50 ಕೋಟಿ ರೂ.ಗಾಗಿ ಜೀವ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ನಾಯಕ ದೂರು

Date:

Advertisements

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ.

ಉದ್ಯಮಿ ಹಾಗೂ ಜೆಡಿಎಸ್‌ನ ಸಾಮಾಜಿಕ ಮಾಧ್ಯಮದ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ

Advertisements

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ಟಾಟಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಅ. 2ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುಮಾರಸ್ವಾಮಿಯವರ ವಿರುದ್ಧ ಇದೇ ರೀತಿ ಆರೋಪ ಮಾಡಿದ್ದ ವಿಜಯ್ ಟಾಟಾ, ಅದೇ ದಿನ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X