ತಿಹಾರ್ ಜೈಲಿನಿಂದಲೇ ಶಾಸಕರಿಗೆ ಕೇಜ್ರಿವಾಲ್ ನಿರ್ದೇಶನ: ಜನರ ಸಮಸ್ಯೆ ಪರಿಹರಿಸಲು ಸೂಚನೆ

Date:

ಎಲ್ಲಾ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದಲೇ ಶಾಸಕರಿಗೆ ನಿರ್ದೇಶನ ನೀಡಿದ್ದಾರೆ. ಕೇಜ್ರಿವಾಲ್ ಸಂದೇಶ ಕಳುಹಿಸಿರುವುದಾಗಿ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.

- Advertisement -

“ನಿಮ್ಮ ಕೇಜ್ರಿವಾಲ್ ಅವರು ಜೈಲಿನಿಂದ ಎಲ್ಲಾ ಶಾಸಕರಿಗೆ ಸಂದೇಶ ಕಳುಹಿಸಿದ್ದಾರೆ” ಎಂದು ಹೇಳಿರುವ ಸುನೀತಾ ಕೇಜ್ರಿವಾಲ್ ಅವರು “ನಾನು ಜೈಲಿನಲ್ಲಿದ್ದೇನೆ. ಈ ಕಾರಣದಿಂದಾಗಿ ದೆಹಲಿಯ ಜನರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಎಲ್ಲ ಶಾಸಕರು ತಮ್ಮ ಕ್ಷೇತ್ರಕ್ಕೆ ಪ್ರತಿದಿನ ಭೇಟಿ ನೀಡಬೇಕು. ಜನರಿಗೆ ಯಾವುದಾದರೂ ಸಮಸ್ಯೆ ಇದೆಯೇ ಎಂದು ಕೇಳಿ. ಯಾರಿಗಾದರೂ ಸಮಸ್ಯೆ ಇದ್ದರೆ ಅದನ್ನು ಪರಿಹರಿಸಿ” ಎಂದು ಕೇಜ್ರಿವಾಲ್ ತಿಳಿಸಿರುವುದಾಗಿ ಸುನೀತಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಸರ್ಕಾರದ ಕೆಲಸ ಮಾತ್ರವಲ್ಲದೆ ಜನರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಬೇಕು. ದೆಹಲಿಯ ಎರಡು ಕೋಟಿ ಜನರು ನನ್ನ ಪರಿವಾರ. ನನ್ನ ಪರಿವಾರದಲ್ಲಿ ಯಾರೂ ಕೂಡಾ ಯಾವುದೇ ಕಾರಣಕ್ಕೂ ದುಃಖಿತರಾಗಬಾರದು. ಭಗವಂತ ಎಲ್ಲರಿಗೂ ಒಳ್ಳೆಯದು ಮಾಡಲಿ” ಎಂದು ಅರವಿಂದ್ ಕೇಜ್ರಿವಾಲ್  ತಿಳಿಸಿರುವುವಾಗಿ ಹೇಳಿದರು.

ಇದನ್ನು ಓದಿದ್ದೀರಾ?   ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿದ್ದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಕಾರ

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಸಿಎಂ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಪ್ರಸ್ತುತ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಎಎಪಿ ಆರೋಪಿಸಿದೆ.

ಇನ್ನು ದೆಹಲಿ ಹೈಕೋರ್ಟ್ ಗುರುವಾರ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಲು ನಿರಾಕರಿಸಿದೆ. ಈ ಹಿಂದೆ ಮಾರ್ಚ್ 28ರಂದು ಹೈಕೋರ್ಟ್ ಇದೇ ವಿಚಾರವಾಗಿ ಸುರ್ಜಿತ್ ಸಿಂಗ್ ಯಾದವ್ ಎಂಬವರು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...