ದೆಹಲಿ ಚಲೋ | ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಲ್ಲಬೇಡಿ: ಸಿಎಂ ಸಿದ್ದರಾಮಯ್ಯ

Date:

“ಅನುದಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ. ಇದು ದ್ರೋಹ. ಅನಿವಾರ್ಯವಾಗಿ ದೆಹಲಿಗೆ ಬಂದು ಪ್ರತಿಭಟನೆ ನಡೆಸಬೇಕಾಯಿತು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ದ್ರೋಹ, ವಂಚನೆ ಖಂಡಿಸಿ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.

“ಕೇಂದ್ರ ಸರ್ಕಾರದ ಅಂಕಿ ಅಂಶಗಳೇ ನಮ್ಮ‌ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಹೇಳುತ್ತಿವೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ನಮಗೇ ಏಕೆ ಈ ಮಟ್ಟದ ಅನ್ಯಾಯ” ಎಂದು ಪ್ರಶ್ನಿಸಿದ ಸಿಎಂ, “ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಂದು ಹಾಕಬೇಡಿ, ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ ಎಂದು ಒತ್ತಾಯಿಸಲು ನಮ್ಮ ಪ್ರತಿಭಟನೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೋದಿ ಅವರು ಪ್ರಧಾನಿ ಆದ ಬಳಿಕ ರಚಿಸಲಾದ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಆಯಿತು. ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿಗೆ ಅನುದಾನ ಕೊಡುವ ಬಗ್ಗೆ ನಮಗೆ ತಕರಾರುಗಳಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ” ಎಂದು ಸಿಎಂ ತಿಳಿಸಿದರು.

“ನಾವು ಕನ್ನಡಿಗರು 430000 ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಾಸ್ ಬರುವುದು ಕೇವಲ 50,000 ಕೋಟಿ ಮಾತ್ರ. ಅಂದರೆ ನಾವು ಕೊಡುವ ಪ್ರತಿ 100 ರೂ ನಲ್ಲಿ 13 ರೂ ಮಾತ್ರ ನಮಗೆ ವಾಪಾಸ್ ಬರ್ತದೆ. ಇದಕ್ಕಿಂತ ಭೀಕರ ಅನ್ಯಾಯ ಏನಿದೆ? ಈ ಅನ್ಯಾಯವನ್ನು ನಾವು ಸಹಿಸಬೇಕಾ?” ಎಂದು ಕೇಳಿದರು.

“15 ನೇ ಹಣಕಾಸು ಆಯೋಗದಿಂದಾಗಿ ನಮಗೆ 62098 ಕೋಟಿ ರೂ ನಮಗೆ ತೆರಿಗೆಯೊಂದರಲ್ಲೇ ನಮಗೆ ಅನ್ಯಾಯ ಆಗಿದೆ. ಇದನ್ನು ನಾವು ಪ್ರಶ್ನಿಸಬಾರದಾ? ಈ ಕಾರಣಗಳಿಗೇ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಬಿಜೆಪಿ ನಿರಂತರ ಸುಳ್ಳುಗಳ ಮೂಲಕ ತಮ್ಮ ದ್ರೋಹವನ್ನು ಮರೆ ಮಾಚಲು ನೋಡುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ ಈ ಪ್ರಮಾಣದಲ್ಲೂ ನಮಗೆ ಹಂಚಿಕೆ ಆಗಿಲ್ಲ. ಇದನ್ನು ಕೇಂದ್ರದ ಅಂಕಿ ಅಂಶಗಳೇ ಹೇಳುತ್ತಿವೆ” ಎಂದು ಸಿಎಂ ತಿಳಿಸಿದರು.

ಕಳೆದ 10 ವರ್ಷಗಳಿಂದ ಹಂತ ಹಂತವಾಗಿ ರಾಜ್ಯದ ಪಾಲಿನ ತೆರಿಗೆ ಪಾಲು, ಕೇಂದ್ರದ ಅನುದಾನದ ಪಾಲು ನಿರಂತರವಾಗಿ ಕಡಿಮೆ ಆಗುತ್ತಿರುವುದನ್ನು ಮುಖ್ಯಮಂತ್ರಿಗಳು ಪ್ರತೀ ವರ್ಷದ ಅಂಕಿ ಅಂಶಗಳೊಂದಿಗೆ ವಿವರಿಸಿದರು.

“ಕೇಂದ್ರದ ಬಜೆಟ್ ಗಾತ್ರ ದುಪ್ಪಟ್ಟಾಗಿದೆ. ಆದರೆ ರಾಜ್ಯದ ಪಾಲಿನ ತೆರಿಗೆ ಪಾಲು ಅರ್ಧಕ್ಕಿಂತ ಕಡಿಮೆ ಆಗಿದೆ. ನಮ್ಮ ಪಾಲು ದುಪ್ಪಟ್ಟಾಗಬೇಕಾದ ಜಾಗದಲ್ಲಿ ಅರ್ಧಕ್ಕಿಂತ ಕಡಿಮೆ ಆಗಿರುವುದು ಅನ್ಯಾಯ ಅಲ್ಲವೇ? ಜಿಎಸ್‌ಟಿಯಲ್ಲಿ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಇನ್ನೂ ಬೃಹತ್ತಾಗಿದೆ. ಜಿಎಸ್‌ಟಿಯಲ್ಲಿ ಆಗುವ ಅನ್ಯಾಯವನ್ನು ವಿಶೇಷ ಪರಿಹಾರ ಕೊಟ್ಟು ಸರಿದೂಗಿಸುವುದಾಗಿ ಹೇಳಿದರು. ಈಗ ಪರಿಹಾರ ಕೊಡುತ್ತಿಲ್ಲ. ಇದರಿಂದ 59000 ಕೋಟಿಗೂ ಅಧಿಕ ಅನ್ಯಾಯ, ವಂಚನೆ ಆಯಿತು” ಎಂದು ಸಿಎಂ ದೂರಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೇಂದ್ರ ಸರ್ಕಾರ ತಾಯಿ ಇದ್ದಂತೆ. ರಾಜ್ಯ ಸರ್ಕಾರಗಳು ಆ ತಾಯಿಯ ಮಕ್ಕಳು. ಹಸಿದ ಮಕ್ಕಳಲ್ಲಿ ಯಾವುದೇ ಭೇದ – ಭಾವ ತೋರದೆ ಇರುವುದನ್ನು ಸಮಾನವಾಗಿ ಹಂಚಿ ಅವರ ಹಸಿವನ್ನು ನೀಗಿಸುವುದು ತಾಯಿಯಾದವಳ ಕರ್ತವ್ಯ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ...

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...