ಚಿಕನ್ ಕಬಾಬ್, ಮೀನಿನ ಆಹಾರದಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ: ಮಾರಿದರೆ ಜೈಲು ಶಿಕ್ಷೆ

Date:

Advertisements

ಮೀನು ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆಯು ಜೂನ್ 24ರಂದು ಆದೇಶ ಹೊರಡಿಸಿದೆ.

ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಲಾಗಿತ್ತು

ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು.

Advertisements

ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟು ಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ. The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.

The Food Safety and Standards (Food Products Standards and Food Additives) Regulations, 2011 ರ‌ ಅನ್ವಯ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ‌ ತಿಳಿಸಲಾಗಿದೆ.

ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.‌

ಆಹಾರ ಸುರಕ್ಷತೆ ವಿಚಾರದಲ್ಲಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X