ಕರ್ನಾಟಕದಲ್ಲಿರುವುದು ಅತ್ಯಂತ ಭ್ರಷ್ಟ ಸರಕಾರ: ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ವಾಗ್ದಾಳಿ

Date:

ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು; “ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, “ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಾಂಗ್ರೆಸ್‌ ಸರಕಾರ ಯಾವ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರಕಾರ. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ; ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿದೆ. ಸರಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರಕಾರದ ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಸದನದಲ್ಲಿ ಓದಲೇ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯರು ಮಾಜಿ ಪ್ರಧಾನಿಗಳ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ದೇವೇಗೌಡರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಕಾಂಗ್ರೆಸ್ ಪಕ್ಷದ ಬಗ್ಗೆ ‘ಶೇಮ್‌ ಶೇಮ್‌’ ಎಂದು ಘೋಷಣೆ ಕೂಗಿದರು. 

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು

“ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇ ದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು” ಎಂದು ಒತ್ತಾಯ ಮಾಡಿದರು.

“ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...