ಬರ ಪರಿಹಾರ | ಎಲ್ಲದಕ್ಕೂ ರಾಜ್ಯಗಳು ನಮ್ಮತ್ರ ಬರಬೇಕಾ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ ಕೋರ್ಟ್‌

Date:

Advertisements

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, “ಎಲ್ಲ ವಿಚಾರಗಳಿಗೂ ರಾಜ್ಯಗಳು ನಮ್ಮಲ್ಲಿಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ವಿಭಾಗೀಯ ಪೀಠವು, ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು.

ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, “ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಈ ಕಾರಣಕ್ಕಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸುವಂತಾಯಿತು” ಎಂದು ಹೇಳಿದರು.

Advertisements

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್‌, ಪರಿಹಾರದ ಹಣದ ವಿಚಾರವಾಗಿ ವಿವಿಧ ರಾಜ್ಯಗಳು ನಮ್ಮಲ್ಲಿಗೆ ಬರುತ್ತಿದೆ. ಇದು ಪುನರಾವರ್ತನೆಯಾಗುತ್ತಿದೆ. ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?” ಎಂದು ಕೇಳಿತು.

ಇದಕ್ಕೆ ಉತ್ತರಿಸಿದ ತುಷಾರ್ ಮೆಹ್ತಾ, ಆರ್ಟಿಕಲ್ 32ರ ಅಡಿಯಲ್ಲಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬದಲು ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಸಿದಿದ್ದರೆ ಸಮಸ್ಯೆಯನ್ನು ಬಗೆಹರಿಸಬಹುದಿತ್ತು. ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಭರವಸೆ ನೀಡಿದರು. ಅಲ್ಲದೇ, ನೋಟಿಸ್ ನೀಡಬೇಡಿ ಎಂದು ನ್ಯಾಯಪೀಠದ ಎದುರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ವಿಭಾಗೀಯ ಪೀಠವು, ಅರ್ಜಿಯ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.

ನೋಟಿಸ್ ಕೊಡಬೇಡಿ ಅಂತ ಕೂಡ ಕೇಳಿಕೊಂಡಿದ್ದಾರೆ: ಕೃಷ್ಣಬೈರೇಗೌಡ

“ವಾದ ಬಗೆಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್​ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಅಟಾರ್ನಿ ಜನರಲ್‌, ಸಾಲಿಸಿಟರ್ ಜನರಲ್ ಹಾಜರಾಗಿದ್ದರು. ಎರಡು ವಾರದಲ್ಲಿ ಪ್ರತಿಕ್ರಿಯೆ ನೀಡುತ್ತೇವೆ ಎಂದಿದ್ದಾರೆ. ನೋಟಿಸ್ ಕೊಡಬೇಡಿ ಅಂತ ಕೂಡ ಕೇಳಿಕೊಂಡಿದ್ದಾರೆ. ಎಲ್ಲಿ ಕೇಂದ್ರಕ್ಕೆ ಮುಜುಗರ ಆಗುತ್ತದೋ ಎಂಬ ಆತಂಕವಿದೆ. ಹಾಗಾಗಿ ನೋಟಿಸ್ ಕೊಡಬೇಡಿ ಎಂದು ಕೇಂದ್ರ ಕೇಳಿದೆ” ಎಂದು ಸುಪ್ರೀಂ ಕೋರ್ಟ್‌ನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೇಂದ್ರಕ್ಕೆ ಸೋಲು
    ರಾಜ್ಯಕ್ಕೆ ಗೆಲುವು l

    ಸುಳ್ಳಿಗೆ ಸೋಲು
    ಸತ್ಯಕ್ಕೆ ಗೆಲುವು l

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X