ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

Date:

Advertisements
  • 2022ನೇ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ʼ ದತ್ತಿ ಪ್ರಶಸ್ತಿ ಪ್ರದಾನ
  • ನಾಡಿನ 12 ಮಂದಿ ಗಣ್ಯರಿಗಷ್ಟೇ ಪ್ರದಾನವಾಗಿರುವ ಒಡೆಯರ್ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆಯ್ಕೆಯಾಗಿದ್ದಾರೆ.

ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, 2022ನೇ ಸಾಲಿನ ಪ್ರಶಸ್ತಿಯನ್ನು ಶೀಘ್ರದಲ್ಲೇ ದೇವೇಗೌಡರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಇದುವರೆಗೆ ನಾಡಿನ 12 ಮಂದಿಗೆ ಪ್ರದಾನವಾಗಿರುವ ಈ ದತ್ತಿ ಪ್ರಶಸ್ತಿ ಸ್ವೀಕರಿಸುತ್ತಿರುವ ಮೊದಲ ಕನ್ನಡಿಗನೆನ್ನುವ ಶ್ರೇಯ ಮಾಜಿ ಪ್ರಧಾನಿಗಳ ಪಾಲಾಗಿದೆ.

Advertisements

ನಾಡಿನ ಅಭ್ಯುದಯದ ಕನಸು ಕಂಡ ನಾಲ್ವಡಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿಯನ್ನು ಕೈಗಾರಿಕಾ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲಿಕರಣ, ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಕೊಡಮಾಡಲಾಗುತ್ತದೆ.

ಸದರಿ ಪ್ರಶಸ್ತಿ 51,000 ರೂಪಾಯಿ ನಗದು, ಸ್ಮರಣಿಕೆ, ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ.

ಸಮಗ್ರ ಕನ್ನಡ ನಾಡಿನ ಅಭಿವೃದ್ಧಿಗೆ ಕಟಿಬದ್ಧರಾಗಿ ಕೆಲಸ ನಿರ್ವಹಿಸಿದ ದೇವೇಗೌಡರು, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ಹೋರಾಟ ಮಾಡುತ್ತಲೇ ಬಂದ ಹಿನ್ನೆಲೆ ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

ಪ್ರಶಸ್ತಿ ಆಯ್ಕೆ ಸಲುವಾಗಿ ಇತಿಹಾಸ ತಜ್ಞ ಹಾಗೂ ಸಂಶೋಧಕ ಡಾ. ತಲಕಾಡು ಚಿಕ್ಕರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ ಎಂ ಪಟೇಲ್ ಪಾಂಡು ಸಭೆ ನಡೆಸಿ ಮಾಜಿ ಪ್ರಧಾನಿಗಳ ಹೆಸರನ್ನು ಅಂತಿಮಗೊಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X