ ವಿಧಾನಸಭೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತನ ಸಭಾಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಸನ್ಮಾನಿಸಲು ಯೋಜಿಸಲಾಗಿದೆ” ಎಂದು ತಿಳಿಸಿದರು.

“ಮೂಡುಬಿದಿರೆಯಲ್ಲಿ ಪ್ರತಿ ಬಾರಿ ನಡೆಯುವ ಆಳ್ವಾಸ ವಿರಾಸತ್ ಮತ್ತು ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಡಿಸೆಂಬರ್ 12ರಂದು ಸುವರ್ಣ ವಿಧಾನಸೌಧದ ಅಂಗಳದಲ್ಲಿ ಆಯೋಜಿಸಿ ಉತ್ತರ ಕರ್ನಾಟಕ ಭಾಗದ ಜನತೆಗೆ ದಕ್ಷಿಣ ಕರ್ನಾಟಕ ಭಾಗದ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ” ಎಂದರು.

“ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಲಾಗಿದೆ. ವಿದ್ಯಾರ್ಥಿ ಯುವಜನರು, ಮಹಿಳೆಯರು, ಮಕ್ಕಳು, ನೌಕರರು ಸೇರಿದಂತೆ ಎಲ್ಲಾ ಸಾರ್ವಜನಿಕರಿಗೆ ಕಾರ್ಯಕ್ರಮಕ್ಕೆ ಸೂಕ್ತ ಸಾರಿಗೆ ವ್ಯವಸ್ಥೆ ಮತ್ತು ಊಟದ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

“ಸುವರ್ಣ ವಿಧಾನಸೌಧವು ಉತ್ತರ ಕರ್ನಾಟಕ ಭಾಗದ ಜನರ ಸ್ವಾಭಿಮಾನದ ಸಂಕೇತವಾಗಿದೆ. ಈ ಸೌಧದ ನಿರ್ಮಾಣದಿಂದ ಈ ಭಾಗದ ಎಷ್ಟೋ ಸಮಸ್ಯೆಗಳಿಗೆ ಪರಿಹಾರ ದೊರೆಕಿದೆ. ಈ ಭಾಗದ ಅನೇಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಸಾಧ್ಯವಾಗಿದೆ. ಸಾರ್ವಜನಿಕರ ಒತ್ತಾಸೆಯಂತೆ ಸುವರ್ಣ ವಿಧಾನಸೌಧದ ಪೂರ್ಣ ಬಳಕೆಯ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಗುವುದು” ಎಂದು ಇದೇ ವೇಳೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಹೊಸ ಪರಂಪರೆ

“ವಾಡಿಕೆಯಂತೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ಭಾರಿಯ ಅಧಿವೇಶನದ ವಿಶೇಷತೆಯಾಗಿ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮ ರೂಪಿಸಲು ನಿರ್ಧರಿಸಿದ್ದೇವೆ. ಅಧಿವೇಶನ ಸಂದರ್ಭದಲ್ಲಿ ನಾಡುನುಡಿಗೆ ಸಂಬಂಧಿಸಿದ ಕಾರ್ಯಕ್ರಮ ರೂಪಿಸುತ್ತಿರುವುದು ಹೊಸ ಪರಂಪರೆಯಾಗಿದೆ” ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...