ಸುಧೀರ್ ಚೌಧರಿ ಪ್ರಕರಣ: ‘ವಿಚಾರಣೆ ನಡೆಸಬೇಕಾದ ಪ್ರಕರಣವಿದು’ ಎಂದ ಹೈಕೋರ್ಟ್‌

Date:

  • ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್
  • ಎಫ್ಐಆರ್ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದ ಆಜ್‌ ತಕ್, ಸುಧೀರ್ ಚೌಧರಿ

ಕರ್ನಾಟಕ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಲ್ಲದೇ, ದುರುದ್ದೇಶಪೂರ್ವಕವಾಗಿ ಕೋಮು ಪ್ರಚೋದನೆ ನೀಡಿದ್ದ ಹಿನ್ನೆಲೆಯಲ್ಲಿ ಆಜ್‌ ತಕ್‌ನ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಪ್ರಕರಣವನ್ನು ಬುಧವಾರ(ಸೆ.20)ಕ್ಕೆ ಮುಂದೂಡಿರುವ ಕರ್ನಾಟಕ ಹೈಕೋರ್ಟ್‌, ‘ವಿಚಾರಣೆ ನಡೆಸಬೇಕಾದ ಪ್ರಾಥಮಿಕ ಪ್ರಕರಣವಿದು’ ಎಂದು ಅಭಿಪ್ರಾಯಿಸಿದೆ.

ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಆಜ್‌ ತಕ್, ಸುಧೀರ್ ಚೌಧರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ, ‘ವಿಚಾರಣೆ ನಡೆಸಬೇಕಾದ ಪ್ರಾಥಮಿಕ ಪ್ರಕರಣವಿದು. ಅರ್ಜಿದಾರರು ನಿರ್ದಿಷ್ಟ ಸಮುದಾಯದವರ ಬಗ್ಗೆ ದ್ವೇಷ ಹೊಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ದ್ವೇಷ ಹರಡುವ ಉದ್ದೇಶ ಕಂಡುಬಂದರೆ ಅರ್ಜಿ ವಜಾ ಮಾಡಲಾಗುವುದು. ಅಲ್ಲಿಯವರೆಗೆ ಮಧ್ಯಂತರ ತಡೆ ನೀಡುವುದಿಲ್ಲ. ಸದ್ಯ ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವಿಷಯವನ್ನು ವಿಲೇವಾರಿ ಮಾಡಲಾಗುವುದು ಎಂದಿರುವ ಹೈಕೋರ್ಟ್ ನ್ಯಾಯಮೂರ್ತಿ, ತಡೆ ಕೋರಿದ್ದ ಮಧ್ಯಂತರ ಆದೇಶವನ್ನು ನೀಡುವುದಿಲ್ಲ ಎಂದು ತಿಳಿಸಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದಾರೆ.

ಇದೇ ವೇಳೆ, ಸುಧೀರ್ ಚೌಧರಿ ವಿರುದ್ಧ ಬುಧವಾರದವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಕರ್ನಾಟಕ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಲ್ಲದೇ, ದುರುದ್ದೇಶಪೂರ್ವಕವಾಗಿ ಕೋಮು ಪ್ರಚೋದನೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಎಫ್ಐಆರ್ ದಾಖಲಾಗಿತ್ತು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಾಯಕ ಅಧಿಕಾರಿ ಶಿವಕುಮಾರ್ ಎಂಬುವವರು ಆಜ್‌ ತಕ್, ಸುಧೀರ್ ಚೌಧರಿ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಎಫ್ಐಆರ್ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆಯೇ ‘ಆಜ್‌ ತಕ್’ ವಾಹಿನಿ, ಅದರ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಯೂಟ್ಯೂಬ್‌ ಹಾಗೂ ಸೋಷಿಯಲ್ ಮೀಡಿಯಾದಿಂದ ವಿಡಿಯೋ ‘ಡಿಲೀಟ್’ ಮಾಡಿದ್ದರು.

ಇದನ್ನು ಓದಿದ್ದೀರಾ? ಎಫ್ಐಆರ್ ದಾಖಲಾಗುತ್ತಿದ್ದಂತೆ ವಿಡಿಯೋ ‘ಡಿಲೀಟ್’ ಮಾಡಿದ ‘ಆಜ್‌ ತಕ್’, ಸುಧೀರ್ ಚೌಧರಿ

ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರೆ, ಸುಧೀರ್ ಚೌಧರಿ ಮತ್ತು ಆಜ್‌ ತಕ್‌ನ ಪರವಾಗಿ ಕರ್ನಾಟಕ ಹೈಕೋರ್ಟ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ...

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...