ರಾಜ್ಯದಲ್ಲಿ ಕೋವಿಡ್ ರೂಪಾಂತರಿ ತಳಿ ಜೆಎನ್1 ಬಗ್ಗೆ ಹಲವು ಕಡೆ ವರದಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಆ ಕುರಿತು ಪರಾಮರ್ಶಿಸಲು ರಾಜ್ಯ ಸರ್ಕಾರ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶಿಸಿದೆ.
ನಾಲ್ವರು ಸಚಿವರುಗಳನ್ನೊಳಗೊಂಡ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಇರಲಿದ್ದಾರೆ. ಉಳಿದಂತೆ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಸದಸ್ಯರಾಗಿ ಇರಲಿದ್ದಾರೆ.