ಕರ್ನಾಟಕ ಈಗ ‘ಅಪರಾಧಗಳ ರಾಜ್ಯ’: ಬಿಜೆಪಿ ಆರೋಪ, ಪೊಲೀಸ್ ಮಹಾ ನಿರ್ದೇಶಕರಿಗೆ ದೂರು

Date:

Advertisements

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಮಾಜಿ ಸಿಎಂ ಡಿ ವಿ ಸದಾನಂದಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಳವಿಕ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಸಿ ಕೆ ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ನೇತೃತ್ವದ ನಿಯೋಗ ಶನಿವಾರ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಉಪ ಮಹಾನಿರೀಕ್ಷಕರ ಕಚೇರಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ದೂರು ನೀಡಿತು.

ದೂರಿನಲ್ಲೇನಿದೆ?

Advertisements

“ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿರುವುದು ತಮಗೂ ತಿಳಿದಿದೆ. ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ. ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ 46ರಷ್ಟು ಹೆಚ್ಚಳ, ಹಿರಿಯ ನಾಗರೀಕರ ಮೇಲಿನ ಅಪರಾಧದಲ್ಲಿ ಶೇಕಡಾ 86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ. ಕರ್ನಾಟಕ ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಕಾನೂನು- ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಬಿಜೆಪಿ ಉಲ್ಲೇಖಿಸಿದೆ.

ಹಿಂದೂ, ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ

“ಗನ್ ಹಿಡಿದು ಓಡಾಡುವ ವ್ಯಕ್ತಿ ಮುಖ್ಯಮಂತ್ರಿಗಳಿಗೆ ಹೂಹಾರ ಹಾಕುವ ದುಸ್ಥಿತಿ ರಾಜ್ಯದ್ದು, ಜನರು ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಒಂದು ವರ್ಗಕ್ಕೆ ಬೆಣ್ಣೆ ಇನ್ನೊಂದು ವರ್ಗಕ್ಕೆ ಜೈಲುವಾಸ, ಲಾಠಿ ಏಟು ಎಂಬ ದುಸ್ಥಿತಿ ರಾಜ್ಯದ್ದಾಗಿದೆ. ಕೋಮುದ್ವೇಷದ ಹಿಂಸಾಚಾರದ ಘಟನೆಗಳು, ರಾಜಕೀಯಪ್ರೇರಿತ ದ್ವೇಷಗಳಿಂದ ನಾಗರೀಕರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದೆ ಒದ್ದಾಡುವಂತಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್​​ಗೆ ಸರ್ವೇಸಾಮಾನ್ಯವಾಗಿ ಬಿಟ್ಟಿದೆ” ಎಂದು ಬಿಜೆಪಿ ಆರೋಪಿಸಿದೆ.

ಪೊಲೀಸ್ ಇಲಾಖೆ ವಿರುದ್ಧ ಅಸಮಾಧಾನ

“ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ, ಕುಸಿದು ಆರಾಜಕತೆ ಸೃಷ್ಟಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದೆಯೋ ಇಲ್ಲವೋ ಎಂಬ ಸಂದೇಹ ಬರುತ್ತಿದ್ದು ಜನಸಾಮಾನ್ಯರು ಇದೇ ಪ್ರಶ್ನೆಯನ್ನು ಮುಂದಿಡುತ್ತಿದ್ದಾರೆ” ಎಂದು ಪೊಲೀಸ್ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಮಹಿಳೆಯರಿಗಿಲ್ಲ ಸುರಕ್ಷತೆ

“ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬುದು ಕಾಂಗ್ರೆಸ್ ಆಡಳಿತದಲ್ಲಿ ಪದೇ ಪದೆ ಸಾಬೀತಾಗಿದೆ. ಬೆಳಗಾವಿಯಲ್ಲಿ ನಡೆದ ಘಟನೆಯಂತೂ ಅತ್ಯಂತ ಅಮಾನವೀಯ. ಸಿಎಂ ಸಿದ್ದರಾಮಯ್ಯನವರು ಸೇರಿದಂತೆ ಸಂಪೂರ್ಣ ಆಡಳಿತ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ನಡೆಸುತ್ತಿದ್ದಾಗ 42 ವರ್ಷದ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಹಲ್ಲೆ ನಡೆಸಿದ್ದರು. ಪೊಲೀಸ್ ಇಲಾಖೆ ಇಂಥ ದುರ್ಘಟನೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿ” ಎಂದು ದೂರಿದೆ.

“ಕಾಂಗ್ರೆಸ್ ಸರಕಾರವು ಮುಸ್ಲಿಂ ಸಮುದಾಯದ ಅಪರಾಧಿಗಳು ಭಾಗಿಯಾದ ಪ್ರಕರಣಗಳಲ್ಲಿ ಕ್ರಮ ತೆಗೆದುಕೊಳ್ಳಲು ಮೀನಾಮೇಷ ಎಣಿಸುತ್ತದೆ. ಮುಸ್ಲಿಂ ವ್ಯಕ್ತಿಗಳಗುಂಪಿನಿಂದ ದಂಪತಿಗಳು ನೈತಿಕ ಪೊಲೀಸ್‌ಗಿರಿಗೆ ಬಲಿಯಾಗಿ ಈ ದಂಪತಿಗಳು ನ್ಯಾಯಕ್ಕಾಗಿ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿದ್ದರು ಆರಂಭದಲ್ಲಿ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಮುಚ್ಚಿಹಾಕಲು ಈ ಸರಕಾರ ಮುಂದಾಗಿತ್ತು. ಬೆಂಗಳೂರಿನ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದಾಗಿ ಆಕ್ಷೇಪಿಸಿ ಹಿಂದೂ ಅಂಗಡಿಯವರೊಬ್ಬನ ಮೇಲೆ ಮುಸ್ಲಿಂ ದುಷ್ಕರ್ಮಿಗಳು ಹಲ್ಲೆ ನಡೆಸಿದರು. ಇದನ್ನು ಸಮರ್ಥನೆ ಮಾಡಿಕೊಳ್ಳೋದಕ್ಕೆ ಕಾಂಗ್ರೆಸ್ ಸರಕಾರ ಮುಂದಾಗಿತ್ತು. ಕಾಂಗ್ರೆಸ್ ಸರಕಾರವು ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರಂತೆ ನೋಡುತ್ತಿದೆ” ಎಂದು ಕಿಡಿಕಾರಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X