‘ಕರ್ನಾಟಕ ಎಫ್‌ಡಿಐ ಕಳೆದುಕೊಳ್ಳುತ್ತಿದೆ’ ಎಂದ ವಿತ್ತ ಸಚಿವೆಗೆ ಕೇಂದ್ರದ ಡೇಟಾ ಉಲ್ಲೇಖಿಸಿ ಸಿಎಂ ತಿರುಗೇಟು

Date:

Advertisements

ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಾವೇಶವೊಂದರಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿಯೇ ಕರ್ನಾಟಕವು ವಿದೇಶಿ ಹೂಡಿಕೆಯನ್ನು (ಎಫ್‌ಡಿಐ) ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರದ ಡೇಟಾ ಮೂಲಕವೇ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ (ಟ್ವೀಟ್) ಮಾಡಿರುವ ಸಿಎಂ, “ಇತ್ತೀಚೆಗಷ್ಟೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದು ಸಮಾವೇಶದಲ್ಲಿ ಕರ್ನಾಟಕದ ಬಗ್ಗೆ ಆಧಾರರಹಿತ ಹೇಳಿಕೆ ನೀಡಿದ್ದಾರೆ. ಒಂದು ವರ್ಷದ ಹಿಂದೆ ಕರ್ನಾಟಕವು ಹೂಡಿಕೆಗೆ ನೆಚ್ಚಿನ ತಾಣವಾಗಿತ್ತು, ಆದರೆ ಈಗ ಗ್ಯಾರಂಟಿ ಯೋಜನೆಯಿಂದಾಗಿ ಆ ಸ್ಥಾನ ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದರು. ನಿರ್ಮಲಾ ಸೀತಾರಾಮನ್ ಅವರೇ, ಕರ್ನಾಟಕವು ಈಗಲೂ ಎಫ್‌ಡಿಐಗೆ ನೆಚ್ಚಿನ ತಾಣವಾಗಿದೆ” ಎಂದು ಹೇಳಿದ್ದಾರೆ.

“ಭಾರತ ಸರ್ಕಾರದ ವೆಬ್‌ಸೈಟ್ investindia.gov.in ಪ್ರಕಾರ ನಾವು ಹೇಳುವುದಾದರೆ 2023-24 ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ಎಫ್‌ಡಿಐ ಪಡೆದ ಟಾಪ್ 5 ರಾಜ್ಯಗಳಲ್ಲಿ ಕರ್ನಾಟಕ ಕೂಡಾ ಒಂದು. ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಶೇಕಡ 30, ಕರ್ನಾಟಕ ಶೇಕಡ 22, ಗುಜರಾತ್ ಶೇಕಡ 17, ದೆಹಲಿ ಶೇಕಡ 13 ಮತ್ತು ತಮಿಳುನಾಡು ಶೇಕಡ 5ರಷ್ಟು ಎಫ್‌ಡಿಐ ಸ್ವೀಕರಿಸಿದೆ” ಎಂದು ಸಿದ್ಧರಾಮಯ್ಯ ವಿವರಿಸಿದರು.

Advertisements

“ಇನ್ನೊಂದೆಡೆ ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಎಫ್‌ಡಿಐ ಬೆಳವಣಿಗೆಯ ಸ್ಥಿತಿಯನ್ನು ನೀವೇ ನೋಡಿ. ಭಾರತದಲ್ಲಿ ಎಫ್‌ಡಿಐ ಕಡಿಮೆಯಾಗುತ್ತಿದೆ. ಯುಪಿಎ ಸರ್ಕಾರ ಇದ್ದಾಗ ಹತ್ತು ವರ್ಷದಲ್ಲಿ ಶೇಕಡ 27 ರಷ್ಟು ಎಫ್‌ಡಿಐ ಬೆಳವಣಿಗೆಯಾಗಿದೆ. ಆದರೆ ನಿಮ್ಮ ಸರ್ಕಾರ ಅಧಿಕಾರ ನಡೆಸಿದ 10 ವರ್ಷಗಳಲ್ಲಿ ವರ್ಷಕ್ಕೆ ಶೇಕಡ 6.6ಕ್ಕೆ ಇಳಿದಿದೆ. ಇತರರಿಗೆ ಲೆಕ್ಚರ್ ನೀಡುವ ಮುನ್ನ ಸ್ವಲ್ಪ ನಿಮ್ಮ ಮನೆಯನ್ನು ನೋಡಿಕೊಳ್ಳಿ” ಎಂದು ಸಿದ್ಧರಾಮಯ್ಯ ಅವರು ಟಾಂಗ್ ನೀಡಿದ್ದಾರೆ.

“ಪ್ರತಿ ಕುಟುಂಬಕ್ಕೆ ವಾರ್ಷಿಕ 24,000 ರೂಪಾಯಿಗಳ ನಗದು ವರ್ಗಾವಣೆ ಮತ್ತು ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಮಹಿಳೆಯರ ಸಬಲೀಕರಣವನ್ನು ಮಾಡುವ ನಮ್ಮ ಸರ್ಕಾರದ ನಿರ್ಧಾರವನ್ನು ನೀವು ವಿರೋಧಿಸುತ್ತಿದ್ದರೆ, ಅದು ನಿಮ್ಮ ನೀತಿಯಾಗಿದೆ. ನಮ್ಮ ಜನರೊಂದಿಗೆ ನಿಲ್ಲುವುದು ಮತ್ತು ಜನರಿಗೆ ಆರ್ಥಿಕ ಸಹಾಯ ಮಾಡಿ ಸಬಲೀಕರಣಗೊಳಿಸುವುದು ನಮ್ಮ ನೀತಿಯಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ನಿಮಗೆ ದೇಣಿಗೆ ನೀಡುವ ದೊಡ್ಡ ಉದ್ಯಮಿಗಳ ಪರವಾಗಿ ನೀವು ನಿಲ್ಲುತ್ತೀರಿ. ನಾವು ಜನರೊಂದಿಗೆ ನಿಲ್ಲುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X