ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಹೇಳಿಕೆ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ

Date:

ಸಭೆಯೊಂದರಲ್ಲಿ ಮಾತನಾಡುವಾಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಯರೆಡ್ಡಿ ಅವರು ತಮ್ಮದೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಸವರಾಜ ರಾಯರೆಡ್ಡಿ, ನನ್ನು ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಪ್ಪು ಅರ್ಥ ಬರುವ ರೀತಿ ಬಿಂಬಿಸಲಾಗಿದೆ. ನಾನು ಅಂತಹ ಆರೋಪ ಮಾಡಿಲ್ಲ ಎಂದು ಹೇಳಿದ್ದಾರೆ.

- Advertisement -

ವರದಿಗಳ ಕುರಿತು ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡಿರುವ ರಾಯರೆಡ್ಡಿ, “ಮೊದಲನೆಯದಾಗಿ ನಾನು ಸ್ಪಷ್ಟವಾಗಿ ಹೇಳುವುದೇನೆಂದರೆ, ಇದು ನನ್ನ ಪತ್ರಿಕಾ ಹೇಳಿಕೆಯಲ್ಲ. ನಾನು ಯಾವುದೇ ಪತ್ರಿಕಾಗೋಷ್ಠಿ ಮಾಡಿ ಇಂತಹ ಹೇಳಿಕೆ ನೀಡಿಲ್ಲ. ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದ ಮಾತುಗಳನ್ನು ಮಾಧ್ಯಮಗಳಲ್ಲಿ ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮಂಗಳವಾರ, ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನಾ ನಿವಾರಣೆಗಾಗಿ ಡಿ.ಎಂ. ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಈ ವೇಳೆ, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುವಾಗ, ‘ಸರ್ಕಾರದ ಕಾಮಗಾರಿಗಳಲ್ಲಿ ಗುಣಮಟ್ಟದ ಕೆಲಸ ನಡೆಯುತ್ತಿಲ್ಲ. ಹಿಂದೆಲ್ಲ ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು 10 ವರ್ಷಗಳಲ್ಲಿಯೇ ಬಿದ್ದುಹೋಗುತ್ತಿವೆ. ಅದರಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯವಾಗುತ್ತದೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಪೂರಕವಾಗುವಂತೆ ಸಮಿತಿಯು ತನ್ನ ವರದಿಯಲ್ಲಿ ನನ್ನ ಈ ಸಲಹೆಯನ್ನು ಉಲ್ಲೇಖಿಸಿಯೇ ಶಿಫಾರಸ್ಸುಗಳನ್ನು ಮಾಡಬೇಕೆಂದು’ ನಾನು ಹೇಳಿದ್ದೆ. ಆದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಮಾಧ್ಯಮಗಳಲ್ಲಿ ಹಾಲಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದೇನೆಂದು ಸುದ್ದಿಯಾಗಿದೆ. ಇದು ಸಂಪೂರ್ಣ ಸುಳ್ಳು” ಎಂದು ಹೇಳಿದ್ದಾರೆ.

“ಭ್ರಷ್ಟಾಚಾರದ ಪಿಡುಗು ಈ ಹಿಂದಿನ ಬಿಜೆಪಿ ಸರ್ಕಾರದ ಬಹುದೊಡ್ಡ ಕೊಡುಗೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸರ್ಕಾರದ ಎಲ್ಲ ತೆರಿಗೆ ಸಂಗ್ರಹಣಾ ಇಲಾಖೆಗಳಲ್ಲಿರುವ (ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆ) ಗ್ರೂಪ್ ‘ಬಿ’ ಮತ್ತು ‘ಸಿ’ ದರ್ಜೆಯ ಹುದ್ದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲಾಗುವುದೆಂದು ಈಗಾಗಲೇ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವುದು ಒಂದು ಐತಿಹಾಸಿಕ ನಿರ್ಧಾರವಾಗಿದೆ. ಈ ನಿರ್ಧಾರವು ನಮ್ಮ ಸರ್ಕಾರದ ಭ್ರಷ್ಟಾಚಾರ ವಿರೋಧಿ ನೀತಿಗೆ ಕನ್ನಡಿ ಹಿಡಿದಂತಿದೆ” ಎಂದು ರಾಯರೆಡ್ಡಿ ಹೇಳಿಕೊಂಡಿದ್ದಾರೆ.

“ಅಧಿಕಾರದಲ್ಲಿದ್ದಾಗ ಜನಸೇವೆಗೆ ಬದಲಾಗಿ ಭ್ರಷ್ಟಾಚಾರದಲ್ಲಿಯೇ ಮುಳುಗಿದ್ದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕು ಇಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...