ಕರ್ನಾಟಕ | ಇಬ್ಬರು ಮಾಜಿ ಸಿಎಂಗಳ ಭವಿಷ್ಯ ನಿರ್ಧರಿಸಲಿದ್ದಾರೆ ಮತದಾರರು

Date:

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು (ಮಂಗಳವಾರ) ಮತದಾನ ನಡೆಯುತ್ತಿದೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಈ ಪೈಕಿ, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭವಿಷ್ಯವೂ ನಿರ್ಧಾರವಾಗಲಿದೆ.

- Advertisement -

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯಲ್ಲಿ ಬಂಡಾಯ ಎದ್ದು ಕಾಂಗ್ರೆಸ್‌ ಸೇರಿ, ಮತ್ತೆ ಬಿಜೆಪಿಗೆ ಮರಳಿರುವ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಸವರಾಜ ಬೊಮ್ಮಾಯಿ ಅವರು ಹಿಂದಿನ ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು. ಅವರ ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪವಿತ್ತು. ಅಲ್ಲದೆ, ಅವರ ವಿರುದ್ಧ ಕಾಂಗ್ರೆಸ್‌ ‘ಪೇ ಸಿಎಂ’ ಅಭಿಯಾನ ನಡೆಸಿತ್ತು. ಅವರ ಆಡಳಿತ ಇದ್ದಾಗಲೇ ನಡೆದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತು. ಅಧಿಕಾರ ಕಳೆದುಕೊಂಡ ಬಿಜೆಪಿ, ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕನ ಸ್ಥಾನವನ್ನು ನೀಡಲಿಲ್ಲ. ಆದರೆ, ಯಡಿಯೂರಪ್ಪ ಅವರ ಒತ್ತಡದ ಕಾರಣಕ್ಕಾಗಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ನೀಡಿದೆ. ಅವರು ಗೆದ್ದರೆ ದೆಹಲಿ ಪ್ರವೇಶಿಸುತ್ತಾರೆ. ಸೋತರೆ, ಶಾಸಕರಾಗಿ ವಿಧಾನಸಭೆಯಲ್ಲಿ ಉಳಿಯುತ್ತಾರೆ.

ಇನ್ನು,  ಜಗದೀಶ್‌ ಶೆಟ್ಟರ್‌ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಟಿಕೆಟ್‌ನಿಂದ ವಂಚಿತರಾದ ಅವರು, ಬಿಜೆಪಿ ವಿರುದ್ಧ ಬಂಡಾಯ ಎದ್ದು, ಕಾಂಗ್ರೆಸ್‌ ಸೇರಿದ್ದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಿತ್ತು. ಅದರೆ, ಅವರು ಬಿಜೆಪಿ ಮಹೇಶ್ ತೆಂಗಿನಕಾಯಿ ವಿರುದ್ಧ ಸೋಲುಂಡರು. ಬಳಿಕ, ಅವರನ್ನು ಕಾಂಗ್ರೆಸ್‌ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿತು. ಆದರೂ, ಅವರು ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಸೇರಿದ್ದಾರೆ. ಗೆದ್ದರೆ, ಸಂಸತ್‌ಗೆ ಹೋಗುತ್ತಾರೆ. ಸೋತರೆ ನಿರುದ್ಯೋಗಿಯಾಗಿ ಉಳಿಯುತ್ತಾರೆ. ಅಲ್ಲದೆ, ಈ ಬಾರಿ ಅವರು ಸೋತರೆ, ಅವರ ರಾಜಕೀಯ ಭವಿಷ್ಯ ಇಲ್ಲಿಗೆ ಕೊನೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...