ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

Date:

ದೆಹಲಿ ಅಬಕಾರಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.

ದೆಹಲಿಯ ತಿಹಾರ್ ಜೈಲಿನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು ಭೇಟಿಯಾದ ನಂತರ ಮಾತನಾಡಿದ ಭಗವಂತ್ ಮಾನ್ ಅವರು ಬಿಜೆಪಿ ಇತರೆ ಪಕ್ಷಗಳನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ. ಜೊತೆಗೆ ಚುನಾವಣೆ ಹೊರ ಬಂದ ಬಳಿಕ ಎಎಪಿ ಅತೀ ದೊಡ್ಡ ಪಕ್ಷವಾಗಲಿದೆ ಎಂದು ಪಂಜಾಬ್ ನಾಯಕರು ಘೋಷಣೆ ಮಾಡಿದ್ದಾರೆ.

ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ನಡುವಿನ ಸಭೆಯು ತಿಹಾರ್‌ ಜೈಲಿನ ಒಂದು ಕೋಣೆಯಲ್ಲಿ ನಡೆಸಲಾಗಿದೆ. ಇಬ್ಬರು ವಿರೋಧ ಪಕ್ಷದ ನಾಯಕರು ದೂರವಾಣಿ ಸಂಪರ್ಕದ ಮೂಲಕ 30 ನಿಮಿಷಗಳ ಕಾಲ ಮಾತನಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?   ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕನನ್ನು ವಜಾಗೊಳಿಸಿದ ಕೇಂದ್ರ ವಿಚಕ್ಷಣ ದಳ

“ಅರವಿಂದ್ ಕೇಜ್ರಿವಾಲ್ ಅವರನ್ನು ನೋಡಿ ನಾನು ಭಾವುಕನಾದೆ. ಅವರನ್ನು ಒಬ್ಬ ಕಠಿಣ ಕ್ರಿಮಿನಲ್‌ನಂತೆ ನಡೆಸಿಕೊಳ್ಳಲಾಗುತ್ತಿದೆ. ಅಷ್ಟಕ್ಕೂ ಅವರ ತಪ್ಪೇನು? ಮೊಹಲ್ಲಾ ಕ್ಲಿನಿಕ್‌ಗಳನ್ನು (ಎಎಪಿಯ ಪ್ರಮುಖ ಸರ್ಕಾರಿ ಆರೋಗ್ಯ ಕೇಂದ್ರಗಳು) ನಿರ್ಮಿಸಿರುವುದು ಅವರ ತಪ್ಪೇ” ಎಂದು ಭಾವುಕರಾಗಿ ಭಗವಂತ್ ಮಾನ್ ಪ್ರಶ್ನಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ತಮ್ಮ ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಲ್ಲಿದ್ದರೂ ಕೂಡಾ ದೆಹಲಿಯ ಜನರ ಬಗ್ಗೆ ಕಾಳಜಿ ವಹಿಸುತ್ತಿರುವುದನ್ನು ಶ್ಲಾಘಿಷಿಸಿದರು. ಮುಂದಿನ ವಾರ ಇಬ್ಬರು ಸಚಿವರನ್ನು ತಿಹಾರ್ ಜೈಲಿಗೆ ಕರೆಸಿ ಆಡಳಿತದ ಕುರಿತು ಚರ್ಚಿಸಲು ಕೇಜ್ರಿವಾಲ್ ಯೋಜಿಸಿದ್ದಾರೆ ಎಂದು ಅವರು ಹೇಳಿದರು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಬಂಧಿಸಿದೆ. ಒಂದು ವಾರಕ್ಕೂ ಅಧಿಕ ಕಾಲ ಇಡಿ ತನ್ನ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದ್ದು ಅದಾದ ಬಳಿಕ ಜೈಲಿಗೆ ಕಳುಹಿಸಲಾಗಿದೆ. ಇಂದು ಕೇಜ್ರಿವಾಲ್ ಜೈಲು ಶಿಕ್ಷೆಯನ್ನು ಏಪ್ರಿಲ್ 23ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಗಪುರ್ ಉದ್ಯಮಿಗಳು ಹೂಡಿಕೆಗೆ ಮುಂದೆ ಬಂದರೆ ಭೂಮಿ ಒದಗಿಸಲು ಸಿದ್ಧ: ಸಚಿವ ಎಂ ಬಿ ಪಾಟೀಲ್

‌ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ...

ಇಂದು ನಡೆಯಲಿದೆ ಹೈ ಪ್ರೊಫೈಲ್‌ ಕೇಸುಗಳ ವಿಚಾರಣೆ; ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ನಾಲ್ಕು ಹೈಪ್ರೊಫೈಲ್‌ ಕೇಸುಗಳ ವಿಚಾರಣೆ ಹೈಕೋರ್ಟ್‌ ಸೇರಿದಂತೆ ವಿವಿಧ ಕೋರ್ಟ್‌ಗಳಲ್ಲಿ...

ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ...