ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಎಎಪಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.
ಅಹಮದಾಬಾದ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, “ನಾವು ಬಿಹಾರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ. ಇಂಡಿಯಾ ಒಕ್ಕೂಟವು ಲೋಕಸಭಾ ಚುನಾವಣೆಗೆ ಮಾತ್ರವಾಗಿದೆ. ನಾವು ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಹೊಂದಿಲ್ಲ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| 58 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಆರಂಭ: ಕನ್ಹಯ್ಯ, ಸಂಬಿತ್ ಪಾತ್ರ ಕಣದಲ್ಲಿ
“ಕಾಂಗ್ರೆಸ್ ಜೊತೆ ಮೈತ್ರಿ ಇದ್ದಿದ್ದರೆ ಎಎಪಿ ವಿಸಾವದರ್ ಉಪಚುನಾವಣೆಯಲ್ಲಿ ಏಕೆ ಸ್ಪರ್ಧಿಸಿತು? ಅವರು ನಮ್ಮನ್ನು ಸೋಲಿಸಲು ಬಂದರು. ಬಿಜೆಪಿ ನಮ್ಮನ್ನು ಸೋಲಿಸಲು ಮತ್ತು ಮತಗಳನ್ನು ಕಡಿಮೆ ಮಾಡಲು ಕಾಂಗ್ರೆಸ್ ಅನ್ನು ಕಳುಹಿಸಿತು” ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
2027ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಬಿಹಾರದಲ್ಲಿ ಎಎಪಿ ಪ್ರಚಾರ ಶುರು ಮಾಡಿದೆ. ಈ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಕೇಜ್ರಿವಾಲ್ ಗುಜರಾತ್ನಲ್ಲಿದ್ದಾರೆ. ಬುಧವಾರ ಅಹಮದಾಬಾದ್ನಲ್ಲಿ ಎಎಪಿಯ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲಾಗಿದೆ.
