ಕೆಂಪೇಗೌಡ ಜಯಂತಿ : 198ಕ್ಕೆ ಏರಿಕೆಯಾದ ಪ್ರಶಸ್ತಿ ಸಂಖ್ಯೆ; ಜುಲೈ 9ಕ್ಕೆ ಪ್ರಶಸ್ತಿ ಪ್ರದಾನ

Date:

  • ಕೆಂಪೇಗೌಡ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ
  • ಮೂರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿರುವ ಸರ್ಕಾರ

ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಕಡ್ಡಾಯವಾಗಿ ಆಚರಿಸುವಂತೆ ಸೂಚನೆ ಹೊರಡಿಸಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ಇಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದರು. ಯಾವುದೇ ಜಾತಿ ಧರ್ಮ ಮತ್ತು ಭಾಷೆಗೆ ಸೀಮಿತವಾಗದಂತೆ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ ಎಂದವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದರ ಜೊತೆಗೆ ರಾಜ್ಯ ಸರ್ಕಾರ ಮೂವರು ಸಾಧಕರಿಗೆ ಈ ಬಾರಿಯ ಕೆಂಪೇಗೌಡ ಪ್ರಶಸ್ತಿಯನ್ನು ನೀಡುತ್ತಿದೆ. ಇಲ್ಲಿನ ಸಾಧಕರ ಆಯ್ಕೆ ಜವಾಬ್ಧಾರಿ ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್ ಅವರದ್ದಾಗಿರುತ್ತದೆ ಎಂದು ಡಿಕೆಶಿ ಹೇಳಿದರು.

ಉಳಿದಂತೆ ಬೆಂಗಳೂರು ವ್ಯಾಪ್ತಿಯ ವಾರ್ಡ್ ಸಂಖ್ಯೆ 198ಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ಇಷ್ಟೇ ಪ್ರಮಾಣದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಜುಲೈ 9ಕ್ಕೆ ಜರುಗಲಿದೆ ಎಂದವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ಮೊಟ್ಟೆ ವಿತರಣೆ ನಿಲ್ಲಿಸಿಲ್ಲ; ಹೈಸ್ಕೂಲಿಗೂ ವಿಸ್ತರಿಸುತ್ತೇವೆ: ಸಚಿವ ಮಧು ಬಂಗಾರಪ್ಪ

ಉಳಿದಂತೆ ಪೂರ್ವಭಾವಿ ಸಭೆ ತೆಗೆದುಕೊಂಡ ನಿರ್ಧಾರಗಳು ಹೀಗಿವೆ.

  1. ಈ ಹಿಂದಿನಂತೆಯೇ ಹಾಸನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಸಲಾಗುತ್ತದೆ.
  2. ಎಲ್ಲಾ ತಾಲೂಕುಗಳಲ್ಲೂ ಕಡ್ಡಾಯವಾಗಿ ಜಯಂತಿ ಆಚರಣೆ ಮಾಡಬೇಕು.
  3. ಬೆಂಗಳೂರು ನಗರದಲ್ಲಿ 28 ರಿಂದ 5 ರವರೆಗೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಅನುಕೂಲಕ್ಕೆ ತಕ್ಕಂತೆ, ವಲಯ ಜಂಟಿ ಆಯುಕ್ತರುಗಳು ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಂಡು ಕಾರ್ಯಕ್ರಮ ಆಯೋಜಿಸಬೇಕು.
  4. ಬಿಬಿಎಂಪಿ ವತಿಯಿಂದ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ನೀಡುವ ಕೆಂಪೇಗೌಡ ಪ್ರಶಸ್ತಿಗಾಗಿ ಸಮಿತಿ ರಚಿಸಲಾಗುವುದು.
  5. ವಾರ್ಡ್‌ಗೆ ಒಂದರಂತೆ 198 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
  6. ಯಾವುದೇ ತಾರತಮ್ಯ ಮಾಡದಂತೆ ಎಲ್ಲಾ ಜಾತಿ ಧರ್ಮಕ್ಕೂ ಪ್ರಶಸ್ತಿ ಸಿಗುವಂತೆ ಆಯ್ಕೆ ಮಾಡಬೇಕು.
  7. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಬೇಕು.
  8. 9ರಂದು ಈ ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಯಾಗಬೇಕು.
  9. ರಾಜ್ಯ ಸರ್ಕಾರ ಮೂವರು ಸಾಧಕರಿಗೆ ಪ್ರಶಸ್ತಿ ನೀಡಲಿದ್ದು, ಇದರ ಆಯ್ಕೆ ಜವಾಬ್ದಾರಿ ಕಾಂಗ್ರೆಸ್‌ ಮುಖಂಡ ಬಿ ಎಲ್‌ ಶಂಕರ್‌ ಅವರದ್ದಾಗಿರುತ್ತದೆ.
  10. ಐದು ಗೋಪುರಗಳಿಂದ ವಿಧಾನಸೌಧಕ್ಕೆ ಕೆಂಪೇಗೌಡ ಜ್ಯೋತಿ ಆಗಮಿಸಲಿದೆ.ಇದಕ್ಕೆ ಸಚಿವರು ಚಾಲನೆ ನೀಡಲಿದ್ದಾರೆ, ಈ ಕಾರ್ಯಕ್ರಮದ ಜವಾಬ್ಧಾರಿ ಪಾಲಿಕೆಯದ್ದಾಗಿರುತ್ತದೆ.

ಇಂದಿನ ಪೂರ್ವಭಾವಿ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌, ಸಚಿವರಾದ ಕೃಷ್ಣ ಭೈರೇಗೌಡ, ರಾಮಲಿಂಗಾರೆಡ್ಡಿ, ಮಾಗಡಿ ಶಾಸಕರಾದ ಬಾಲಕೃಷ್ಣಾ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುಳಾ, ರಾಜೇಂದ್ರ ಕುಮಾರ್ ಕಠಾರಿಯಾ, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...