ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರಿಗೆ ನೇರವಾಗಿ ಮನವಿ ಸಲ್ಲಿಸಲು ವಿವಿಧ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ. ಡಿ ರಾಜೇಗೌಡ ತಿಳಿಸಿದ್ದಾರೆ.
ಯಾವುದೇ ಪಕ್ಷ, ಸಂಘಟನೆ, ಎಂಜಿಯೋ ಸಂಸ್ಥೆಗಳಾಗಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಮನವಿಗಳನ್ನು ಸಲ್ಲಿಸಬಹುದು. ಮನವಿ ಸಲ್ಲಿಸಲು ಅನುಕೂಲವಾಗುವಂತೆ ಕಾರ್ಯಕ್ರಮದ ವೇದಿಕೆಯ ಪಕ್ಕದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗುತ್ತದೆ.
ಇದನ್ನೂ ಓದಿದ್ದೀರಾ?ಕಸ್ತೂರಿರಂಗನ್ ವರದಿ: ಈ ಭಾಗದವರಗಿದ್ದರೆ ಮಲೆನಾಡಿನ ಪ್ರಾಂತ್ಯದ ಜನರ ನೋವು ಅರ್ಥವಾಗುತ್ತಿತ್ತು; ರಂಭಾಪುರಿ ಮಠದ ಸ್ವಾಮೀಜಿ
ಕಸ್ತೂರಿರಂಗನ್ ವರದಿ ಕುರಿತು ಮನವಿ ಸಲ್ಲಿಸಲು ಇಚ್ಛಿಸುವ ಎಲ್ಲಾ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಟಿ.ಡಿ. ರಾಜೇಗೌಡ ಮನವಿ ಮಾಡಿದ್ದಾರೆ.
This video cannot be played in your browser. Open the video directly





