ಯುಪಿ ಮೇಲೆ ಕರ್ನಾಟಕದ ಪ್ರಭಾವ; ವಿರೋಧಿ ಪಾಳಯದಲ್ಲಿ ಬದಲಾಗುತ್ತಿದೆ ರಾಜಕೀಯ ಸಮೀಕರಣ

Date:

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭರ್ಜರಿ ಗೆಲುವು ಕೇವಲ ರಾಜ್ಯ ರಾಜಕೀಯದ ಮೇಲೆ ಮಾತ್ರವಲ್ಲದೆ, ಹಲವು ರಾಜ್ಯಗಳ ರಾಜಕೀಯದ ಮೇಲೂ ಪ್ರಭಾವ ಬೀರುತ್ತಿದೆ. ಪ್ರತಿಪಕ್ಷಗಳ ಪಾಳಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗಿವೆ; ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಧ್ರುವೀಕರಣಗೊಳ್ಳಲು ನೆರವಾಗುತ್ತಿದೆ.

ಏಕಕಾಲದಲ್ಲಿ ನಡೆದ ಕರ್ನಾಟಕದ ವಿಧಾನಸಭಾ ಚುನಾವಣೆ ಮತ್ತು ಉತ್ತರ ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಗಿದ ಬಳಿಕ, ಯುಪಿಯ ರಾಜಕೀಯ ಸಮೀಕರಣಗಳಲ್ಲಿ ಬದಲಾವಣೆಗಳು ಗೋಚರಿಸುತ್ತಿವೆ.

ಚುನಾವಣೆಗೆ ಮುಂಚಿನ ಚಿತ್ರಣ ಕಾಂಗ್ರೆಸ್ ಪಾಲಿಗೆ ನಿರಾಶದಾಯಕವಾಗಿತ್ತು. ಭಾರತದ ಅತೀ ಹಳೆಯ ಪಕ್ಷವು ಹಲವಾರು ರಾಜ್ಯಗಳಲ್ಲಿ ತನ್ನ ಪ್ರಾಬಲ್ಯತೆಯನ್ನು ಕಳೆದುಕೊಳ್ಳಲಾರಂಭಿಸಿತ್ತು. ಈ ಹೊತ್ತಿನಲ್ಲಿ ಕರ್ನಾಟಕದ ಗೆಲುವು ಪಕ್ಷದ ಕಾರ್ಯಕರ್ತರಿಗೆ ಆನೆ ಬಲ ತಂದುಕೊಂಡಿದೆ. ಕರ್ನಾಟಕದಲ್ಲಿಯೂ ಪಕ್ಷವು ತನ್ನ ಕಳೆದುಹೋಗಿದ್ದ ವೈಭವವನ್ನು ಮರಳಿ ಪಡೆದಿದೆ. ಮಾತ್ರವಲ್ಲದೆ, ಪಕ್ಷವು ತನ್ನ ಪುನರುಜ್ಜೀವನಕ್ಕಾಗಿ ಹೋರಾಡುತ್ತಿರುವ ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕಾರ್ಯಕರ್ತರಲ್ಲಿ ನೈತಿಕ ಶಕ್ತಿಯನ್ನು ಹೆಚ್ಚಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ (ಯುಎಲ್‌ಬಿ) ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ, ಕಾಂಗ್ರೆಸ್‌ ತನ್ನ ಮತ ಹಂಚಿಕೆಯನ್ನು ಹೆಚ್ಚಿಸಿಕೊಂಡಿದೆ. ಸಮಾಜವಾದಿ ಪಕ್ಷ (ಎಸ್‌ಪಿ), ಬಿಎಸ್‌ಪಿ ಮತ್ತು ಎಐಎಂಐಎಂಗಳ ಸ್ಪರ್ಧೆಯ ಹೊರತಾಗಿಯೂ ಮುಸ್ಲಿಂ ಮತಗಳು ಹೆಚ್ಚಾಗಿ ಕಾಂಗ್ರೆಸ್‌ಗೆ ದಕ್ಕಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವಿನ ಬಳಿಕ, ಯುಪಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್‌ಗೆ ಸಾಧ್ಯವೆಂದು ಅಲ್ಲಿನ ಮುಸ್ಲಿಮರು ನಂಬಿದ್ದಾರೆ. ಉತ್ತರ ಪ್ರದೇಶದಲ್ಲಿ ಒಂದು ದಶಕದ ನಂತರ ಕಾಂಗ್ರೆಸ್‌ಗೆ ಆಶ್ಚರ್ಯಕರ ರೀತಿಯಲ್ಲಿ ಮತಗಳು ಹೆಚ್ಚುತ್ತಿವೆ.

ಉತ್ತರ ಪ್ರದೇಶದಲ್ಲಿ ತಾವು ಬೆಂಬಲಿಸಿದ ಎಸ್‌ಪಿ ಮತ್ತು ಬಿಎಸ್‌ಪಿಯಂತಹ ಪಕ್ಷಗಳು ತಮ್ಮನ್ನು ರಾಜಕೀಯಕ್ಕಾಗಿ ಬಳಸಿಕೊಂಡಿವೆ ಎಂದು ಮುಸ್ಲಿಮರು ಅರಿತುಕೊಂಡಿದ್ದಾರೆ. ಯುಎಲ್‌ಬಿ ಚುನಾವಣಾ ಫಲಿತಾಂಶವು ಒಂದು ಸೂಚನೆಯಾಗಿದ್ದರೆ, 2024ರ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಮನದಿಚ್ಛೆಯಿಂದ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾರೆ ಎಂದು ಕಾಂಗ್ರೆಸ್‌ ವಕ್ತಾರ ಅಂಶು ದೀಕ್ಷಿತ್ ಹೇಳಿದ್ದಾರೆ.

