ಬಿಹಾರ ಚುನಾವಣೆ | ಎಎಪಿ ಏಕಾಂಗಿ ಸ್ಪರ್ಧೆ: ಕಾಂಗ್ರೆಸ್ ಜೊತೆ ಮೈತ್ರಿ ನಿರಾಕರಿಸಿದ ಕೇಜ್ರಿವಾಲ್

Date:

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಎಎಪಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.

- Advertisement -

ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, “ನಾವು ಬಿಹಾರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ. ಇಂಡಿಯಾ ಒಕ್ಕೂಟವು ಲೋಕಸಭಾ ಚುನಾವಣೆಗೆ ಮಾತ್ರವಾಗಿದೆ. ನಾವು ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಹೊಂದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| 58 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಆರಂಭ: ಕನ್ಹಯ್ಯ, ಸಂಬಿತ್ ಪಾತ್ರ ಕಣದಲ್ಲಿ

“ಕಾಂಗ್ರೆಸ್ ಜೊತೆ ಮೈತ್ರಿ ಇದ್ದಿದ್ದರೆ ಎಎಪಿ ವಿಸಾವದರ್ ಉಪಚುನಾವಣೆಯಲ್ಲಿ ಏಕೆ ಸ್ಪರ್ಧಿಸಿತು? ಅವರು ನಮ್ಮನ್ನು ಸೋಲಿಸಲು ಬಂದರು. ಬಿಜೆಪಿ ನಮ್ಮನ್ನು ಸೋಲಿಸಲು ಮತ್ತು ಮತಗಳನ್ನು ಕಡಿಮೆ ಮಾಡಲು ಕಾಂಗ್ರೆಸ್ ಅನ್ನು ಕಳುಹಿಸಿತು” ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

2027ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಬಿಹಾರದಲ್ಲಿ ಎಎಪಿ ಪ್ರಚಾರ ಶುರು ಮಾಡಿದೆ. ಈ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಕೇಜ್ರಿವಾಲ್ ಗುಜರಾತ್‌ನಲ್ಲಿದ್ದಾರೆ. ಬುಧವಾರ ಅಹಮದಾಬಾದ್‌ನಲ್ಲಿ ಎಎಪಿಯ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...