ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಸಭೆ ನಡೆಸಿ, ಕೂಡಲೇ ಬರಪರಿಹಾರ ಬಿಡುಗಡೆಗೆ ಆಗ್ರಹ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿಂದು ಭೇಟಿಯಾಗಿ, ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.

- Advertisement -

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲೂಕುಗಳಲ್ಲಿ 223 ತಾಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಅನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, ₹18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಇದರಲ್ಲಿ ₹4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, ₹12,577.86 ಕೋಟಿ ರೂ. ತುರ್ತು ಪರಿಹಾರ, ₹566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ ₹363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, ₹83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್‌ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ 2023ರ ಸೆಪ್ಟೆಂಬರ್ 22ರಿಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ ₹17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು.

ಇದರಲ್ಲಿ ತುರ್ತು ಪರಿಹಾರದ ₹12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.

ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ ₹18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪ್ರಾಪ್ತ ಪುತ್ರನಿಂದ ಕಾರು ಅಪಘಾತ: ಕೇರಳದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

ಕೊಚ್ಚಿಯಲ್ಲಿ 17 ವರ್ಷದ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್-ಬೆಂಜ್ ಕಾರು ಡಿಕ್ಕಿ...

ಯುಪಿಯಲ್ಲಿ ಮುಂದುವರೆದ ಮರ್ಯಾದೆಗೇಡು ಹತ್ಯೆ; ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ

ಪ್ರೀತಿಸಿ ಮದುವೆಯಾದನೆಂಬ ಕಾರಣಕ್ಕೆ ದಲಿತ ಯುವಕನನ್ನು ಪತ್ನಿಯ ಕುಟುಂಬದವರು ಕೊಲೆ ಮಾಡಿರುವ...

AI ಬಳಸಿ ಒಬ್ಬರೇ 10 ಮಂದಿಯ ಕೆಲಸ ಮಾಡಬಹುದು: ಜೊಹೊ ಸಂಸ್ಥಾಪಕ ಶ್ರೀಧರ್ ವೆಂಬು ಎಚ್ಚರಿಕೆ

AI ತಂತ್ರಜ್ಞಾನವು ಉದ್ಯೋಗ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ತರುವ ಸಾಧ್ಯತೆಯಿದ್ದು,...

‘ಎಕ್ಸ್‌ಪ್ರೆಸ್‌ವೇ’ಗಳಲ್ಲಿ 120 ಕಿ.ಮೀ ವೇಗದಲ್ಲಿ‌ ವಾಹನ ಚಲಾಯಿಸಿದ್ರೂ ದಂಡವಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ದೇಶದ ಎಕ್ಸ್‌ಪ್ರೆಸ್‌ವೇಗಳಲ್ಲಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸುವ ವಾಹನಗಳಿಗೂ ಯಾವುದೇ...