ಕಾಂಗ್ರೆಸ್‌ನತ್ತ ಮುಸ್ಲಿಮರ ಒಲವು ಹೆಚ್ಚಾಗಿದೆ. ಇದು ರಾಜ್ಯದಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ಕೈ ನಾಯಕರು ನಂಬಿದ್ದಾರೆ.

ಈ ಪ್ರವೃತ್ತಿಯು ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷದಲ್ಲಿ ಕಳವಳ ಹುಟ್ಟುಹಾಕಿದೆ. ಅಲ್ಲಿ, ಮುಸ್ಲಿಂ ಮತಗಳು ಕಾಂಗ್ರೆಸ್‌ನತ್ತ ವಾಲಿದರೆ, ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿಯ ನಿರೀಕ್ಷೆಗಳು ಹುಸಿಯಾಗುತ್ತವೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ಮತ್ತು ಉತ್ತರ ಪ್ರದೇಶದ ಯುಎಲ್‌ಬಿ ಚುನಾವಣೆಗೂ ಮುನ್ನ ಯಾರ ಮೈತ್ರಿಯೂ ತಮಗೆ ಬೇಡವೆಂಬ ನಿಲುವಿನಲ್ಲಿ ಎಸ್‌ಪಿ ಇತ್ತು. ಈಗ ಅದು ತನ್ನ ನಿಲುವು ಬದಲಿಸಿಕೊಳ್ಳುತ್ತಿದೆ ಎನ್ನಲಾಗಿದೆ.

ಆದಾಗ್ಯೂ, ಯುಎಲ್‌ಬಿ ಚುನಾವಣೆಗಳು ಸ್ಥಳೀಯ ಸಮಸ್ಯೆಗಳ ಆಧಾರದ ಮೇಲೆ ನಡೆಯುವುದರಿಂದ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ಮೇಲೆ ಈ ಫಲಿತಾಂಶಗಳ ಪರಿಣಾಮವನ್ನು ನಿರ್ಣಯಿಸುವುದು ಅಸಾಧ್ಯವೆಂದು ಎಸ್‌ಪಿ ವಕ್ತಾರ ಉದಯವೀರ್ ಹೇಳಿದರು.

ಈ ಸುದ್ದಿ ಓದಿದ್ದೀರಾ?: ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

ಲೋಕಸಭಾ ಚುನಾವಣೆಯಲ್ಲಿ ಎಎಪಿ ಮೈತ್ರಿಕೂಟದ ಭಾಗವಾಗಲು ಒಪ್ಪಿದರೆ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ 2 ಕ್ಷೇತ್ರಗಳನ್ನು ನೀಡಬಹುದು ಎಂದು ಎಸ್‌ಪಿ ಅಭಿಪ್ರಾಯಪಟ್ಟಿತ್ತು. ಆದರೆ, ಇತ್ತೀಚಿನ ಚುನಾವಣಾ ಫಲಿತಾಂಶಗಳಿಂದಾಗಿ ಕಾಂಗ್ರೆಸ್‌ 18-20 ಸ್ಥಾನಗಳನ್ನು ಕೇಳಬಹುದು ಎಂಬ ಅಭಿಪ್ರಾಯಗಳಿವೆ.

ಅಲ್ಲದೆ, ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಲು ಪ್ರಸ್ತುತ ರಚಿಸಲಾಗಿರುವ ಕಾಂಗ್ರೆಸ್ ನೇತೃತ್ವದ 19 ಪಕ್ಷಗಳ ಸಂಯುಕ್ತ ವಿರೋಧ ಒಕ್ಕೂಟದಲ್ಲಿ ಎಸ್‌ಪಿ ಸೇರ್ಪಡೆಯಾಗಿದೆ. ಇದು, ಕಾಂಗ್ರೆಸ್‌ನ ಹೊಸ ಶಕ್ತಿಯನ್ನು ಎಸ್‌ಪಿ ಒಪ್ಪಿಕೊಳ್ಳುತ್ತಿರುವ ಮೊದಲ ಸಂಕೇತವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಆದರೆ, ಎಸ್‌ಪಿ ಈಗಿರುವಂತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆಯೇ? ಮುಸ್ಲಿಂ ಮತಗಳನ್ನು ಕ್ರೋಡೀಕರಿಸುತ್ತಿರುವ ಕಾಂಗ್ರೆಸ್‌ ಮತ್ತು ಮುಸ್ಲಿಂ ಮತಗಳನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡಿದ್ದ ಎಸ್‌ಪಿ ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಮತ್ತು ಎಐಎಂಐಎಂನಂತಹ ಪಕ್ಷಗಳನ್ನು ಮುಸ್ಲಿಂ ಮತ ವಿಭಜನೆ ಮಾಡುವುದನ್ನು ತಡೆಯುವತ್ತ ಗಮನಹರಿಸಬೇಕು ಎಂದು ವಿಶ್ಲೇಷಕರು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌...

ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...