ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ ದಳ ರಚಿಸುವುದಾಗಿ ನಿನ್ನೆ ತಿಳಿಸಿದ್ದ ಸರ್ಕಾರವು, ಇಂದು ಅಧಿಕೃತವಾಗಿ ತಂಡವನ್ನು ರಚಿಸಿದೆ.
ಎಸ್‌ಐಟಿ ತಂಡದ ಮುಖ್ಯಸ್ಥರನ್ನಾಗಿ ಸಿಐಡಿಯ ಎಡಿಜಿಪಿ(ಅಪರ ಪೊಲೀಸ್ ಮಹಾನಿರ್ದೇಶಕ)ಯಾಗಿರುವ, ಹಿರಿಯ ಐಪಿಎಸ್ ಅಧಿಕಾರಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಇವರು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥ ಕೂಡ ಆಗಿದ್ದರು.
#JustIN Karnataka Government Formed Special Investation Team(SIT) Led By Bijay Kumar Singh (CID ADGP) To Investigate Alleged #Prajwalrevanna ‘sex scandal’ case
Mrs. Suman D Pannekar (IPS) & Mrs. Seema Latkar will in SIT Team(Official GO)@zoo_bear @ChekrishnaCk @siddaramaiah pic.twitter.com/7blmtUL27d
— Irshad Venur (@muhammadirshad6) April 28, 2024
ವಿಶೇಷ ತನಿಖಾ ತಂಡದ ಸದಸ್ಯರನ್ನಾಗಿ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಶ್ರೀಮತಿ ಸುಮನ್ ಡಿ ಪನ್ನೇಕರ್ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕಿಯಾಗಿರುವ ಶ್ರೀಮತಿ ಸೀಮಾ ಲಟ್ಕರ್ ಅವರನ್ನು ನೇಮಿಸಿ, ಸರ್ಕಾರ ಆದೇಶ ಹೊರಡಿಸಿದೆ.
ಹಾಸನ ಜಿಲ್ಲೆಯ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮಾನಹಾನಿಗೆ ಕಾರಣರಾದವರ ವಿಚಾರವಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆ, ತಂಡ ರಚನೆಗೆ ಸರ್ಕಾರ ನಿರ್ಧರಿಸಿದೆ.#womenharassment #Sexualexploitation #StopHarassment #SafetyFirst https://t.co/gJDWnAwerE
— Dr Nagalakshmi | ಡಾ. ನಾಗಲಕ್ಷ್ಮಿ (@drnagalakshmi_c) April 28, 2024
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ನಿನ್ನೆ ಪ್ರಕಟಿಸಿದ್ದರು. ಒಳಾಡಳಿತ ಇಲಾಖೆ(ಅಪರಾಧಗಳು)ಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರು ಇಂದು(ಏ.28) ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
