ಜಮ್ಮು| ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್ ಜೊತೆ ವಿಲೀನ

Date:

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತ ಸಂಘಟನೆ ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಮ್ (ಎಐಕೆಎಚ್‌ಎಫ್) ಶನಿವಾರ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ ಎಂದು ವರದಿಯಾಗಿದೆ.

- Advertisement -

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಅವರು ಎಐಕೆಎಚ್‌ಎಫ್ ಅಧ್ಯಕ್ಷ ರತ್ತನ್ ಲಾಲ್ ಭಾನ್ ಮತ್ತು ಇತರ ಪದಾಧಿಕಾರಿಗಳನ್ನು ಪಕ್ಷಕ್ಕೆ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವಿಕಾರ್ ರಸೂಲ್ ವಾನಿ, “ಎಐಕೆಎಚ್‌ಎಫ್ ಅನ್ನು 1998ರಲ್ಲಿ ಸ್ಥಾಪಿಸಲಾಗಿದ್ದು ಅದರ ನೂರಾರು ಸದಸ್ಯರು ಕಾಂಗ್ರೆಸ್‌ಗೆ ಸೇರುವುದು ಪಕ್ಷಕ್ಕೆ ದೊಡ್ಡ ಉತ್ತೇಜನವಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?   ಲೋಕಸಭೆ ಚುನಾವಣೆ | ಜಮ್ಮುವಿನಲ್ಲಿ ಕಾಂಗ್ರೆಸ್‌ಗೆ ಶಿವಸೇನೆ ಸಾಥ್

ಎಲ್ಲಾ ಕಾಶ್ಮೀರಿ ಪಂಡಿತರ ಸಂಘಟನೆಗಳನ್ನು ಪಕ್ಷಕ್ಕೆ ಸೇರುವಂತೆ ಕರೆ ನೀಡಿದ ಅವರು, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಿಂದ ಸಮುದಾಯವನ್ನು ಮುರ್ಖರನ್ನಾಗಿಸಿದೆ” ಎಂದು ಆರೋಪಿಸಿದರು.

“ಬಿಜೆಪಿ ಅಧಿಕಾರಕ್ಕೆ ಬರಲು ದೇಶಾದ್ಯಂತ ಹಲವಾರು ಸಂಸ್ಥೆಗಳನ್ನು ಮಾರಾಟ ಮಾಡಿದೆ. ಕಾಶ್ಮೀರಿ ಪಂಡಿತರಿಗೆ ಹಲವಾರು ಭರವಸೆಗಳನ್ನು ನೀಡಿದೆ. ಕಳೆದ 10 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದರೂ ಅವರು 10 ಪೈಸೆಯಷ್ಟು ಕೆಲಸ ಮಾಡುವಲ್ಲಿ ವಿಫಲವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  5 ವರ್ಷ ಜೈಲಿನಲ್ಲಿದ್ದು ಬಿಡುಗಡೆಯಾದ ಕಾಶ್ಮೀರಿ ಪತ್ರಕರ್ತ, ಮತ್ತೆ ಬಂಧನ

“ಕಳೆದ 10 ವರ್ಷಗಳಿಂದ ಬಿಜೆಪಿ ಕಾಶ್ಮೀರಿ ಪಂಡಿತರನ್ನು ಮೂರ್ಖರನ್ನಾಗಿಸುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ಹಿಂತಿರುಗುವಂತೆ ನಾನು ಇತರ ಕಾಶ್ಮೀರಿ ಪಂಡಿತರ ಗುಂಪುಗಳಿಗೆ ಮನವಿ ಮಾಡುತ್ತೇನೆ. ನೆಹರೂ ಕುಟುಂಬವು ಮೂಲತಃ ಕಾಶ್ಮೀರಕ್ಕೆ ಸೇರಿದ್ದು ಮತ್ತು ಸ್ಥಳಾಂತರಗೊಂಡ ಪಂಡಿತರ ಬಗ್ಗೆ ಹೆಚ್ಚಿನ ಸಹಾನುಭೂತಿಯನ್ನು ಹೊಂದಿದೆ ಮತ್ತು ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷವೂ ಸಹ ಸಹಾನುಭೂತಿ ಹೊಂದಿದೆ” ಎಂದು ಹೇಳಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ಕಾಶ್ಮೀರಿ ಪಂಡಿತರಿಗಾಗಿ ಹಲವಾರು ಕಾರ್ಯಗಳನ್ನು ಮಾಡಿರುವ ಕಾರಣದಿಂದಾಗಿ ನಾವು ಕಾಂಗ್ರೆಸ್‌ನೊಂದಿಗೆ ನಮ್ಮ ಸಂಘಟನೆಯನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ ಎಂದು ಎಐಕೆಎಚ್‌ಎಫ್ ಅಧ್ಯಕ್ಷ ರತ್ತನ್ ಲಾಲ್ ಭಾನ್ ತಿಳಿಸಿದ್ದಾರೆ.

“ನಾವು ನಮ್ಮ ಕುಟುಂಬಕ್ಕೆ ಹಿಂತಿರುಗಿದಂತೆ ಭಾವಿಸುತ್ತೇವೆ. ಬಿಜೆಪಿಯವರು ಪಂಡಿತರನ್ನು ಶೋಷಣೆ ಮಾಡಿದ್ದು, ನಮಗಾಗಿ ಏನನ್ನೂ ಮಾಡಿಲ್ಲ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...